7.10

बीजं मां सर्वभूतानां विद्धि पार्थ सनातनम् ।
बुद्धिर्बुद्धिमतामस्मि तेजस्तेजस्विनामहम् ॥
bījaṃ māṃ sarvabhūtānāṃ viddhi pārtha sanātanam |
buddhirbuddhimatāmasmi tejastejasvināmaham ||
Sri Madhvacharya (1238–1317)Bhagavad Gita Tatparya Nirnaya
7.9–7.10
पुण्यापुण्यं गन्धयति स्वयं पुण्यो धरास्थितः। तेजयत्यग्निसंस्थः सन् भूतस्थो जीवनप्रदः। तपस्थितस्तपयति व्यञ्जनाद्बीजसज्ञितः। भोदनाद्बुद्धिनामाऽसौ बुद्धिमत्सु व्यवस्थितः॥09-10॥
Swami Sivananda (1887–1963)Bhagavad Gita
10. Know Me, O Arjuna, as the eternal seed of all beings; I am the intelligence of the intelligent; the splendour of the splendid objects am I!
Bannanje Govindacharya (1936–2020)Bhagavad Gita Pravachana
ಬೀಜಮ್‌ ಮಾಮ್‌ ಸರ್ವಭೂತಾನಾಮ್‌ ವಿದ್ಧಿ ಪಾರ್ಥ ಸನಾತನಮ್‌ | ಬುದ್ಧಿಃ ಬುದ್ಧಿಮತಾಮ್‌ ಅಸ್ಮಿ ತೇಜಃ ತೇಜಸ್ವಿನಾಮ್‌ ಅಹಮ್‌- ಓ ಪಾರ್ಥಾ, ಎಲ್ಲಾ ಜೀವಿಗಳ ಅಳಿವಿರದ ಬೀಜ [ಸ್ವಭಾವದ ಅಭಿವ್ಯಕ್ತಿಗೆ ಕಾರಣನಾಗಿ “ಬೀಜ' ನಾಮಕ] ನಾನೆಂದು ತಿಳಿ. ತಿಳಿದವರ ತಿಳಿವು ನನ್ನಿಂದ. [ತಿಳಿದವರೊಳಗಿದ್ದು ತಿಳಿವು ನೀಡುವುದರಿಂದ 'ಬುದ್ಧಿ'ಸಾಮಕ ]. ಪರಾಕ್ರಮಿಗಳ ಸೋಲರಿಯದ ಶಕ್ತಿ ನನ್ನಿಂದ. [ಪರಾಕ್ರಮಿಗಳೊಳಗಿದ್ದು ಸೋಲರಿಯದ ಶಕ್ತಿ ನೀಡುವುದರಿಂದ “ತೇಜಸ್‌' ನಾಮಕ]. ಕೃಷ್ಣ ಹೇಳುತ್ತಾನೆ: “ಬೀಜಮ್‌ ಮಾಮ್‌ ಸರ್ವಭೂತಾನಾಮ್‌” ಎಂದು. ಅಂದರೆ 'ಎಲ್ಲಾ ಜೀವಗಳ ಬೀಜ' ನಾನು ಎಂದು. ಬೀಜ ಎಂದಾಗ ನಮಗೆ ಸಾಮಾನ್ಯವಾಗಿ ನೆನಪಿಗೆ ಬರುವುದು ಮರಗಿಡದ ಬೀಜ. ಈ ಬೀಜವನ್ನು ಬಿತ್ತಿದಾಗ ಅದು ಮರವಾಗಿ ಬೆಳೆಯುತ್ತದೆ. ಅಂದರೆ ಮರಕ್ಕೆ ಬೀಜ ಉಪಧಾನ ಕಾರಣ. ಹಾಗೇ ಭಗವಂತ ಕೂಡಾ ಈ ಜಗತ್ತಿಗೆ ಉಪಧಾನ ಕಾರಣವೆ? ಇದು ನಮ್ಮ ಮುಂದೆ ಬರುವ ಮೊದಲ ಪ್ರಶ್ನೆ. ಇದನ್ನು ತಿಳಿಯಬೇಕಾದರೆ ಮೊದಲು ನಾವು 'ಬೀಜ' ಅನ್ನುವ ಪದದ ಆಧ್ಯಾತ್ಮಿಕ ಅರ್ಥವಿಶೇಷವನ್ನು(68/130100108 meaning) ಅರಿಯಬೇಕು. ಬೀಜ ಎನ್ನು ವುದು ‘WOR ಧಾತುವಿನಿಂದ ಬಂದಿರುವುದು. ಇಲ್ಲಿ 'ವಿ' ವಿಸರ್ಗ. ಯಾವುದು ವ್ಯಂಜನ (ವ್ಯಂಜನಾತ್‌) ಅದು ಅಭಿವ್ಯಂಜನ. ಅಂದರೆ ಯಾರಿಂದ ಅಭಿವ್ಯಕ್ತವಾಯಿತೋ ಅದು ಬೀಜ. APHID (SOT) ಇದ್ದೂ ಕಾಣಿಸುತ್ತಿರಲಿಲ್ಲವೋ ಅದಕ್ಕೆ ಕಾಣುವಂತಹ ಆಕಾರಕೊಟ್ಟವನು ಆ ಭಗವಂತ. ಅಂದರೆ ಸೂಕ್ಷ್ಮ ರೂಪದಲ್ಲಿ ತುಂಬಿದ್ದ ಈ ಅವ್ಯಕ್ತ ಪ್ರಪಂಚಕ್ಕೆ ವ್ಯಕ್ತವಾದ ರೂಪ ಕೊಟ್ಟವ. ಆದ್ದರಿಂದ ಇಡೀ ಪ್ರಪಂಚದಲ್ಲಿರುವ ಜೀವಜಾತಕ್ಕೆ ಅಭಿವ್ಯಕ್ತವನ್ನು ಕೊಟ್ಟವನು ಯಾರೋ ಅವನು ಸರ್ವಭೂತಗಳಿಗೆ ಬೀಜ. ಈ ಜಗತ್ತಿಗೆ ತಂದೆಯೂ ತಾಯಿಯೂ ಆದ ಆ ಭಗವಂತ ಬೀಜ. ಪ್ರಳಯ ಕಾಲದಲ್ಲಿ ಕಣ್ಣಿಗೆ ಕಾಣದ(ಅವ್ಯಕ್ತ), ಸೂಕ್ಷ್ಮರೂಪದಲ್ಲಿ ಇದ್ದ ಈ ಪ್ರಪಂಚಕ್ಕೆ-ವ್ಯಕ್ತವಾದ ರೂಪವನ್ನು ಕೊಟ್ಟವ “ಸರ್ವಭೂತಾನಾಂ ಬೀಜ'. ಜಗತ್ತಿನ ಸಮಸ್ತ ಜೀವಜಾತಕ್ಕೆ ಅಂದರೆ- ಚತುರ್ಮುಖ-ಪ್ರಾಣ-ಗರುಡ-ಶೇಷ-ರುದ್ರ-ಇಂದ್ರ-ಕಾಮ-ಸರ್ವ ದೇವತೆಗಳು, ಮಾನವರು, ವನಸ್ಪತಿಗಳು, ಇತ್ಯಾದಿ. ಹೀಗೆ ಸಮಸ್ತ ಜೀವಕೋಟಿಗೆ ದೇಹಕೊಟ್ಟು, ಆಕಾರ ಕೊಟ್ಟು, ಅಭಿವ್ಯಕ್ತಿಕೊಟ್ಟು, ಇಡೀ ಜೀವಜಾತದ ಹಿಂದೆ ತಂದೆಯಾಗಿ ನಿಂತವ ಆ ಭಗವಂತ. ಈ ಪ್ರಪಂಚದಲ್ಲಿ ಯಾವ-ಯಾವ ಜೀವಜಾತವಿದೆ, ಆ ಜೀವಜಾತದಲ್ಲಿರುವ ವಿಶೇಷ ಗುಣಧರ್ಮದ(6%01351/ಆ quality) ಹಿ೦ದೆ ಕಾರಣ ಪುರುಷನಾಗಿ, ವ್ಯಕ್ತಿತ್ವ ವಿಕಸನಕ್ಕೆ (ಅಭಿವ್ಯಕ್ತಿಗೆ) ಮೂಲಕಾರಣನಾಗಿ ಆ ಭಗವಂತ ನಿಂತಿದ್ದಾನೆ. ನಮಗಿರುವ ಬೀಜದ ಇನ್ನೊಂದು ಕಲ್ಪನೆ -ಅದು ಮರವಾಗಿ ಬೆಳೆದಾಗ ತನ್ನ ಆಕಾರವನ್ನು ಕಳೆದುಕೊಳ್ಳುತ್ತದೆ ಎನ್ನುವುದು. ಆದರೆ ಭಗವಂತ “ಸನಾತನ'. ಇಲ್ಲಿ ಕೃಷ್ಣ ಹೇಳುತ್ತಾನೆ: “ನಾನು ನಾನಾಗಿಯೇ ಇದ್ದು ಪ್ರಪಂಚಕ್ಕೆ ಆಕಾರ ಕೊಡುತ್ತೇನೆ” ಎಂದು. ಅಂದರೆ ಭಗವಂತ ಎಂದೂ ಬದಲಾಗುವುದಿಲ್ಲ-ಆದರೆ ಪ್ರಪಂಚ ಬದಲಾಗುತ್ತದೆ. ಭಗವಂತ ಪ್ರಪಂಚಕ್ಕೆ ಬೇರೆ ಬೇರೆ ಆಕಾರದ ಅಭಿವ್ಯಕ್ತ ಕೊಡುತ್ತಾನೆ. ಹೊಸ ಶಕ್ತಿ ಕೊಡುತ್ತಾನೆ. ಇದರಿಂದ ಅದು ಬದಲಾಗುತ್ತಾ, ಹೊಸ ರೂಪ ಪಡೆಯುತ್ತಾ ಇರುತ್ತದೆ. ಇದಕ್ಕೆ ಕಾರಣಪುರುಷನಾದ ಭಗವಂತ ಮಾತ್ರ ಎಲ್ಲಾ ಕಾಲದಲ್ಲೂ ಏಕರೂಪದಲ್ಲಿರುತ್ತಾನೆ. ಹೀಗೆ ಭಗವಂತ ಸಮಸ್ತ ಭೂತಗಳಿಗೆ(ಜಡ, ಚೇತನ, ಮುಕ್ತರು) ಬೀಜ ಮತ್ತು ಆತ ಸನಾತನ. ಕೃಷ್ಣ ಹೇಳುತ್ತಾನೆ. “ಬುದ್ಧಿರ್ಬುದ್ದಿಮತಾಮಸ್ಮಿ ತೇಜಸ್ತೇಜಸ್ವಿನಾಮಹಮ್‌"” ಎಂದು. ಅಂದರೆ “ಬುದ್ಧಿವಂತರ ಬುದ್ಧಿಮತ್ತೆ ಏನಿದೆ ಅದು ನನ್ನ ಕೊಡುಗೆ; ಹಾಗೇ ತೇಜಸ್ವಿಗಳಿಗೆ ತೇಜಸ್ವಿ ನಾನು”. ಜ್ಞಾನಪ್ರದ ಜೀವರಲ್ಲಿ ಜ್ಞಾನಶಕ್ತಿಯನ್ನು.. ಭಗವಂತ ಅಭಿವ್ಯಕ್ತ ಗೊಳಿಸಿದ. ಇದರಿಂದ ಅವರು ಜ್ಞಾನಯೋಗಿಗಳಾದರು ಮತ್ತು ಸಂಸಾರದಲ್ಲಿ ಜ್ಞಾನ ಪರಂಪರೆಯನ್ನು ಬೆಳೆಸಿ ಮುಕ್ತಿಯನ್ನು ಪಡೆದರು. ಅದೇ ರೀತಿ ಕರ್ಮಪ್ರಧಾನವಾಗಿರುವ ಕರ್ಮಯೋಗಿಗಳಿಗೆ ತೇಜಸ್ಸಾಗಿ ನಿಂತು ಮುನ್ನೆಡೆಸಿದ ಭಗವಂತ, ಅವರಿಗೆ 'ತೇಜಸ್ಸಾಗಿ' ಮುಕ್ತಿ ಕರುಣಿಸುವವ. ಬುದ್ಧಿಃ ಮತ್ತು ತೇಜಃ ಎನ್ನುವುದು ಭಗವಂತನ ಹೆಸರು. ಜ್ಞಾನದ ಅಪಾರ ಮತ್ತು ಅನಂತ ಕಡಲಾಗಿರುವ ಭಗವಂತ 'ಬುದ್ದಿಃ. ದೇಹಬಲ, ಆತ್ಮಬಲ ಎಲ್ಲವೂ ಪೂರ್ಣಪ್ರಮಾಣದಲ್ಲಿರುವ ಸರ್ವಸಮರ್ಥ ಭಗವಂತ ತೇಜಃ.
Bibek Debroy (1955–2024)The Bhagavad Gita
(10) ‘O son of Pritha!15 Know me to be the eternal seed of all beings. I am intellect in the intelligent. I become energy in those who are energetic.’