तपस्विभ्योऽधिको योगी ज्ञानिभ्योऽपि मतोऽधिकः ।
कर्मिभ्यश्चाधिको योगी तस्माद्योगी भवार्जुन ॥
tapasvibhyo'dhiko yogī jñānibhyo'pi mato'dhikaḥ |
karmibhyaścādhiko yogī tasmādyogī bhavārjuna ||
Swami Sivananda (1887–1963)Bhagavad Gita
46. The Yogi is thought to be superior to the ascetics and even superior to men of knowledge
(obtained through the study of scriptures); he is also superior to men of action; therefore, be thou a
Yogi, O Arjuna!
Bannanje Govindacharya (1936–2020)Bhagavad Gita Pravachana
3B
x ಅಧಿಕಃ ಯೋಗೀ ಜ್ಞಾನಿಭ್ಯಃ ಅಪಿ ಮತಃ ಅಧಿಕ; |
ಕರ್ಮಿಭ್ಯಃ ಚ ಅಧಿಕಃ ಯೋಗೀ ತಸ್ಮಾತ್ ಯೋಗೀ ಭವ ಅರ್ಜುನ- ಧ್ಯಾನ ಯೋಗದ ಸಾಧಕ ಉಪವಾಸ
ಮೊದಲಾದ ವ್ರತಸಾಧಕರಿಗಿಂತ ಮಿಗಿಲು; ಬರಿಯ ಧ್ಯಾನಯೋಗದ ಬಗೆಯನ್ನು ಬಲ್ಲವರಿಗಿಂತಲೂ ಮಿಗಿಲು
ಎನ್ನುವುದು ತೀರ್ಮಾನ. ಕರ್ಮ ಯೋಗಿಗಳಿಗಿಂತಲೂ ಮಿಗಿಲು. ಆದ್ದರಿಂದ ಓ ಅರ್ಜುನಾ, ನೀನು
ಧ್ಯಾನಯೋಗಿಯಾಗು.
ಯಾರು. ಅಂತರಂಗದಲ್ಲಿ ಏಕಾಗ್ರವಾಗಿ ಭಗವಂತನನ್ನು ಧ್ಯಾನಿಸಬಲ್ಲನೋ, ಅವನು ತಪಸ್ಸು
ಮಾಡುವವನಿಗಿಂತ ದೊಡ್ಡವ ಎನ್ನುತ್ತಾನೆ ಕೃಷ್ಣ. ಇಲ್ಲಿ ತಪಸ್ಸು ಎಂದರೆ ನಾವು ಮಾಡುವ ವೃತಾಚರಣೆ. ದೇಹ
ದಂಡನೆ, ಏಕಾದಶಿ ಉಪವಾಸ, ಬ್ರಹ್ಮಚರ್ಯಪಾಲನೆ ಇತ್ಯಾದಿ. ಬಾಹ್ಯವಾದ ನೂರಾರು ವೃತಾಚರಣೆ,
ಹೋಮ-ಹವನ ಮಾಡುವವರಿಗಿಂತಲೂ ಅಂತರಂಗದಲ್ಲಿ ಧ್ಯಾನ ಮಾಡತಕ್ಕವನು ಭಗವಂತನಿಗೆ ಹೆಚ್ಚು ಪ್ರಿಯ.
ಅವನು ಜ್ಞಾನಿಗಳಿಗಿಂತಲೂ ದೊಡ್ಡವನು ಎನ್ನುತ್ತಾನೆ ಕೃಷ್ಣ. ಅಂದರೆ ಧ್ಯಾನದ ಬಗ್ಗೆ, ಶಾಸ್ತ್ರದ ಬಗ್ಗೆ ಕೇವಲ
ತಿಳಿದಿರುವವರಿಗಿಂತ ಧ್ಯಾನ ಮಾಡುವವನು ದೊಡ್ಡವನು. ಇಂದು ಅಧ್ಯಾತ್ಮದ ಬಗ್ಗೆ ಮಾತನಾಡುವವರು
ಸಿಗುತ್ತಾರೆ, ಹೊರತು ನಿಜವಾದ ಧ್ಯಾನ ಯೋಗಿಗಳು ಸಿಗುವುದು ಅತೀ ವಿರಳ("7೧೦7ಅ are nowadays
professors of philosophy, but not philosophers”- Henry David Thoreau, Walden).
ನಮ್ಮಲ್ಲಿ ಕೆಲವರು ಕರ್ಮಟರು. ಯಜ್ಞ-ಯಾಗ ಮಾಡುವುದು, ಅಗ್ನಿ ಮುಖೇನ ಭಗವಂತನ ಆರಾಧನೆ
ಮಾಡುವವರು. ಅಂತರಂಗದಲ್ಲಿ ಭಗವಂತನನ್ನು ಕಾಣುವುದಕ್ಕೋಸ್ಕರ ಈ ಕರ್ಮ. ಇದೇ ರೀತಿ ಪ್ರತಿಮಾಪೂಜೆ.
ನಮ್ಮ ಪೂಜೆ ಕೇವಲ ದೇವರ ಪ್ರತಿಮೆಗೆ ಮೀಸಲಾಗದೇ ಅದು ಅಂತರಂಗದಲ್ಲಿ ಭಗವಂತನನ್ನು ಕಾಣಲು
ಸಹಾಯ ಮಾಡುವ ಸಂಕೇತ ಎನ್ನುವ ಜ್ಞಾನ ನಮಗಿರಬೇಕು. ಮಾನಸ ಪೂಜೆ ಇಲ್ಲದೇ ಬಾಹ್ಯ ಪೂಜೆ ಪೂಜೆಯೇ
ಅಲ್ಲ. ಆದ್ದರಿಂದ ಬರೇ ಕರ್ಮಟನಾಗಿ ಬಾಹ್ಯಪೂಜೆ ಮಾಡುವವನಿಗಿಂತ ಮಾನಸ ಪೂಜೆ ಮಾಡುವ
ಧ್ಯಾನಯೋಗಿ ದೊಡ್ಡವ. “ ಆದ್ದರಿಂದ ನೀನು ಜೀವನದಲ್ಲಿ ಧ್ಯಾನಯೋಗಿಯಾಗು, ಅಂತರಂಗದ ಧ್ಯಾನದಲ್ಲಿ
ತೊಡಗು. ಆ ಧ್ಯಾನದಲ್ಲಿ ತೊಡಗಿದ ಮೇಲೆ ನಿನ್ನ ಬಾಹ್ಯಕರ್ಮಗಳು ನಿನಗೆ ಲೇಪವಾಗುವುದಿಲ್ಲ. ಆಗ ಯುದ್ಧವೂ
ಕೂಡಾ ಭಗವದ್ ಪೂಜೆಯಾಗುತ್ತದೆ” ಎನ್ನುವುದು ಅರ್ಜುನನಿಗೆ ಕೃಷ್ಣನ ಸಂದೇಶ.
Bibek Debroy (1955–2024)The Bhagavad Gita
(46)
‘The yogi is superior to those who practise austerities, superior to the
learned52 and superior to those who perform action.53 That is my view. O
Arjuna! Therefore, become a yogi.’