युञ्जन्नेवं सदात्मानं योगी नियतमानसः ।
शान्तिं निर्वाणपरमां मत्संस्थामधिगच्छति ॥
yuñjannevaṃ sadātmānaṃ yogī niyatamānasaḥ |
śāntiṃ nirvāṇaparamāṃ matsaṃsthāmadhigacchati ||
Swami Sivananda (1887–1963)Bhagavad Gita
15. Thus, always keeping the mind balanced, the Yogi, with the mind controlled, attains to
the peace abiding in Me, which culminates in liberation.
Bannanje Govindacharya (1936–2020)Bhagavad Gita Pravachana
ಯುಂಜನ್ ಏವಮ್ ಸದಾ ಆತ್ಮಾನಮ್ ಯೋಗೀ ನಿಯತ ಮಾನಸಃ |
ಶಾಂತಿಮ್ ನಿರ್ಬಾಣ ಪರಮಾಮ್ ಮತ್ ಸಂಸ್ಥಾಮ್ ಅಧಿಗಚ್ಛತಿ -- ಹೀಗೆ ಭಗವಂತನನ್ನು ಸದಾ
ಧ್ಯಾನಿಸುತ್ತಾ, ಬಗೆಯನ್ನು ಬಿಗಿ ಹಿಡಿದ ಸಾಧಕನು ದೇಹ ತೊರೆದ ಮೇಲೆ ನನ್ನಲ್ಲೇ ನೆಲೆಸುವಂತಹ ಸುಖವನ್ನು
ಅನುಭವಿಸುತ್ತಾನೆ.
ಈ ಅಧ್ಯಾಯದಲ್ಲಿ ಈವರೆಗೆ ಕೃಷ್ಣ ವಿವರಿಸಿದ್ದು ಮನಸ್ಸಿನಿಂದ ಮಾಡುವ ಧ್ಯಾನ. ಬಾಹ್ಯ ಇಂದ್ರಿಯವನ್ನು
ಸ್ಥಬ್ಧಗೊಳಿಸಿ, ಚಿತ್ತ ಮತ್ತು ಮನಸ್ಸನ್ನು ನಿಯಂತ್ರಿಸಿ ಮಾಡುವುದು ಧ್ಯಾನ. ಇದರಿಂದಾಚೆಗಿರುವುದು
"ತುರಿಯಾವಸ್ಥೆ'. ನಮ್ಮ ಮನಸ್ಸನ್ನು ಸಂಪೂರ್ಣ ಸ್ಥಬ್ಧಗೊಳಿಸಿ ಆತ್ಮಸ್ವರೂಪಭೂತವಾದ ಜೀವ ನೇರವಾಗಿ
ಭಗವಂತನನ್ನು ನೋಡುವ ಸ್ಥಿತಿ ತುರಿಯಾವಸ್ಥೆ. ಈ ಶ್ಲೋಕದಲ್ಲಿ ಕೃಷ್ಣ ತುರಿಯಾವಸ್ಥೆಯ ಸುಳಿವು ಕೊಡುತ್ತಾನೆ.
ಈ ವಿಚಾರ ಇಲ್ಲಿ ನಿಗೂಢವಾಗಿ ಅಡಗಿದೆ.
ಧ್ಯಾನದಲ್ಲಿ ನಾವು ಕಾಣುವುದು ನೇರ ಭಗವಂತನನ್ನಲ್ಲ ಬದಲಿಗೆ ಭಗವಂತನ ಪ್ರತೀಕವನ್ನು. ಏಕೆಂದರೆ ಮನಸ್ಸು
ನೇರವಾಗಿ ಜ್ಞಾನಾನಂದಸ್ವರೂಪಭೂತನಾದ ಭಗವಂತನನ್ನು ಗ್ರಹಿಸಲಾರದು. ಭಗವಂತನ ನೇರ
ದರ್ಶನವಾಗಬೇಕಾದರೆ, ಧ್ಯಾನದಿಂದಾಚೆಗಿನ ತುರಿಯಾವಸ್ಥೆಗೆ ಹೋಗಬೇಕು. ಜೀವಸ್ವರೂಪದ ಕಣ್ಣಿನಿಂದ
ಭಗವಂತನನ್ನು ಕಾಣಬೇಕು. ಮನಸ್ಸನ್ನು ನಿರಂತರವಾಗಿ ಭಗವಂತನಲ್ಲಿ ನೆಲೆಗೊಳಿಸಿ, ಮನಸ್ಸಿನ ಮೂಲಕ
ಧ್ಯಾನದಲ್ಲಿ ಭಗವಂತನ ಮಾನಸ ರೂಪ ಗೋಚರವಾದ ಮೇಲೆ ಮನಸ್ಸನ್ನು ಸ್ಥಬ್ಧಗೊಳಿಸಬೇಕು. ಆಗ
ತುರಿಯಾವಸ್ಥೆ ಜಾಗೃತವಾಗುತ್ತದೆ. ಈ ಹಂತದಲ್ಲಿ ಆತ್ಮ ಸ್ವರೂಪಕ್ಕೆ ಭಗವಂತನ ಸಂಯೋಗವಾಗುತ್ತದೆ. ಆಗ
ಅದು ನೇರವಾಗಿ ಭಗವಂತನನ್ನು ಕಾಣಬಲ್ಲದು. ಈ ಸ್ಥಿತಿಯನ್ನು ತಲುಪಿದ ಧ್ಯಾನಯೋಗಿ ನಿಜವಾದ ಯೋಗಿ
ಎನಿಸುತ್ತಾನೆ.
ಒಂದು ಜೀವ ತನ್ನ ಸಾಧನೆಯ ಹಾದಿಯಲ್ಲಿ ಪಡೆಯಬಹುದಾದ ಅತ್ಯಂತ ಮಹತ್ತರವಾದ ಆನಂದದ ಪರಾಕಾಷ್ಠೆ-
ಭಗವಂತನ ಸಾಕ್ಷಾತ್ಕಾರ. ಇದಕ್ಕಿಂತ ಮಿಗಿಲಾದ ಅರಿವು, ಆನಂದದ ದರ್ಶನ ಇನ್ನೊಂದಿಲ್ಲ. ಈ ರೀತಿ
ಭಗವಂತನ ಸಾಕ್ಷಾತ್ಮಾರವಾದವನು ಮುಂದೆಂದೂ ಈ ಸಂಸಾರ ಬಂಧದಲ್ಲಿ ಸಿಲುಕುವುದಿಲ್ಲ. ಆತ
ಭಗವಂತನಲ್ಲೇ ನೆಲೆಸಿ ಮೋಕ್ಷವನ್ನು ಪಡೆಯುತ್ತಾನೆ.
ಸಮಾಧಿಯನ್ನು ಅಭ್ಯಾಸ ಮಾಡುವವರ ಜೀವನಕ್ರಮ ಹೇಗಿರಬೇಕು ಎನ್ನುವುದನ್ನು ಕೃಷ್ಣ ಮುಂದೆ
ವಿವರಿಸುತ್ತಾನೆ. ಈ ಜೀವನಕ್ರಮ ಕೇವಲ ಧ್ಯಾನಕ್ಕೆ ಮಾತ್ರ ಪೂರಕವಲ್ಲ. ನಮ್ಮ ಅಧ್ಯಯನಕ್ಕೆ, ನಮ್ಮ
ಆರೋಗ್ಯ ಜೀವನಕ್ಕೆ ಈ ಶಿಸ್ತು ಬಹಳ ಮುಖ್ಯ. ನಮ್ಮ ಪ್ರತಿಯೊಂದು ಅನುಷ್ಠಾನವನ್ನು ಶಾಸ್ತ್ರಕಾರರು
ಇದಕ್ಕನುಗುಣವಾಗಿಯೇ ವಿನ್ಯಾಸ ಮಾಡಿದ್ದಾರೆ. ಆದರೆ ಇಂದು ನಮಗೆ ಈ ಐಎಚ್ಚರವಿಲ್ಲ. ಏಕಾದಶಿ
ಉಪವಾಸವಿರಲಿ, ಇನ್ಯಾವುದೇ ಅನುಷ್ಠಾನವಿರಲಿ, ಅದನ್ನು ಧ್ಯಾನಕ್ಕೆ ಪೂರಕವಾಗಿ ಪಾಲಿಸಬೇಕು. ಈ
ಜ್ಞಾನವಿಲ್ಲದೆ. ಕೇವಲ ಯಾಂತ್ರಿಕವಾಗಿ. ಪಾಲಿಸುವ ಯಾವ ಅನುಷ್ಠಾನವೂ ನಮ್ಮನ್ನು ಎತ್ತರಕ್ಕೆ
ಕೊಂಡೊಯ್ಯಲಾರದು.
Bibek Debroy (1955–2024)The Bhagavad Gita
(15)
‘In this way, the yogi will always pacify the atman and be unwavering in his
mind, and established in me, will attain supreme and peaceful liberation.’