6.9

सुहृन्मित्रार्युदासीनमध्यस्थद्वेष्यबन्धुषु ।
साधुष्वपि च पापेषु समबुद्धिर्विशिष्यते ॥
suhṛnmitrāryudāsīnamadhyasthadveṣyabandhuṣu |
sādhuṣvapi ca pāpeṣu samabuddhirviśiṣyate ||
Sri Madhvacharya (1238–1317)Bhagavad Gita Tatparya Nirnaya
‘यस्य यत्र यथा वृत्तिर्विहिता वर्तनं तथा। ज्ञानं वाऽपि समत्वं तद्विषमत्वमतोऽन्यथा’ इति महाविष्णुपुराणे। ‘अनिमित्तस्नेहवांस्तु सुहृज्ज्ञात्वोपकारकृत्। मित्रं वधादिकृदरिर्द्वेष्यस्त्वप्रियमात्रकृत्। उदासीनः स्नेहवतोऽप्यस्नेही तत्कृतानुकृत्। मध्यस्थ इति विज्ञेयः सुहृदेषु विशिष्यते’ इति नारदीये॥09॥
Swami Sivananda (1887–1963)Bhagavad Gita
9. He who is of the same mind to the good-hearted, friends, enemies, the indifferent, the neutral, the hateful, the relatives, the righteous and the unrighteous, excels.
Bannanje Govindacharya (1936–2020)Bhagavad Gita Pravachana
ಸುಹೃತ್‌ ಮಿತ್ರ ಅರಿ ಉದಾಸೀನ ಮಧ್ಯಸ್ಥ ದ್ವೇಷ್ಯ ಬಂದುಷು | ಸಾಧುಷು ಅಪಿ ಚ ಪಾಪೇಷು ಸಮಬುದ್ಧಿಃ ವಿಶಿಷ್ಯತೇ -ಹೆಳೆಯಿಲ್ಲದೇ ಹಚ್ಚಿಕೊಳ್ಳುವವರು, ಕಷ್ಟ ಕಾಲದಲ್ಲಿ ಎಚ್ಚರಿಸುವವರು, ಕಾಟಕೊಡುವವರು, ಒಳಿತು-ಕೆಡುಕು ಯಾವುದಕ್ಕೂ ಇಲ್ಲದವರು, ಎರಡಕ್ಕೂ ನಿಲ್ಲುವವರು, ಬೇಡವಾದದ್ದನ್ನು ಬಗೆವವರು, ನೆಂಟರು, ಒಳ್ಳೆಯವರು ಮತ್ತು ಕೆಟ್ಟವರು -ಎಲ್ಲರೂ ಮೂಲತಃ ಜ್ಞಾನ ಸ್ವರೂಪರು ಎಂದು ಸಮಭಾವದಿಂದ ಕಾಣುವವನು[ಎಲ್ಲರನ್ನೂ ಅವರವರ ಇರವಿಗೆ ತಕ್ಕಂತೆ ಗೌರವಿಸುವವನು] ಮಿಗಿಲಾದವನು. ಮನಸ್ಸು ಸಮತೋಲನವಾಗದೇ ಧ್ಯಾನ ಮಾಡಲು ಸಾಧ್ಯವಿಲ್ಲ. ಯಾರ್ಯಾರ ಬಗ್ಗೆ ಯಾವುದ್ಯಾವುದೋ ವಿಚಾರಗಳು ಮನಸ್ಸಿನಲ್ಲಿ ಸುಳಿಯಲಾರಂಭಿಸಿದರೆ ಧ್ಯಾನ ಅಸಾಧ್ಯ. ಪ್ರಪಂಚದಲ್ಲಿ ಅನೇಕ ವಿಧದ ಜನರಿರುತ್ತಾರೆ. ಉದಾಹರಣೆಗೆ ಸುಹೃತರು-ಅಂದರೆ ಒಳ್ಳೆಯ ಹೃದಯ ಉಳ್ಳವರು. ಯಾವ ಪ್ರತ್ಯುಪಕಾರವನ್ನು ಬಯಸದೇ ಎಲ್ಲರಿಗೂ ಸಹಾಯ ಮಾಡುವ ಜನರಿವರು. ಇವರ ನಂತರ "ಮಿತ್ರ'- ತನ್ನ ಆತ್ಮೀಯನಿಗೆ ಸದಾ ಸಹಾಯ ಮಾಡುವವ, ನಾವು ತಪ್ಪಿದಾಗ ನಮ್ಮನ್ನು ತಿದ್ದುವವನೀತ. ಅರಿಗಳು: ಕೊಲ್ಲುವ ಕೆಟ್ಟ ಶತ್ರುತ್ವ ಸಾಧಿಸುವ ಇವರಿಗೆ ದ್ವೇಷಿಸಲು ಕಾರಣ ಬೇಡ. ಉದಾಸೀನರು: ಇವರು ಒಳ್ಳೆಯದಕ್ಕೂ ಇಲ್ಲ ಕೆಟ್ಟದ್ದಕ್ಕೂ ಇಲ್ಲ. ಮಧ್ಯಸ್ಥ: ಒಳ್ಳೆಯದು ಮಾಡಿದಾಗ ಒಳ್ಳೆಯದು, ಕೆಟ್ಟದ್ದು ಮಾಡಿದಾಗ ಕೆಟ್ಟದ್ದು ಮಾಡುವವ. ದ್ವೇಷ್ಯ: ಒಬ್ಬರನ್ನು ಕಂಡು ಸಹಿಸದವ(180/66). ಕೊನೆಯದಾಗಿ ಬಂಧುಗಳು(೧6180%69).ಹೀಗೆ ಮಾನವ ಜನಾಂಗದಲ್ಲಿ ಒಳ್ಳೆಯವರು ಮತ್ತು ಕೆಟ್ಟವರು ತುಂಬಿರುತ್ತಾರೆ.(ದೇವತೆಗಳಲ್ಲಿ- ದಾನವರಲ್ಲಿ ಈ ರೀತಿಯ ಸಮ್ಮಿಶ್ರ ವರ್ಗಗಳಿಲ್ಲ. ದೇವತೆಗಳು ಕೇವಲ ಸಾಧುಗಳು, ಅಸುರರು ಸದಾ ಪಾಪಿಗಳು, ಆದರೆ ಮಾನವರಲ್ಲಿ ಮಾತ್ರ ಈ ಎರಡು ಗುಣಮಿಶ್ರಿತ ಗುಂಪುಗಳನ್ನು ಕಾಣಬಹುದು). ಧ್ಯಾನದಲ್ಲಿ ನಮಗೆ ಭಗವಂತನ ದರ್ಶನವಾಗಬೇಕಾದರೆ ಮೊದಲು ನಾವು ನಮ್ಮ ಅಂತರಂಗದಲ್ಲಿ ಈ ಎಲ್ಲಾ ರೀತಿಯ ಜನರ ಬಗ್ಗೆ ಸಮಬುದ್ದಿಯನ್ನು ಬೆಳೆಸಿಕೊಳ್ಳಬೇಕು. ಒಬ್ಬ ವ್ಯಕ್ತಿಯ ನಡವಳಿಕೆ ಆತನು ಬೆಳೆದುಬಂದ ವಾತಾವರಣದಿಂದ ಅಥವಾ ತಿಳುವಳಿಕೆ ಇಲ್ಲದೇ ಇದ್ದುದರಿಂದ ಬಂದದ್ದು ಎಂದು ತಿಳಿದು ಅವನ ಬಗ್ಗೆ ಮನಸ್ಸಿನಲ್ಲಿ ಯಾವ ಕೆಟ್ಟ ಭಾವನೆಯೂ ಇರದಂತೆ ನೋಡಿಕೊಳ್ಳಬೇಕು. ಒಬ್ಬ ನಮ್ಮ ವೈರಿಯಂತೆ ನಮ್ಮನ್ನು ಕಾಡುತ್ತಿರಬಹುದು. ಇದಕ್ಕೆ ಕಾರಣ ಆತನ ಹಾಗೂ ನಮ್ಮ ಪ್ರಾರಾಬ್ದ ಕರ್ಮವಿರಬಹುದು. ದೇವರು ಈ ಜನ್ಮದಲ್ಲಿ ಅವನಿಗೆ ಕೊಟ್ಟ ಪಾತ್ರವನ್ನು ಆತ ನಿಭಾಯಿಸುತ್ತಿದ್ದಾನೆ ಎನ್ನುವ ಭಾವದಲ್ಲಿ ಅವನನ್ನು ನೋಡಿದಾಗ ನಮ್ಮಲ್ಲಿ ದ್ವೇಷ ಹುಟ್ಟುವುದಿಲ್ಲ. ಇನ್ನೊಬ್ಬರು ನಮ್ಮನ್ನು ಬೈದಾಗ ನಾವು ಉದ್ವೇಗಕ್ಕೊಳಗಾಗುವುದಿಲ್ಲ. "ಭಗವಂತ ಅವನಿಗೆ ಕೊಟ್ಟ ಪಾತ್ರವನ್ನು ಅದೆಷ್ಟು ಚೆನ್ನಾಗಿ ನಿಭಾಯಿಸುತ್ತಿದ್ದಾನೆ" ಎನ್ನುವ ಭಾವ ನಮ್ಮಲ್ಲಿ ಮೂಡಬೇಕು. ಸಂಬಂಧಿಕರಿರಲಿ, ಶತ್ರುಗಳಿರಲಿ, ಯಾರೇ ಇರಲಿ. ಧ್ಯಾನ ಸಮಯದಲ್ಲಿ ಮನಸ್ಸಿನಲ್ಲಿ ಶುದ್ಧವಾದ ಸಮಭಾವ ನೆಲೆಗೊಂಡಿರಬೇಕು. ಈ ಸ್ಥಿತಿಯಲ್ಲಿ ಧ್ಯಾನಕ್ಕೆ ಕುಳಿತಾಗ ಇವರ್ಯಾರೂ ಎದುರಿಗೆ ಬರದೆ ಆ ಭಗವಂತನ ದರ್ಶನವಾಗುತ್ತದೆ. ಇಲ್ಲಿ ಒಂದು ಎಚ್ಚರದ ವಿಷಯ ಎಂದರೆ ಅಂತರಂಗದ ಸಮಭಾವವನ್ನು ವ್ಯವಹಾರಿಕವಾಗಿ ಹೊರ ಪ್ರಪಂಚದಲ್ಲಿ ಅಳವಡಿಸಲು ಬರುವುದಿಲ್ಲ. ವ್ಯವಹಾರಿಕವಾಗಿ ನಾವು ಹಿಂದೆ ಹೇಳಿದ ಮೈತ್ರಿ, ಕರುಣಾ, ಮುದಿತ ಮತ್ತು ಉಪೇಕ್ಷ ಎನ್ನುವ ನಾಲ್ಕು ಮನೋವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಎಲ್ಲರನ್ನೂ ಸಮಾನವಾಗಿ ಕಾಣುವುದು ಅಂದರೆ ಅವರವರನ್ನು ಆಯಾ ಸ್ಥಾನದಲ್ಲಿ ನೋಡುವುದು ವ್ಯಾವಹಾರಿಕ ಪ್ರಪಂಚದ ಸಮದೃಷ್ಟಿ. ತಂದೆಯನ್ನು ತಂದೆಯಂತೆ, ಮಗನನ್ನು ಮಗನಂತೆ ಕಂಡು ನಡೆಯುವುದು, ದುಷ್ಪರಿಂದ ದೂರವಿರುವುದು(ಉಪೇಕ್ಷ ವ್ಯಾವಹಾರಿಕ ಪ್ರಪಂಚ... ಅಂತರಂಗ ಪ್ರಪಂಚದಲ್ಲಿ ನಾವು ಎಲ್ಲರಲ್ಲೂ ಆತನ ಒಳಗಿರುವ ಭಗವಂತನನ್ನು ಮಾತ್ರ ಕಾಣಬೇಕು. ಇದು ಧ್ಯಾನಕ್ಕೆ ಬೇಕಾದ ಪೂರ್ವಭಾವಿ ಮನಃಸ್ಥಿತಿ. ಮಾನಸಿಕವಾಗಿ ಎಲ್ಲಾ ಸಂಬಂಧದ ನಂಟನ್ನು ಕಳಚಿ ಧ್ಯಾನಕ್ಕೆ ಕುಳಿತುಕೊಳ್ಳಬೇಕು. ಧ್ಯಾನದಲ್ಲಿ ತಂದೆ, ತಾಯಿ, ಗುರು, ಶಿಷ್ಯ, ವೈರಿ, ಮಿತ್ರ ಇತ್ಯಾದಿ ವರ್ಗಗಳಿಲ್ಲ. ಎಲ್ಲವೂ ಒಂದೇ, ಅದು ಕೇವಲ ಜ್ಞಾನಸ್ವರೂಪವಾದ ಜೀವ- ಅದರೊಳಗೆ ಬಿಂಬ ರೂಪಿ ಭಗವಂತ. ಇದು ಧ್ಯಾನಕ್ಕೆ ಬೇಕಾದ ಮಾನಸಿಕ ಸ್ಥಿತಿ. ಹೀಗೆ ಧ್ಯಾನಕ್ಕೆ ಬೇಕಾದ ಪೂರ್ವ ಸಿದ್ಧತೆಯನ್ನು ವಿವರಿಸಿದ ಕೃಷ್ಣ ಮುಂದೆ ನೇರವಾಗಿ ಧ್ಯಾನಕ್ಕೆ ಕೂರುವ ವಿಧಾನವನ್ನು ವಿವರಿಸುತ್ತಾನೆ.
Bibek Debroy (1955–2024)The Bhagavad Gita
(9) ‘Equal in treatment towards well-wisher, colleague,12 enemy, neutral,13 arbiter, a hateful person, friend14 and a righteous person or a sinner, he15 is superior.’