6.42

अथवा योगिनामेव कुले भवति धीमताम् ।
एतद्धि दुर्लभतरं लोके जन्म यदीदृशम् ॥
athavā yogināmeva kule bhavati dhīmatām |
etaddhi durlabhataraṃ loke janma yadīdṛśam ||
Swami Sivananda (1887–1963)Bhagavad Gita
42. Or he is born in a family of even the wise Yogis; verily a birth like this is very difficult to obtain in this world.
Bannanje Govindacharya (1936–2020)Bhagavad Gita Pravachana
ಅಥವಾ ಯೋಗಿನಾಮ್‌ ಏವ ಕುಲೇ ಭವತಿ ಧೀಮತಾಮ್‌ | ಏತತ್‌ ಹಿ ದುರ್ಲಭ ತರಮ್‌ ಲೋಕೇ ಜನ್ಮ ಯತ್‌ ಈದೃಶಮ್‌.- ಅಥವಾ ಬಲ್ಲವರಾದ ಯೋಗಿಗಳ ಮನೆತನದಲ್ಲಿ ಹುಟ್ಟುತ್ತಾನೆ. ಲೋಕದಲ್ಲಿ ಈ ಬಗೆಯ ಹುಟ್ಟು ತುಂಬಾ ದುರ್ಲಭವಾದದ್ದು. ಮುಂದುವರಿದು ಕೃಷ್ಣ ಹೇಳುತ್ತಾನೆ: ಯೋಗಸಾಧಕರಲ್ಲದಿದ್ದರೆ, ಯೋಗ ಸಿದ್ಧರ ಮನೆಯಲ್ಲಿ ಆತ ಜನಿಸುತ್ತಾನೆ. ಇದರಿಂದ ಗರ್ಭದಿಂದಲೇ ಆತನಿಗೆ ಯೋಗದ ದೀಕ್ಷೆಯಾಗುತ್ತದೆ. ಹಿಂದಿನ ಜನ್ಮದಲ್ಲಿ ಆತ ಸಾಧನೆಯ ಯಾವ ಮೆಟ್ಟಿಲನ್ನು ಹತ್ತಿದ್ದನೋ ಆ ಮೆಟ್ಟಿಲನ್ನು ಸುಲಭವಾಗಿ ಆತ ತಲುಪಿ ಅಲ್ಲಿಂದ ಮುಂದಿನ ಸಾಧನೆ ಮಾಡುವ ಅವಕಾಶ ಅವನಿಗೆ ಸಿಗುತ್ತದೆ. ಇದು ಅಧ್ಯಾತ್ಮ ಸಾಧನೆಯಲ್ಲಿನ ವಿಶೇಷ. ಒಂದು ಜನ್ಮದಲ್ಲಿ ಎರಡು ಮೆಟ್ಟಿಲು ಹತ್ತಿದರೆ ಮುಂದಿನ ಜನ್ಮದಲ್ಲಿ ನೇರವಾಗಿ ಮೂರನೇ ಮೆಟ್ಟಿಲಿಗೆ ಹೆಜ್ಜೆ. ಈ ಕಾರಣದಿಂದ ಯಾವ ಸಾಧನೆಯೂ ವ್ಯರ್ಥವಲ್ಲ- ಈ ಬಗ್ಗೆ ಎಂದೂ ನಿರಾಶೆಪಡಬೇಕಾಗಿಲ್ಲ. ಈ ರೀತಿ ಪಕ್ವವಾದ ಜೀವ ಯೋಗಸಿದ್ಧರ ಮನೆಯಲ್ಲಿ ಹುಟ್ಟುವುದರಿಂದ ಆತನಿಗೆ ಅಲ್ಲಿ ಅನುವಂಶೀಯ ಸಾತ್ವಿಕ ಸೆಳೆತ (genetic forces) ಮತ್ತು ಅದಕ್ಕೆ ಬೇಕಾದ ವಾತಾವರಣ(೯£॥೪॥೦೧719೧831 10೯065) ಸಿಗುತ್ತದೆ. ಮತ್ತು ಆತ ಅಲ್ಲಿ ತನ್ನ ಸಾಧನೆಯನ್ನು ಮುಂದುವರಿಸುತ್ತಾನೆ. ಲೋಕದಲ್ಲಿ ಯೋಗಸಿದ್ಧರ ಮನೆಯಲ್ಲಿ ಹುಟ್ಟು ಬಹಳ ದುರ್ಲಭ. ಸಾಧನೆಯ ಹಾದಿಯಲ್ಲಿ ಎತ್ತರಕ್ಕೇರಿದವರಿಗೆ ಮಾತ್ರ ಈ ಭಾಗ್ಯ.
Bibek Debroy (1955–2024)The Bhagavad Gita
(42) ‘Or he is born in the family of wise yogis. But such birth is very rare in this world.’