दैवी ह्येषा गुणमयी मम माया दुरत्यया ।
मामेव ये प्रपद्यन्ते मायामेतां तरन्ति ते ॥
daivī hyeṣā guṇamayī mama māyā duratyayā |
māmeva ye prapadyante māyāmetāṃ taranti te ||
Swami Sivananda (1887–1963)Bhagavad Gita
14. Verily this divine illusion of Mine made up of the qualities (of Nature) is difficult to
cross over; those who take refuge in Me alone cross over this illusion.
Bannanje Govindacharya (1936–2020)Bhagavad Gita Pravachana
ದೈವೀ ಹಿ ಏಷಾ ಗುಣಮಯೀ ಮಮ ಮಾಯಾ ದುರತ್ಯಯಾ |
ಮಾಮ್ ಏವ ಯೇ ಪ್ರಪದ್ಯಂತೇ ಮಾಯಾಮ್ ಏತಾಮ್ ತರಂತಿ ತೇ-ಗುಣಮಯವಾದ ನನ್ನ ಮಾಯೆ
ತುಂಬಾ ಶಕ್ತಿಶಾಲಿ. ಅದನ್ನು ದಾಟುವುದು ಸುಲಭವಲ್ಲ. ಯಾರು ನನ್ನಲ್ಲಿ ಮೊರೆ ಹೋಗುತ್ತಾರೋ ಅವರು ಈ
ಮಾಯೆಯನ್ನು ದಾಟಾತ್ತಾರೆ.
ತ್ರಿಗುಣಾತ್ಮಕವಾದ ಈ ಮೂರು ಭಾವಗಳಲ್ಲಿ ಇನ್ನೊಂದು ಮುಖವಿದೆ. ತ್ರಿಗುಣದ ಮಾನಿನೀ(ಶ್ರೀ ಲಕ್ಷ್ಮಿಯೂ
ಕೂಡಾ ಮೂರು ಮುಖದವಳು. ಶ್ರೀ-ಭೂ-ದುರ್ಗ-ಇವು ತ್ರಿಗುಣವನ್ನು ನಿಯಂತ್ರಿಸುವ ಮೂರು ರೂಪಗಳು. ಈ
ಗುಣಮಯೀ ತಾಯಿ ಮಾಯೆಯಾಗಿ ಜಗತ್ತಿನಲ್ಲಿ ತುಂಬಿದ್ದಾಳೆ. ಇಡೀ ಜಗತ್ತನ್ನು ನಿಯಂತ್ರಿಸಬಲ್ಲ ಮಹಾ
ಶಕ್ತಿಸ್ವರೂಪ ಆ ಮಾಯೆ ಭಗವಂತನ ಅಧೀನ. ನಾವು ಭಗವಂತನನ್ನು ಕಾಣಬೇಕಾದರೆ ಈ ಮಾಯಾ
ಪರದೆಯನ್ನು ಸರಿಸಿ ಕಾಣಬೇಕು. ಆದರೆ ನಮ್ಮಿಂದ ಅದು ಅಸಂಭವ. ಈ ಕಾರಣದಿಂದ ಭಗವಂತನನ್ನು
ಸೇರುವ ಏಕೈಕ ಮಾರ್ಗ ಭಗವಂತನಲ್ಲಿ ಪೂರ್ಣ ಶರಣಾಗತಿ. ಆತ ಈ ಮಾಯಾ ಪರದೆಯನ್ನು ಸರಿಸಿ ದರ್ಶನ
ಕೊಡಬಲ್ಲ. ಈ ಹಿಂದೆ ಹೇಳಿದಂತೆ ಸಂಸಾರದ ಮೋಹಪಾಶದಿಂದ ದೂರ ಸರಿದು ನಾರಾಯಣನಲ್ಲಿ ಶರಣಾದಲ್ಲಿ
ಆತ ನಮ್ಮನ್ನು ಈ ಮಾಯಾ ಪರದೆಯಿಂದ ದಾಟಿಸುತ್ತಾನೆ.
ಭಗವಂತನಲ್ಲದೆ.. ನನಗೆ ಬೇರೆ ಅಸ್ತಿತ್ವವಿಲ್ಲ ಎನ್ನುವ ಎಚ್ಚರದಿಂದ ನಾವು. ನಮ್ಮನ್ನು ಆತನಿಗೆ
ಅರ್ಪಿಸಿಕೊಳ್ಳಬೇಕು. ನವವಿಧ ಭಕ್ತಿಯಲ್ಲಿ ಇದು ಶ್ರೇಷ್ಠವಾದ ಭಕ್ತಿ. ಇದನ್ನು ಆತ್ಮನಿವೇದನ ಎನ್ನುತ್ತಾರೆ.
ಮೊದಲು ನಮ್ಮೊಳಗಿರುವ ಭಗವಂತನನ್ನು ಅರಿತು, ಅಹಂಕಾರ ಮಮಕಾರವನ್ನು ತೊರೆದು ನಮ್ಮನ್ನು
ಸಂಪೂರ್ಣವಾಗಿ ಭಗವಂತನಲ್ಲಿ ಅರ್ಪಿಸಿಕೊಂಡಾಗ ಭಗವದ್ ಸಾಕ್ಷಾತ್ಕಾರವಾಗುತ್ತದೆ. ಇಲ್ಲಿ ಮುಖ್ಯವಾಗಿ
ಬೇಕಾಗಿರುವುದು ಏಕಭಕ್ತಿ ಮತ್ತು ಏಕನಲ್ಲಿ ಶರಣಾಗತಿ. ಕೃಷ್ಣ ಹೇಳುತ್ತಾನೆ "ಯಾರು ನನಗೇ ಶರಣಾಗುತ್ತಾರೋ
ಅವರು ಪಾರಾಗಿಯೇ ಆಗುತ್ತಾರೆ" ಎಂದು. ಕೃಷ್ಣನ ಈ ಮಾತನ್ನು ಕೇಳಿದಾಗ ನಮ್ಮನ್ನು ಕೆಲವು ಪ್ರಶ್ನೆಗಳು
ಕಾಡಬಹುದು. "ಎಲ್ಲರೂ ಏಕೆ ಭಗವಂತನಲ್ಲಿ ಶರಣಾಗುವುದಿಲ್ಲ? ಕೆಟ್ಟತನ ಜನರಲ್ಲಿ ಹೇಗೆ ಬರುತ್ತದೆ?" ಇತ್ಯಾದಿ.
ಬನ್ನಿ ನಮ್ಮ ಪ್ರಶ್ನೆಗೆ ಉತ್ತರವನ್ನು ಮುಂದಿನ ಶ್ಲೋಕದಲ್ಲಿ ಹುಡುಕೋಣ.
Bibek Debroy (1955–2024)The Bhagavad Gita
(14)
‘It is indeed difficult to overcome this divine aspect20 of mine, immersed in
gunas. Those who seek refuge in me alone, they are able to overcome this
maya.’