ज्ञानं तेऽहं सविज्ञानमिदं वक्ष्याम्यशेषतः ।
यज्ज्ञात्वा नेह भूयोऽन्यज्ज्ञातव्यमवशिष्यते ॥
jñānaṃ te'haṃ savijñānamidaṃ vakṣyāmyaśeṣataḥ |
yajjñātvā neha bhūyo'nyajjñātavyamavaśiṣyate ||
Swami Sivananda (1887–1963)Bhagavad Gita
2. I shall declare to thee in full this knowledge combined with direct realisation, after
knowing which nothing more here remains to be known.
Bannanje Govindacharya (1936–2020)Bhagavad Gita Pravachana
ಜ್ಞಾನಮ್ ತೇ ಅಹಮ್ ಸ ವಿಜ್ಞಾನಮ್ ಇದಮ್ ವಕ್ಷ್ಯಾಮಿ ಅಶೇಷತಃ |
ಯತ್ ಜ್ಞಾತ್ವಾ ನ ಇಹ ಭೂಯಃ ಅನ್ಯತ್ ಜ್ಞಾತವ್ಯಮ್ ಅವಶಿಷ್ಯತೇ -ತಿಳಿಯಬೇಕಾದ ನನ್ನ ಹಿರಿಮೆಯನ್ನು
ಅದರ ಬಿತ್ತರದ ಜತೆಗೆ ನಿನಗೆ ನಾನು ಪೂರ್ತಿಯಾಗಿ ಹೇಳುತ್ತೇನೆ. ಇದನ್ನು ತಿಳಿದರೆ ಮತ್ತೆ ಈ ವಿಷಯದಲ್ಲಿ
ಬೇರೆ ತಿಳಿಯುವಂತದ್ದೇನೂ ಉಳಿದಿರುವುದಿಲ್ಲ.
ಯಾವುದನ್ನು ತಿಳಿದರೆ ಎಲ್ಲವನ್ನೂ ತಿಳಿದಂತಾಗುತ್ತದೋ ಅದನ್ನು ನಿನಗೆ ಹೇಳುತ್ತೇನೆ ಎನ್ನುತ್ತಾನೆ ಕೃಷ್ಣ.
ಉಪನಿಷತ್ತಿನಲ್ಲಿ ಒಂದು ಮಾತಿದೆ “ಯಸ್ಮಿನ್ ವಿಜ್ಞಾತೇ ಸರ್ವಮಿದಂ ವಿಜ್ಞಾತಂ ಭವತಿ” ॥[ಶಾಂಡಿಲ್ಯ-೨.೨;
ಮುಂಡಕ ೧.೧.೩॥ ಅಂದರೆ ಯಾವುದನ್ನು ತಿಳಿದರೆ ಎಲ್ಲವೂ ತಿಳಿಯುತ್ತದೋ ಅದನ್ನು ಮೊದಲು ತಿಳಿಯಬೇಕು.
ನಾವು ಭಗವಂತನನ್ನು ತಿಳಿದರೆ ಈ ಪ್ರಪಂಚವನ್ನು ತಿಳಿದಂತೆ. ಅದನ್ನು ಬಿಟ್ಟು ಪ್ರಪಂಚವನ್ನು ತಿಳಿದು
ಭಗವಂತನನ್ನು ತಿಳಿಯಬೇಕು ಅಂದುಕೊಂಡರೆ ಅದು ಅಸಾಧ್ಯ. ಇಲ್ಲಿ ಕೃಷ್ಣ ಹೇಳುತ್ತಾನೆ: “ಯಾವ
ಸಂಗತಿಯನ್ನು ತಿಳಿದರೆ ಮತ್ತೆ ಬೇರೆ ತಿಳಿದುಕೊಳ್ಳಬೇಕಾದ ಸಂಗತಿ ಉಳಿಯುವುದಿಲ್ಲವೋ ಅಂತಹ
ವಿಜ್ಞಾನವನ್ನು ನಿನಗೆ ಕೊಡುತ್ತೇನೆ” ಎಂದು. ಜ್ಞಾನ ವಿಜ್ಞಾನವಾದಾಗಲೇ ಅದು ಸಮಗ್ರವಾಗುವುದು. ವಿಜ್ಞಾನ
ಅಂದರೆ ವಿ*ಜ್ಞಾನ. ಇಲ್ಲಿ "ವಿ' ಉಪಸರ್ಗ, "~ ವಿಲಕ್ಷಣವಾದ, ವಿಶಿಷ್ಟವಾದ, ವಿಶೇಷವಾದ, ಇತ್ಯಾದಿ ಅರ್ಥವನ್ನು
ಕೊಡುತ್ತದೆ. ಒಂದು ವಿಷಯವನ್ನು ತಳಸ್ಪರ್ಶಿಯಾಗಿ ತಿಳಿಯುವುದು ವಿಜ್ಞಾನ. ಇಲ್ಲಿ ಕೃಷ್ಣ ಹೇಳುತ್ತಿರುವುದು
ವಿಜ್ಞಾನದ ಬಗ್ಗೆ. "ದೇವರು ಇದ್ದಾನೆ, ಅವನು ಸರ್ವಸಮರ್ಥ, ಸರ್ವಾಂತರ್ಯಾಮಿ' ಎನ್ನುವುದು ಜ್ಞಾನ; ಆತ
ಎಲ್ಲೆಲ್ಲಿ ಹೇಗಿದ್ದಾನೆ, ಯಾವ ವಸ್ತುವಿನಲ್ಲಿ ಯಾವ ವಿಭೂತಿಯಾಗಿದ್ದಾನೆ ಎಂದು ವಿವರವಾಗಿ ತಿಳಿಯುವುದು
ವಿಜ್ಞಾನ.
Bibek Debroy (1955–2024)The Bhagavad Gita
(2)
‘I will completely tell you about the knowledge with self-realization.3
Knowing that, there is nothing more remaining to know.’