ज्ञानविज्ञानतृप्तात्मा कूटस्थो विजितेन्द्रियः ।
युक्त इत्युच्यते योगी समलोष्टाश्मकाञ्चनः ॥
jñānavijñānatṛptātmā kūṭastho vijitendriyaḥ |
yukta ityucyate yogī samaloṣṭāśmakāñcanaḥ ||
Sri Madhvacharya (1238–1317)Bhagavad Gita Tatparya Nirnaya
‘सर्वत्र विष्णोरुत्कर्षज्ञानं ज्ञानमितीर्यते।
तद्विशेषपरिज्ञानं विज्ञानमिति गीयते’ इति च॥08॥
Swami Sivananda (1887–1963)Bhagavad Gita
8. The Yogi who is satisfied with the knowledge and the wisdom (of the Self), who has
conquered the senses, and to whom a clod of earth, a piece of stone and gold are the same, is said to
be harmonised (that is, is said to have attained the state of Nirvikalpa Samadhi).
Bannanje Govindacharya (1936–2020)Bhagavad Gita Pravachana
6.7–6.8
ಜಿತ ಆತ್ಮನಃ ಪ್ರಶಾಂತಸ್ಯ ಪರಮ ಆತ್ಮಾ ಸಮಾಹಿತಃ |
ಶೀತ ಉಷ್ಣ ಸುಖ ದುಃಖೇಷು ತಥಾ ಮಾನ ಅಪಮಾನಯೋಃ ॥
ಜ್ಞಾನ ವಿಜ್ಞಾನ ತೃಪ್ಪ ಆತ್ಮಾ BRIT: ವಿಜಿತ ಇಂದ್ರಿಯಃ
ಯುಕ್ತಃ ಇತಿ ಉಚ್ಯತೇ ಯೋಗೀ ಸಮಲೋಷ್ಟ ಅಶ್ಮ ಕಾಂಚನಃ -ಬಗೆಯನ್ನು[ಭಕ್ತಿಯಿಂದ ಭಗವಂತನನ್ನು]
ಗೆಲಿದವನ, ವಿಷಯಗಳತ್ತ ಸುಳಿಯದೇ ಭಗವಂತನಲ್ಲೇ ನಲಿದವನ ಬಗೆಯಲ್ಲಿ ಭಗವಂತ ನೆಲೆಗೊಳ್ಳುತ್ತಾನೆ.
ಅಂತವನು ತಂಪು-ಬಿಸಿ, ಸುಖ-ದುಃಖ ಮತ್ತು ಸಮ್ಮಾನ-ತಿರಸ್ಕಾರ ಇಂತಹ ದ್ವಂದ್ವಗಳಲ್ಲಿ ನಿರ್ವಿಕಾರನಾಗಿ
ನಿಲ್ಲಬಲ್ಲವನು; ಭಗವಂತನ ಅರಿವು ಕಾಣ್ಮೆಗಳಿಂದ ಬಗೆದುಂಬಿದವನು; ಇಂದ್ರಿಯಗಳನ್ನು ಹಿಡಿತದಲ್ಲಿಟ್ಟವನು.
ಅವನಿಗೆ ಮಣ್ಣು, ಕಲ್ಲು, ಚಿನ್ನ ಎಲ್ಲಾ ಒಂದೆ. ಇಂತಹ ಯೋಗ ಸಾಧಕನು ಗುರಿ ಸೇರಿದವನು ಎನಿಸುತ್ತಾನೆ.
ಭಕ್ತಿಯಿಂದ ಭಗವಂತನ ಅನುಗ್ರಹ ಪಡೆದಾಗ ಮೊದಲು ಮನಸ್ಸು ಆತನಲ್ಲಿ ನೆಲೆ ನಿಲ್ಲುತ್ತದೆ. ಮನಸ್ಸು ಎಂತಹ
ಪ್ರಸಂಗದಲ್ಲೂ ಉದ್ವೇಗಕ್ಕೊಳಗಾಗುವುದಿಲ್ಲ. “ಪರಮಾತ್ಮಾ ಸಮಾಹಿತಃ” -ಭಗವಂತ ಅವನ ಹೃದಯದಲ್ಲಿ
ಬಂದು ನೆಲೆಸಿ ಬಿಡುತ್ತಾನೆ. ನಾವು ಬಯಸಿದಾಗ ಆತನ ಅಂತಃದರ್ಶನ ಸಾಧ್ಯ. ಈ ರೀತಿ ಭಗವಂತನನ್ನು
ಕಾಣುವವರ ಅಪರೋಕ್ಷ ಜ್ಞಾನದ ಪರಿಣಾಮ ಏನು ಎನ್ನುವುದನ್ನು ಇಲ್ಲಿ ಮತ್ತೊಮ್ಮೆ ವಿವರಿಸುತ್ತಾನೆ ಕೃಷ್ಣ.
ಮುಖ್ಯವಾಗಿ ಅಪರೋಕ್ಷ ಜ್ಞಾನಿಗಳಿಗೆ ಎಂದೂ ಇಂದ್ರಿಯ ಚಾಪಲ ಕಾಡುವುದಿಲ್ಲ. ಅಪಮಾನಕ್ಕೆ ಆತ ಎಂದೂ
ಕುಸಿಯುವುದಿಲ್ಲ. ಮಾನಾಪಮಾನ ಆತನಿಗೆ ದೊಡ್ಡ ಸಂಗತಿ ಆಗುವುದಿಲ್ಲ. ಈ ಸ್ಥಿತಿ ತಲುಪಿದವ ಸಿದ್ಧ
ಎನಿಸುತ್ತಾನೆ. ಆತ ಎಷ್ಟು ನಿರ್ವಿಕಾರ ಎಂದರೆ ಆತ ಎಲ್ಲವನ್ನೂ ಸಮನಾಗಿ ಕಾಣಲಾರಂಭಿಸುತ್ತಾನೆ. ಧನ-ಕನಕ
ಎಲ್ಲವೂ ಬೇಡವೆನಿಸಿ ಅದರಿಂದ ದೂರವಿರುತ್ತಾನೆ. (ರಾಮಕೃಷ್ಣ ಪರಮಹಂಸರ ಆತ್ಮಕಥೆಯನ್ನು ಓದಿದರೆ ಒಬ್ಬ
ಅಪರೋಕ್ಷ ಜ್ಞಾನಿಯ ಮನಃಸ್ಥಿತಿ ನಮಗೆ ಅರ್ಥವಾಗುತ್ತದೆ).
ಮುಂದಿನ ಶ್ಲೋಕದಲ್ಲಿ ಕೃಷ್ಣ ಧ್ಯಾನಕ್ಕೆ ಪೂರ್ವಭಾವಿಯಾಗಿ ಒಬ್ಬ ಯೋಗಿಯ ಮನಃಸ್ಥಿತಿ ಹೇಗಿರಬೇಕು ಎನ್ನುವ
ಬಹಳ ಮಹತ್ವವಾದ ವಿಚಾರವನ್ನು ವಿವರಿಸುತ್ತಾನೆ.
Bibek Debroy (1955–2024)The Bhagavad Gita
(8)
‘He whose atman is satiated with knowledge,11 who is undisturbed and has
conquered his senses, and he who looks upon a lump of earth, stone and
gold equally, is said to be a yogi who has achieved union.’