6.1

श्रीभगवानुवाच ।
अनाश्रितः कर्मफलं कार्यं कर्म करोति यः ।
स संन्यासी च योगी च न निरग्निर्न चाक्रियः ॥
śrībhagavānuvāca |
anāśritaḥ karmaphalaṃ kāryaṃ karma karoti yaḥ |
sa saṃnyāsī ca yogī ca na niragnirna cākriyaḥ ||
Sri Madhvacharya (1238–1317)Bhagavad Gita Tatparya Nirnaya
‘स ब्रह्मनिष्ठस्तु यतिर्महात्मा शारीरमग्निं च मुखे जुहोति’ इत्यादेर्न यतेरप्यनग्नित्वम्। आत्मसमारोपणाच्च॥
Swami Sivananda (1887–1963)Bhagavad Gita
1. He who performs his bounden duty without depending on the fruits of his actions—he is a Sannyasin and a Yogi, not he who is without fire and without action.
Bannanje Govindacharya (1936–2020)Bhagavad Gita Pravachana
ಭಗವಾನ್‌ ಉವಾಚ- ಭಗವಂತ ಹೇಳಿದನು: ಅನಾಶ್ರಿತಃ ಕರ್ಮಫಲಮ್‌ ಕಾರ್ಯಮ್‌ ಕರ್ಮ ಕರೋತಿ ಯಃ | ಸಃ ಸಂನ್ಯಾಸೀ ಚ ಯೋಗೀ ಚನನಿಃ ಅಗ್ನಿಃ ನ ಚ ಅಕ್ರಿಯಃ -ಕರ್ಮದ ಫಲ ನ್ಯಾಸ ಮಾಡಿ, ಕರ್ತವ್ಯವನ್ನು ಮಾಡುತ್ತಿರುವವನೇ ನಿಜವಾದ ಸಂನ್ಯಾಸಿ ಮತ್ತು ನಿಜವಾದ ಯೋಗಿ. ಬೆಂಕಿಯಲ್ಲಿ ಹೋಮಿಸದೇ ಇರುವವನಲ್ಲ, ಕರ್ಮವನ್ನು ತೊರೆದವನೂ ಅಲ್ಲ. ಸಾಮಾನ್ಯವಾಗಿ ನಾವು ಕರ್ಮಯೋಗಿಗಳು ಬೇರೆ ಮತ್ತು ಸಂನ್ಯಾಸಿಗಳು ಬೇರೆ ಎಂದು ಎರಡು ಗುಂಪು ಮಾಡುತ್ತೇವೆ. ಇಲ್ಲಿ ಕೃಷ್ಣ ಯಾರು ಸಂನ್ಯಾಸಿಗಳು, ಯಾರು ಕರ್ಮಯೋಗಿಗಳು ಎನ್ನುವ ಲೋಕದ ಕಲ್ಪನೆಗಿಂತ ಭಿನ್ನ ವಾದ ವಿವರವನ್ನು ಈ ಶ್ಲೋಕದಲ್ಲಿ ನಮ್ಮ ಮುಂದಿಟ್ಟಿದ್ದಾನೆ. ಕೃಷ್ಣ ಹೇಳುತ್ತಾನೆ: “ಅನಾಶ್ರಿತಃ ಕರ್ಮಫಲಂ” ಎಂದು. ನಾವು ಸಾಮಾನ್ಯವಾಗಿ ಕರ್ಮತ್ಯಾಗ ಮಾಡಿದವರು ಸಂನ್ಯಾಸಿಗಳು, ಕರ್ಮ ಮಾಡುವವರು ಗೃಹಸ್ಥರೆಂದು ಭಾವಿಸುತ್ತೇವೆ. ಆದರೆ ಕೃಷ್ಣ ಹೇಳುತ್ತಾನೆ ಪ್ರತಿಯೊಬ್ಬರೂ ಕರ್ಮಯೋಗಿಗಳಾಗಬೇಕು ಮತ್ತು ಪ್ರತಿಯೊಬ್ಬರೂ ಸಂನ್ಯಾಸಿಗಳಾಗಬೇಕು ಎಂದು. ಇದು ಒಂದನ್ನು ಬಿಟ್ಟು ಒಂದು ಇರತಕ್ಕಂತದ್ದಲ್ಲ. ಸಂನ್ಯಾಸಿ ಎಂದರೆ ನಾವು ಮಾಡಿದ್ದನ್ನೆಲ್ಲಾ ಭಗವಂತನಿಗೆ ಅರ್ಪಿಸುವುದೇ ಹೊರತು ಏನೂ ಮಾಡದೇ ಇರುವುದಲ್ಲ. ಸಮಸ್ತ(ಸಂ) ಕರ್ಮವನ್ನು ಭಗವಂತನಿಗೆ ಅರ್ಪಿಸುವುದು “ಸಂ-ನ್ಯಾಸ'. ಇಲ್ಲಿ ಬಹಳ ಮುಖ್ಯವಾದ ವಿಷಯ ಎಂದರೆ ಕರ್ಮದ ಫಲದ ಬಯಕೆಯನ್ನು ಸಂಪೂರ್ಣನಾದ ಭಗವಂತನ ಹೃದಯದಲ್ಲಿ ನೆಲೆಗೊಳಿಸುವುದು. ಸಂನ್ಯಾಸ ಎಂದರೆ ತನ್ನ ಕುಟುಂಬವನ್ನು ತೊರೆದು ಕಾಡಿಗೆ ಹೋಗುವುದಲ್ಲ. ಕರ್ಮಯೋಗ ಮಾಡಲೇ ಬೇಕು. “ಕಾರ್ಯಂ ಕರ್ಮ ಕರೋತಿ ಯಃ” ಯಾರ್ಯಾರಿಗೆ ಯಾವುದ್ಯಾವುದು ಕಾರ್ಯವೋ ಅವರವರು ಅದನ್ನದನ್ನು ಮಾಡಲೇಬೇಕು. ಈ ಕಾರಣಕ್ಕಾಗಿ ಸಂನ್ಯಾಸ ಮತ್ತು ಕರ್ಮಯೋಗ ಎರಡೂ ಒಟ್ಟೊಟ್ಟಿಗಿರುವುದು. ನಿಜವಾದ ಸಂನ್ಯಾಸಿ ಕರ್ಮಯೋಗಿಯಾಗಿರುತ್ತಾನೆ, ಮತ್ತು ನಿಜವಾದ ಕರ್ಮಯೋಗಿ ಸಂನ್ಯಾಸಿಯಾಗಿರುತ್ತಾನೆ. ಇದಲ್ಲದೆ ನಾವು ತಿಳಿದಂತೆ ಕೇವಲ ಅಗ್ನಿಯನ್ನು ತ್ಯಾಗ ಮಾಡಿದವರು, ಕರ್ಮವನ್ನು ತ್ಯಾಗ ಮಾಡಿದವರು ಸಂನ್ಯಾಸಿಗಳು ಅಥವಾ ಯೋಗಿಗಳಲ್ಲ. ಸಂನ್ಯಾಸಿ ಎಂದೂ ನಿಷ್ಕ್ರೀಯ ಅಲ್ಲ. ಪ್ರತಿಯೊಬ್ಬರಿಗೂ ಅವರದ್ದೇ ಆದ ಕ್ರಿಯೆ ಇರುತ್ತದೆ. ಬ್ರಹ್ಮಚಾರಿಯಾದವನು ಅಧ್ಯಯನ, ಗುರುಕುಲವಾಸ, ಗುರು ಶುಶ್ರೂಷೆ, ಇತ್ಯಾದಿ ಕಾರ್ಯ ಮಾಡಿದರೆ, ಗ್ರಹಸ್ಥ ಅತಿಥಿ ಸತ್ಕಾರ, ಸಂಸಾರ ಪಾಲನೆ ಇತ್ಯಾದಿ ಕಾರ್ಯವನ್ನು ಮಾಡುತ್ತಾನೆ. ಹೀಗಾಗಿ ಎಲ್ಲರಿಗೂ ಕರ್ಮವಿದೆ.
Bibek Debroy (1955–2024)The Bhagavad Gita
(1) Bhagavan1 said: ‘An ascetic2 and a yogi is he who performs prescribed action without attachment to the fruits of the action, not someone who gives up sacrifices3 and action.’