6.2

यं संन्यासमिति प्राहुर्योगं तं विद्धि पाण्डव ।
न ह्यसंन्यस्तसङ्कल्पो योगी भवति कश्चन ॥
yaṃ saṃnyāsamiti prāhuryogaṃ taṃ viddhi pāṇḍava |
na hyasaṃnyastasaṅkalpo yogī bhavati kaścana ||
Sri Madhvacharya (1238–1317)Bhagavad Gita Tatparya Nirnaya
योग विशेष एव सन्न्यास इत्यर्थः॥02॥
Swami Sivananda (1887–1963)Bhagavad Gita
2. Do thou, O Arjuna, know Yoga to be that which they call renunciation; no one verily becomes a Yogi who has not renounced thoughts! COMMENTARY: Lord Krishna eulogises Karma Yoga here because it is a means or a stepping stone to the Yoga of meditation. In order to encourage the practice of Karma Yoga it is stated here that it is Sannyasa.
Bannanje Govindacharya (1936–2020)Bhagavad Gita Pravachana
ಯಮ್‌ ಸಂನ್ಯಾಸಮ್‌ ಇತಿ ಪ್ರಾಹುಃ ಯೋಗಮ್‌ ತಮ್‌ ವಿದ್ಧಿ ಪಾಂಡವ | ನಹಿ ಅಸಂನ್ಯಸ್ತ ಸಂಕಲ್ಪಃ ಯೋಗೀ ಭವತಿ ಕಶ್ಚನ-ಯಾವುದನ್ನು ಸಂನ್ಯಾಸವೆನ್ನುವರೋ ಅದನ್ನೇ ಯೋಗವೆಂದು ತಿಳಿ ಪಾಂಡವಾ. ಬಯಕೆಗಳ 'ಸಂನ್ಯಾಸ' ಮಾಡದ ಯಾವನೂ ಮರ್ಮವರಿತ ಕರ್ಮಯೋಗಿಯಾಗಲಾರ. ಸಂನ್ಯಾಸ ಕೂಡಾ ಒಂದು ಯೋಗ. ಕರ್ಮ ಫಲತ್ಯಾಗ ಕೂಡಾ ಕರ್ಮ ಮಾಡತಕ್ಕ ಕರ್ಮಯೋಗಿಯ ಯೋಗದ ಒಂದು ಮುಖ. ಎಲ್ಲವನ್ನೂ ಭಗವಂತನಿಗೆ ಅರ್ಪಣೆ ಮಾಡಿ ಫಲಕಾಮನೆ ಇಲ್ಲದೆ ಭಗವದ್‌ ಪೂಜಾ ದೃಷ್ಟಿಯಿಂದ ಮಾಡುವಂತಹ ಕ್ರಿಯೆ ಸಾತ್ವಿಕರ ಸಾಧನೆ. ಸಂನ್ಯಾಸ ಎಂದರೆ ಕಾಮ-ಸಂಕಲ್ಪವನ್ನು ಭಗವಂತನಲ್ಲಿ ಅರ್ಪಿಸುವುದು. ಕಾಮ ಅಂದರೆ 'ಮಾಡಬೇಕು' ಎಂದು ಬಯಸುವುದು, ಸಂಕಲ್ಪ ಎಂದರೆ "ಮಾಡುತ್ತೇನೆ' ಎಂದು ನಿರ್ಧರಿಸುವುದು. ಕಾಮಸಂಕಲ್ಪ ವರ್ಜಿತ-ಸಂನ್ಯಾಸ. ಇಲ್ಲಿ ಕೃಷ್ಣ ವಿವರಿಸುತ್ತಿರುವುದು ಆಶ್ರಮಕ್ಕೆ(ಸಂನ್ಯಾಸಾಶ್ರಮ) ಸಂಬಂಧಪಟ್ಟ ವಿಚಾರವಲ್ಲ. ಇದು ಸಾಧನೆಗೆ ಸಂಬಂಧಪಟ್ಟ ವಿಚಾರ. ಸಾಧನೆಯ ಮುಖದಲ್ಲಿ ಯೋಗಿಗಳು ಸಂನ್ಯಾಸಿಗಳಾಗಬೇಕು ಮತ್ತು ಸಂನ್ಯಾಸಿಗಳು ಯೋಗಿಗಳಾಗಬೇಕು ಇದು ಕೃಷ್ಣನ ಸಂದೇಶ. ನಾವು ಸಾಧನೆ ಮಾಡುವಾಗ ಕರ್ಮವೂ ಇರಬೇಕು, ಫಲನ್ಯಾಸವೂ ಇರಬೇಕು. ಹೀಗಿರುವಾಗ ಎಲ್ಲರೂ ಮಾಡಬೇಕಾದ ಕರ್ಮ ಎಂದು ಯಾವುದಾದರೂ ಕರ್ಮವನ್ನು ಪರಿಗಣನೆ ಮಾಡಿದ್ದಾರೋ ? ಸಾಧಕನ ಸಾಮಾಜಿಕ ಕರ್ತವ್ಯ ಯಾವುದು? ಸಮಾಜದೊಂದಿಗೆ ಒಬ್ಬ ಸಾಧಕ ಹೇಗೆ ಸ್ಪಂದಿಸಬೇಕು? ಕರ್ಮದ ಕೊನೆ ಎಂದು? ಸಾಧನೆಗೂ ಕರ್ಮಕ್ಕೂ ಇರುವ ಹೊಂದಿಕೆ ಏನು? ಅದು ಹೇಗೆ ಸಾಧನೆಗೆ ಪೂರಕ? ಈ ಎಲ್ಲಾ ಪ್ರಶ್ನೆಗಳಿಗೆ ಕೃಷ್ಣ ಮುಂದಿನ ಶ್ಲೋಕದಲ್ಲಿ ಉತ್ತರ ಕೊಡುತ್ತಾನೆ.
Bibek Debroy (1955–2024)The Bhagavad Gita
(2) ‘O descendant of Pandu!4 What is known as asceticism, know that to be yoga. Because without giving up desire, no one can become a yogi.’