6.33

अर्जुन उवाच ।
योऽयं योगस्त्वया प्रोक्तः साम्येन मधुसूदन ।
एतस्याहं न पश्यामि चञ्चलत्वात्स्थितिं स्थिराम् ॥
arjuna uvāca |
yo'yaṃ yogastvayā proktaḥ sāmyena madhusūdana |
etasyāhaṃ na paśyāmi cañcalatvātsthitiṃ sthirām ||
Swami Sivananda (1887–1963)Bhagavad Gita
33. This Yoga of equanimity taught by Thee, O Krishna, I do not see its steady continuance, because of restlessness (of the mind)!
Bannanje Govindacharya (1936–2020)Bhagavad Gita Pravachana
ಅರ್ಜುನಃ ಉವಾಚ-ಅರ್ಜುನ ಕೇಳಿದನು: ಯಃ ಅಯಮ್‌ ಯೋಗಃ ತ್ವಯಾ ಪ್ರೋಕ್ತಃ ಸಾಮ್ಯೇನ ಮಧುಸೂದನ | ಏತಸ್ಯ ಅಹಮ್‌ ನ ಪಶ್ಯಾಮಿ ಚಂಚಲತ್ವಾತ್‌ ಸ್ಥಿತಿಮ್‌ ಸ್ಥಿರಾಮ್‌ -- ಮಧುಸೂದನಾ, ನೀನು ಸಮದೃಷ್ಟಿಯ ಧ್ಯಾನ ಯೋಗವನ್ನು ಹೇಳಿದೆ. ನನಗನಿಸುತ್ತದೆ: ಮನಸ್ಸು ಚಂಚಲವಾದ್ದರಿಂದ ಇದರಲ್ಲಿ ಗಟ್ಟಿಯಾಗಿ ನಿಲ್ಲುವುದು ಸಾಧ್ಯವಿಲ್ಲ. ಸಾತ್ವಿಕರಿಗೆ ಆನಂದವನ್ನು ಕೊಡುವ £ ಮಧುಸೂದನಾ' ಎಂದು ಅರ್ಜುನ ಶ್ರೀಕೃಷ್ಣನನ್ನು ಸಂಬೋಧಿಸಿ ಹೇಳುತ್ತಾನೆ: “ನೀನು ಸಂಗ್ರಹವಾಗಿ ಹೇಳಿದ ಈ ಧ್ಯಾನ ಪದ್ಧತಿಯನ್ನು ನಾವು ಅಳವಡಿಸಿಕೊಳ್ಳಲು ಹೇಗೆ ಸಾಧ್ಯ? ಧ್ಯಾನವೆಂಬುದು ಸಂಪೂರ್ಣ ಮಾನಸಿಕ ಪ್ರಕ್ರಿಯೆ. ಆದರೆ ನಮ್ಮ ಮನಸ್ಸು ಪ್ರಕ್ಷುಬ್ಧ ಮತ್ತು ಚಂಚಲ. ಇಂತಹ ಮನಸ್ಸನ್ನು ಹಿಡಿತದಲ್ಲಿಟ್ಟು ನೀನು ಹೇಳಿದ ಸ್ಥಿರವಾದ ಈ ಧ್ಯಾನಯೋಗವನ್ನು ಸಾಧಿಸುವುದು ಸಾಧ್ಯವಿಲ್ಲ” ಎನ್ನುತ್ತಾನೆ ಅರ್ಜುನ.
Bibek Debroy (1955–2024)The Bhagavad Gita
(33) Arjuna said: ‘O Madhusudana!34 Because of restlessness,35 I don’t see the yoga based on equality that you have propounded as permanent.’