समं कायशिरोग्रीवं धारयन्नचलं स्थिरः ।
सम्प्रेक्ष्य नासिकाग्रं स्वं दिशश्चानवलोकयन् ॥
samaṃ kāyaśirogrīvaṃ dhārayannacalaṃ sthiraḥ |
samprekṣya nāsikāgraṃ svaṃ diśaścānavalokayan ||
Swami Sivananda (1887–1963)Bhagavad Gita
13. Let him firmly hold his body, head and neck erect and perfectly still, gazing at the tip of
his nose, without looking around.
Bannanje Govindacharya (1936–2020)Bhagavad Gita Pravachana
ಸಮಂ ಕಾಯಶಿರೋಗ್ರೀವಂ ಧಾರಯನ್ನಚಲಂ ಸ್ಥಿರಃ |
ಸಂಪ್ರೇಕ್ಷ್ಯ ನಾಸಿಕಾಗ್ರಂ ಸ್ವಂ ದಿಶಶ್ವಾನವಲೋಕಯನ್ ॥೧೩॥
6.13–6.14
ಸಮಮ್ ಕಾಯ ಶಿರಃ ಗ್ರೀವಮ್ ಧಾರಯನ್ ಅಚಲಮ್ ಸ್ಥಿರಃ |
ಸಂಪ್ರೇಕ್ಷ್ಯ ನಾಸಿಕಾ ಅಗ್ರಮ್ ಸ್ವಮ್ ದಿಶಃ ಚ ಅನವಲೋಕಯನ್ ||
ಪ್ರಶಾಂತ ಆತ್ಮಾ ವಿಗತ Yes ಬ್ರಹ್ಮಚಾರಿವು್ರತೇ ಸ್ಥಿತಃ |
ಮನಃ ಸಂಯಮ್ಯ ಮತ್ ಚಿತ್ತಃ ಯುಕ್ತಃ ಆಸೀತ ಮತ್ ಪರಃ -- ಬೆನ್ನು-ತಲೆ-ಕತ್ತನ್ನು ನೆಟ್ಟಗೆ ನಿಲ್ಲಿಸಿ, ನಲುಗದೇ
ಗಟ್ಟಿಯಾಗಿ ಕುಳಿತು, ಅತ್ತಿತ್ತ ನೋಡದೇ ತನ್ನ ಮೂಗಿನ ತುದಿಯಲ್ಲೇ ನೋಟವಿಟ್ಟು, ಬಗೆಯನ್ನು ವಿಷಯಗಳತ್ತ
ಹರಿಯಗೊಡದೆ ಹದಗೊಳಿಸಿ, ಅಂಜದೆ, ಬ್ರಹ್ಮಚರ್ಯದಲ್ಲಿದ್ದು, ನನ್ನನ್ನೇ ಪರದೈವವೆಂದು ನಂಬಿ, ನನ್ನನ್ನೇ
ನೆನೆಯುತ್ತಾ ಸಮಾಧಿಯನ್ನು ಸಾಧಿಸಬೇಕು.
ಧ್ಯಾನಕ್ಕೆ ಕುಳಿತಾಗ ಸೊಂಟದಿಂದ ಮೇಲಿನ ನಮ್ಮ ಶರೀರ ನೆಟ್ಟಗೆ ಸರಳರೇಖೆಯಲ್ಲಿರಬೇಕು. ಬೆನ್ನು
ಬಗ್ಗಿರಕೂಡಾದು, ಕುತ್ತಿಗೆ, ತಲೆ. ವಾಲಿರಬಾರದು. ದೇಹವನ್ನು ನಿಶ್ಚಲಗೊಳಿಸಬೇಕು. ಸ್ವಲ್ಪವೂ
ಅಲ್ಲಡಿಸಬಾರದು. ಈ ರೀತಿ ಕುಳಿತುಕೊಳ್ಳದೇ ಮನಸ್ಸಿನ ಸ್ಥಿರತೆ ಅಸಾಧ್ಯ. ಮನಸ್ಸು ಈ ದೇಹವೆಂಬ
ಪಾತ್ರೆಯೊಳಗಿನ ನೀರಿನಂತೆ. ಪಾತ್ರೆ ಅಲ್ಲಾಡಿದರೆ ಮನಸ್ಸೆಂಬ ನೀರಿನಲ್ಲಿ ಅಲೆಗಳು ಮೂಡುತ್ತವೆ. ಇದರಿಂದ
ಏಕಾಗ್ರತೆಗೆ ಭಂಗವಾಗುತ್ತದೆ.
ದೇಹದಲ್ಲಿ ಇನ್ನೊಂದು ಪ್ರಮುಖ ಅಂಗ ಕಣ್ಣು. ದೇಹವನ್ನು ಸ್ಥಿರಗೊಳಿಸಿದ ಮೇಲೆ ಕಣ್ಣನ್ನು ಸ್ಥಿರಗೊಳಿಸಬೇಕು.
ಮೂಗಿನ ತುದಿಯಲ್ಲಿ ದೃಷ್ಟಿಯನ್ನು ನೆಟ್ಟು ಯಾವ ದಿಕ್ಕಿನ ಯಾವ ಆಕೃತಿಯೂ ಕಾಣದಂತೆ ನೇರವಾಗಿ ಒಂದೇ
ಕಡೆ ದೃಷ್ಟಿ ಸ್ಥಿರಗೊಳಿಸಬೇಕು.(ಕಣ್ಣನ್ನು ಮುಚ್ಚಿ ಧ್ಯಾನ ಮಾಡಬಹುದು, ಆದರೆ ಕಣ್ಣನ್ನು ಮುಚ್ಚಿದರೆ ನಿದ್ದೆ
ಮಾಡುವ ಸಾಧ್ಯತೆ ಹೆಚ್ಚು).
ಈ ರೀತಿ ಧ್ಯಾನದ ಸ್ಥಿತಿಯನ್ನು ತಲುಪಿದಾಗ ಮನಸ್ಸು ಪ್ರಶಾಂತವಾಗುತ್ತದೆ. ಯಾವ ಗೊಂದಲವೂ ಇಲ್ಲದ
ಹೇಳಲಾಗದ ವಿಚಿತ್ರ ಆನಂದದಸ್ಥಿತಿಯನ್ನು ನಾವು ಈ ಸ್ಥಿತಿಯಲ್ಲಿ ಅನುಭವಿಸುತ್ತೇವೆ. ಇದರಿಂದ ನಮಗೆ ಎಲ್ಲಾ
ಭಯವೂ ಹೊರಟು ಹೋಗುತ್ತದೆ. ಧ್ಯಾನಕ್ಕೆ ಅತಿಮುಖ್ಯವಾಗಿ ಬೇಕಾದ ಇನ್ನೊಂದು ಅಂಶ ಬ್ರಹ್ಮಚರ್ಯ
ಪಾಲನೆ. ಇಲ್ಲಿ ಬ್ರಹ್ಮಚರ್ಯ ಎನ್ನುವ ಪದಕ್ಕೆ ಮೂರು ಅರ್ಥವಿದೆ. ಪರಬ್ರಹ್ಮನ ಕಡೆಗೆ ಹೋಗುವ ಧೀಕ್ಷೆ-
ಬ್ರಹ್ಮಚರ್ಯ; ನಿರಂತರ ವೇದಾಧ್ಯಯನ-ಬ್ರಹ್ಮಚರ್ಯ; ಸಂಸಾರಿಗಳಾದವರು ನಿಯಮಿತ ಲೈಂಗಿಕತೆ
ಪಾಲಿಸುವುದು [ಅತಿ ಸುಲಭವಾಗಿ ಲೈಂಗಿಕತೆಯಿಂದ ದೂರ ಸರಿದು ನಿಲ್ಲುವ ಕ್ಷಮತೆ ಹಾಗೂ ನಿಯಮಿತ
ಲೈಂಗಿಕತೆ] ಹಾಗೂ ವಿರಕ್ತಿಗಳ(ನೈಷ್ಠಿಕ ಬ್ರಹ್ಮಚಾರಿ) ಲೈಂಗಿಕ ಮುಕ್ತ ಜೀವನ-ಬ್ರಹ್ಮಚರ್ಯ. ಭಗವಂತನೇ
ಸರ್ವೋತ್ತಮ ಎನ್ನುವ ಅಚಲವಾದ ಭಕ್ತಿಯಿಂದ, ಭಗವಂತನಲ್ಲಿ ಸಂಪೂರ್ಣ ಭರವಸೆಯನ್ನಿಟ್ಟು ಸದಾ
ಭಗವಂತನನ್ನು ನೆನೆಯುತ್ತಾ, ಎಂದೂ ಎದೆಗುಂದದೆ ಸಮಾಧಿಯನ್ನು ಸಾಧಿಸಬೇಕು.
ಧ್ಯಾನದ ಪರಿಣಾಮವೇನು? ನಾವು ಏಕೆ ಧ್ಯಾನ ಮಾಡಬೇಕು? ಉತ್ತರ ಮುಂದಿನ ಶ್ಲೋಕ!
ಮುಂದಿನ ಶ್ಲೋಕವನ್ನು ವಿಶ್ಲೇಷಿಸುವ ಮೊದಲು ಇಲ್ಲಿ ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಒಂದು
ಸರ್ವೇಸಾಮಾನ್ಯ ಪ್ರಶ್ನೆಯನ್ನು ವಿಶ್ಲೇಷಿಸೋಣ. ಯುದ್ಧರಂಗದಲ್ಲಿ ನಿಂತ ಅರ್ಜುನನಿಗೆ ಕೃಷ್ಣ ಭಗವದ್ಗೀತೆ
ಉಪದೇಶ ಮಾಡಿದ. ಹೀಗಿರುವಾಗ ಆತ ಧ್ಯಾನದ ಬಗ್ಗೆ, ಧ್ಯಾನ ಸಮಾಧಿಯ ಬಗ್ಗೆ, ಧ್ಯಾನಕ್ಕೆ ಕುಳಿತುಕೊಳ್ಳುವ
ವಿಧಾನದ ಬಗ್ಗೆ ಏಕೆ ಪ್ರಸ್ತಾಪಿಸಿದ? ಇದರ ಅಗತ್ಯವೇನಿತ್ತು? ಇದು ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಪ್ರಶ್ನೆ.
ನಿಜವಾಗಿ ನೋಡಿದರೆ ಅರ್ಜುನನಿಗೆ ಈ ಪ್ರಶ್ನೆಗಳಿರಲಿಲ್ಲ, ಅರ್ಜುನನ ಪ್ರಶ್ನೆಯೇ ಬೇರೆ. ಆ ಪ್ರಶ್ನೆಗೆ ಉತ್ತರ
ಕೊಡುವಾಗ ಧ್ಯಾನದ ಪ್ರಶ್ನೆ ಸಾಮಾನ್ಯವಾಗಿ ಬಂದಾಗ, ಕೃಷ್ಣ ಇಡೀ ನರಸಮುದಾಯಕ್ಕೆ ಸಹಾಯವಾಗುವಂತೆ
ಸಂಪೂರ್ಣ ಧ್ಯಾನದ ಪ್ರಕ್ರೀಯೆಯನ್ನು ವಿವರಿಸಿದ. ಕೃಷ್ಣ ಯುದ್ಧರಂಗದಲ್ಲಿ ಅದೆಷ್ಟು ಸೂಕ್ಷ್ಮವಾಗಿ ಅರ್ಜುನನಿಗೆ ಈ
ಬೋಧನೆ ಮಾಡಿದ್ದನೋ ನಮಗೆ ತಿಳಿಯದು. ಆದರೆ ವ್ಯಾಸ ಮಹರ್ಷಿಗಳು ಇದನ್ನು ಎಳೆ ಎಳೆಯಾಗಿ ಬಿಡಿಸಿ
ಒಂದು ಅಧ್ಯಾಯ ರೂಪದಲ್ಲಿ ನಮಗೆ ಉಣಬಡಿಸಿದ್ದಾರೆ. ಭಗವದ್ಗೀತೆಯನ್ನು ಅರ್ಜುನನಿಗೆ ಉಪದೇಶ
ಮಾಡುವಾಗ ಕೃಷ್ಣನ ಮುಂದಿದ್ದದ್ದು ಕೇವಲ ಅರ್ಜುನ ಮಾತ್ರವಲ್ಲ; ಸಮಸ್ತ ಸಾತ್ವಿಕ ನರ ಸಮುದಾಯ. ಸರ್ವ
ಸಾತ್ವಿಕರಿಗೂ ಸತ್ಯದ ದಾರಿಯನ್ನು ತೋರಿಸುವ ಉದ್ದೇಶದಿಂದ ಗೀತೆಯ ಉಪದೇಶವಾಯಿತು. ಇದೇ ಮೂಲ
ಉದ್ದೇಶದಿಂದ ಶ್ರೀಕೃಷ್ಣ ಗೀತೆಯನ್ನು ಇನ್ನೊಮ್ಮೆ ಉದ್ದವನಿಗೆ ಉಪದೇಶ ಮಾಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.
Bibek Debroy (1955–2024)The Bhagavad Gita
(13)
‘Still, body, head and neck erect and unmoving, gazing at the tip of the
nose21 and not looking in any other direction.’