6.45

प्रयत्नाद्यतमानस्तु योगी संशुद्धकिल्बिषः ।
अनेकजन्मसंसिद्धस्ततो याति परां गतिम् ॥
prayatnādyatamānastu yogī saṃśuddhakilbiṣaḥ |
anekajanmasaṃsiddhastato yāti parāṃ gatim ||
Swami Sivananda (1887–1963)Bhagavad Gita
45. But, the Yogi who strives with assiduity, purified of sins and perfected gradually through many births, reaches the highest goal.
Bannanje Govindacharya (1936–2020)Bhagavad Gita Pravachana
ಪ್ರಯತ್ನಾತ್‌ ಯತಮಾನಃ ಟು ಯೋಗೀ ಸಂಶುದ್ಧ ಕಿಲ್ಬಿಷಃ | ಅನೇಕ ಜನ್ಮಸಂಸಿದ್ಧಃ ತತಃ ಯಾತಿ ಪರಾಮ್‌ ಗತಿಮ್‌-- ಧ್ಯಾನದಲ್ಲಿ ತೊಡಗುವ ಸಾಧಕ ಪ್ರಯತ್ನದ ಫಲವಾಗಿ ಬಗೆಯ ಕಿಲುಬು ಕಳೆದುಕೊಂಡು ಅನೇಕ ಜನ್ಮಗಳ ಸಾಧನೆಯಿಂದ ಸಿದ್ಧಿ ಪಡೆದು ಹಿರಿಯ ನೆಲೆಯಾದ ಭಗವಂತನನ್ನು ಸೇರುತ್ತಾನೆ. ಹಿಂದೆ ಹೇಳಿದಂತೆ ನಮ್ಮ ಸಾಧನೆ ಅನೇಕ ಜನ್ಮಗಳದ್ದು. ಮೊದಲು ನಮ್ಮಲ್ಲಿ ಇಚ್ಛೆ ಹುಟ್ಟಿತು, ಅದರಿಂದ ಆ ಇಚ್ಛೆ ಪೂರ್ಣವಾಗುವ ವಾತವರಣವನ್ನು ಮುಂದಿನ ಜನ್ಮದಲ್ಲಿ ಭಗವಂತ ಕೊಟ್ಟ, ಅಲ್ಲಿ ಪ್ರಯತ್ನ ಮಾಡಿ ಒಳಗಿನ ಕೊಳೆ ತೊಳೆಯಿತು, ಸಾಧನೆಯಿಂದ ಸ್ವಚ್ಛವಾದ ಜ್ಞಾನ ಬಂತು. ಈ ಜ್ಞಾನ ಮತ್ತು ಸಾಧನೆಯಿಂದ ಅನೇಕ ಜನ್ಮಗಳ ನಂತರ ಶಬ್ದಬ್ರಹ್ಮನನ್ನು ಮೀರಿ ಭಗವಂತನನ್ನು ಕಾಣಲು ಸಾಧ್ಯ. ಹೀಗೆ ಅಂತರಂಗದಲ್ಲಿ ಉತ್ಕಟವಾದ ಕಳಕಳಿಯುಳ್ಳ ಜಿಜ್ಞಾಸು ಶಾಸ್ತ್ರ ಪಂಡಿತರನ್ನು ಮೀರಿ ಮೋಕ್ಷವನ್ನು ತಲುಪಬಲ್ಲ. ಸಾಧನೆಯಲ್ಲಿ ಬಹಳ ಮುಖ್ಯವಾದದ್ದು ಅಂತರಂಗ ಪ್ರಪಂಚದ ಸಾಧನೆ. ಹೊರಗಡೆ ಸ್ನಾನ, ಪೂಜೆ, ಹೋಮ, ಹವನ, ಏನೇ ಮಾಡಿದರೂ ಕೂಡಾ, ಅದಕ್ಕೆಂತ ಮಿಗಿಲಾದದ್ದು ಅಂತರಂಗ ಪ್ರಪಂಚ. ಇದನ್ನು ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ ಕೃಷ್ಣ.
Bibek Debroy (1955–2024)The Bhagavad Gita
(45) ‘Striving harder than on that earlier occasion, pure in heart, the yogi obtains liberation after many lives and, later, achieves the supreme objective.’