ये चैव सात्त्विका भावा राजसास्तामसाश्च ये ।
मत्त एवेति तान्विद्धि न त्वहं तेषु ते मयि ॥
ye caiva sāttvikā bhāvā rājasāstāmasāśca ye |
matta eveti tānviddhi na tvahaṃ teṣu te mayi ||
Sri Madhvacharya (1238–1317)Bhagavad Gita Tatparya Nirnaya
ये चैव सात्त्विका भावा राजसास्तामसाश्च ये।
तत एव न चान्यस्मात् तदायत्तमिदं न सः॥12॥
Swami Sivananda (1887–1963)Bhagavad Gita
12. Whatever being (and objects) that are pure, active and inert, know that they proceed
from Me. They are in Me, yet I am not in them.
Bannanje Govindacharya (1936–2020)Bhagavad Gita Pravachana
ಯೇ ಚ ಏವ ಸಾತ್ತ್ವಿಕಾಃ ಭಾವಾ ರಾಜಸಾಃ ತಾಮಸಾಃ ಚ ಯೇ।
ಮತ್ತಃ ಏವ ಇತಿ ತಾನ್ ವಿದ್ಧಿ ನ ತು ಅಹಮ್ ತೇಷು ತೇ ಮಯಿ-ಯಾವ ವಸ್ತುಗಳು ಸತ್ತ್ವಗುಣದ ಪ್ರಭಾವಕ್ಕೆ
ಒಳಗಾಗಿವೆ, ಮತ್ತು ಯಾವವು ರಜೋಗುಣ ಮತ್ತು ತಮೋಗುಣದ ಪ್ರಭಾವಕ್ಕೆ-ಅವೆಲ್ಲವೂ ನನ್ನಿಂದಾಗಿಯೇ
ಆಗಿವೆ ಎಂದು ತಿಳಿ. ನಾನು ಅವುಗಳ ಹಂಗಿನಲ್ಲಿಲ್ಲ. ಅವು ನನ್ನ ಹಂಗಿನಲ್ಲಿವೆ.
ಈ ಪ್ರಪಂಚ ಎಂದರೆ ಅಂತರಂಗ ಮತ್ತು ಬಹಿರಂಗ. ಅಂತರಂಗ ಪ್ರಪಂಚದಲ್ಲಿ ತ್ರೈಗುಣ್ಯದ ಭಾವನೆಗಳು, ಬಾಹ್ಯ
ಪ್ರಪಂಚದಲ್ಲಿ ತ್ರೈಗುಣ್ಯ ಪದಾರ್ಥಗಳು. ಸತ್ವ, ರಜಸ್ಸು ಮತ್ತು ತಮಸ್ಸು ಈ ಮೂರರ ಸಮಾವೇಶವೇ ಈ
ಪ್ರಪಂಚ. ಮಣ್ಣು ತಮೋಗುಣದ, ನೀರು ರಜೋಗುಣದ ಮತ್ತು ಬೆಂಕಿ ಸತ್ವ ಗುಣದ ಸಂಕೇತ. ಆದ್ದರಿಂದ ಈ
ಪ್ರಪಂಚದಲ್ಲಿ ನಮಗೆ ಕಾಣುವ ಪ್ರತಿಯೊಂದು ವಸ್ತುವೂ ಕೂಡಾ ಈ ಮೂರರ ಸಮಾವೇಶ. ನಮ್ಮ ಅಂತರಂಗದ
ಭಾವನೆಗಳೂ ಕೂಡಾ ಈ ಮೂರು ಗುಣದ ಸಮಾವೇಶ. ನಮ್ಮಲ್ಲಿರುವ ವರ್ಣ ಪದ್ಧತಿ ಕೂಡಾ ತ್ರೈಗುಣ್ಯ
ಆಧಾರಿತ. ಎಲ್ಲರಲ್ಲಿಯೂ ಕೂಡಾ ಈ ಮೂರು ಗುಣಗಳಿವೆ. ಆದರೆ ಸತ್ವದ ಅಂಶ ಹೆಚ್ಚಾಗಿದ್ದು, ರಜಸ್ಸು ಮತ್ತು
ತಮಸ್ಸು ಕಡಿಮೆ ಇರುವವ ಬ್ರಾಹ್ಮಣ ವರ್ಣ; ರಜಸ್ಸಿನ ಅಂಶ ಹೆಚ್ಚಾಗಿದ್ದು ಅದರ ನಂತರ ಸತ್ವ ಮತ್ತು ತಮಸ್ಸು
ಇರುವವ ಕ್ಷತ್ರಿಯ; ರಜಸ್ಸು ಹೆಚ್ಚಾಗಿದ್ದು ಅದರ ನಂತರ ತಮಸ್ಸು ಮತ್ತು ಸತ್ವ ಗುಣ ಉಳ್ಳವ ವೈಶ್ಯ; ತಮೋಗುಣ
ಹೆಚ್ಚಾಗಿದ್ದು, ಅದರ ನಂತರ ರಜಸ್ಸು ಮತ್ತು ಸತ್ವ ಗುಣ ಉಳ್ಳವ ಶೂದ್ರ. ಈ ಎಲ್ಲಾ ವರ್ಣದವರೂ ಮೋಕ್ಷ
ಯೋಗ್ಯರೆ. ಸೃಷ್ಟಿಯ ಆದಿಯಲ್ಲಿ ಈ ಮೂರು ಗುಣಗಳ ಮಿಶ್ರಣವಾಗಿಯೇ ಸೃಷ್ಟಿ ಪ್ರಾರಂಭವಾಯಿತು. ಇಲ್ಲಿ ಶುದ್ಧ
ಸತ್ವ ಅನ್ನುವುದೊಂದಿಲ್ಲ. (ಗಣಿತಬದ್ಧವಾಗಿ ಹೇಗೆ ತ್ರೈಗುಣ್ಯದಿಂದ ಈ ಪ್ರಪಂಚ ನಿರ್ಮಾಣವಾಯಿತು
ಎನ್ನುವುದನ್ನು ಮಧ್ವಾಚಾರ್ಯರು ತಮ್ಮ ಭಾಗವತ ತಾತ್ಪರ್ಯನಿರ್ಣಯ ಗ್ರಂಥದಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ.
ಇದೊಂದು ಸೃಷ್ಟಿಯ ಪ್ರಮೇಯ).
ಹೀಗೆ ಪ್ರತಿಯೊಂದು ಪದಾರ್ಥದಲ್ಲಿ ಮೂರು ಅಂಶಗಳಿವೆ ಮತ್ತು ನಮ್ಮ ಭಾವದಲ್ಲಿಯೂ ಮೂರು ಅಂಶಗಳಿವೆ. ಈ
ಮೂರು ಗುಣಗಳ ಸಂಕೀರ್ಣ ಪ್ರಪಂಚ ಬಹಳ ವಿಚಿತ್ರ. ಇವು ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂದು
ಮನುಷ್ಯ ತೀರ್ಮಾನ ಮಾಡಲಾಗದಷ್ಟು ಗೊಂದಲಗೆಡಿಸುತ್ತವೆ. ಆದರೆ ಇಲ್ಲಿ ಕೃಷ್ಣ ಹೇಳುತ್ತಾನೆ “ತ್ರೈಗುಣ್ಯ
ವರ್ಜಿತನಾಗಿ ಈ ಮೂರು ಗುಣಗಳನ್ನು ಕೊಡುತ್ತಿರುವವನು ನಾನು” ಎಂದು! ಪ್ರತಿಯೊಂದು ಜೀವದ ಜೀವ
ಸ್ವಭಾವಕ್ಕನುಗುಣವಾಗಿ, ಅದಕ್ಕೆ ಬೇಕಾದ ಗುಣ ಪ್ರವೃತ್ತಿಯನ್ನು ಕೊಡುವವ ಆ ಭಗವಂತ. ಯಾರಲ್ಲೂ ಯಾವ
ಕ್ರಿಯೆಯೂ ಭಗವಂತನ ಪ್ರೇರಣೆ ಇಲ್ಲದೇ ಆಗುವುದಿಲ್ಲ. ಹಿಂದೆ ವಿವರಿಸಿದಂತೆ ಜೀವನಿಗೆ ಸ್ವತಂತ್ರ
ಇಚ್ಛಾಪೂರ್ವಕ ಕ್ರಿಯೆ ಇಲ್ಲ. “ನಹಿ ಪ್ರತಿಬಿಂಬಸ್ಯ ಕ್ರಿಯಾ | ಸ ಹಿ ಬಿಂಬ ಕ್ರಿಯೈವ ಕ್ರಿಯಾವಾನ್ ||”. ಬಿಂಬದಲ್ಲಿ
ಕ್ರಿಯೆ ಇಲ್ಲದೆ ಪ್ರತಿಬಿಂಬದಲ್ಲಿ ಕ್ರಿಯೆ ಇಲ್ಲ. ಭಗವಂತನ ಅಧೀನವಾಗಿ ಈ ಮೂರು ಗುಣಗಳು ಈ ಪ್ರಪಂಚದಲ್ಲಿ
ತುಂಬಿಕೊಂಡಿವೆ. ಇದು ನಮ್ಮ ಜೀವ ಪಕ್ವವಾಗಿ ಮೋಕ್ಷವನ್ನು ಸೇರಲು ಭಗವಂತ ನಿರ್ಮಿಸಿರುವ ಪಾಠಶಾಲೆ.
ಭಗವಂತ ತ್ರೈಗುಣ್ಯ ವರ್ಜಿತ. ಆತ ತ್ರಿಗುಣದ ನಿಯಂತ್ರಣಕ್ಕೊಳಪಟ್ಟಿಲ್ಲ.. ಅದಕ್ಕಾಗಿ ಭಗವಂತನನ್ನು
“ತ್ರಿಗುಣಾತೀತ ವಿದಾರಕ-ಪರಿತೋ ತೇಹಿಸುಭಕ್ತಿಂ- ಕರುಣಾಪೂರ್ಣ ಪರಪ್ರದ-ಚರಿತಂ ಜ್ಞಾಪಯಮೇತೇ”
ಎಂದು ಸ್ತುತಿಸುತ್ತಾರೆ. ಇಡೀ ಜಗತ್ತು ತ್ರಿಗುಣದ ನಿಯಂತ್ರಣಕ್ಕೊಳಪಟ್ಟಿದೆ ಆದರೆ ಭಗವಂತ ತ್ರಿಗುಣಾತೀತ.
Bibek Debroy (1955–2024)The Bhagavad Gita
(12)
‘And know all the three conditions, with sattva, rajas and tamas
predominating,19 to be derived from me. I am not in them. They are in me.’