7.26

वेदाहं समतीतानि वर्तमानानि चार्जुन ।
भविष्याणि च भूतानि मां तु वेद न कश्चन ॥
vedāhaṃ samatītāni vartamānāni cārjuna |
bhaviṣyāṇi ca bhūtāni māṃ tu veda na kaścana ||
Sri Madhvacharya (1238–1317)Bhagavad Gita Tatparya Nirnaya
‘यथाऽऽत्मानं हरिर्वेत्तितथाऽन्ये नैव तं विदुः। जानन्ति किञ्चित् क्रमशो रमाद्यास्तत्प्रसादतः’ इति च॥26॥
Swami Sivananda (1887–1963)Bhagavad Gita
26. I know, O Arjuna, the beings of the past, the present and the future, but no one knows Me.
Bannanje Govindacharya (1936–2020)Bhagavad Gita Pravachana
ವೇದ ಅಹಮ್‌ ಸಮತೀತಾನಿ ವರ್ತಮಾನಾನಿ ಚ ಅರ್ಜುನ | ಭವಿಷ್ಯಾಣಿ ಚ ಭೂತಾನಿ ಮಾಮ್‌ ತು ವೇದ ನ ಕಶ್ಚನ- ಅರ್ಜುನಾ , ನಾನು ತಿಳಿದಿದ್ದೇನೆ-ಹಿಂದಿದ್ದ ಜೀವಿಗಳನ್ನು, ಈಗಿರುವವರನ್ನು, ಮುಂದೆ ಬರುವವರನ್ನು ಕೂಡಾ. ನನ್ನನ್ನು ಮಾತ್ರ ಯಾರೂ ತಿಳಿದಿಲ್ಲ. ಜೀವ ಮತ್ತು ಭಗವಂತನ ನಡುವಿನ ವ್ಯತ್ಯಾಸವನ್ನು ಬಹಳ ಸ್ಪಷ್ಟವಾಗಿ ವಿವರಿಸುತ್ತಾ ಕೃಷ್ಣ ಹೇಳುತ್ತಾನೆ “ಹಿಂದೆ ಆಗಿ ಹೋದ ಭೂತಗಳು, ಈಗ ಇರುವ ಭೂತಗಳು, ಮತ್ತು ಮುಂದೆ ಬರಲಿರುವ ಭೂತಗಳು ಈ ಎಲ್ಲವನ್ನೂ ನಾನು ತಿಳಿದಿದಿದ್ದೇನೆ” ಎಂದು. ಇಲ್ಲಿ ಭೂತ ಎನ್ನುವ ಪದಕ್ಕೆ ಅನೇಕ ಅರ್ಥವಿದೆ. ಪಂಚಭೂತಗಳು, ಅದರಿಂದ ನಿರ್ಮಾಣವಾದ ಬ್ರಹ್ಮಾಂಡ, ಅದರಿಂದ ರೂಪುಗೊಂಡ ಸಮಸ್ತ ವಸ್ತುಗಳು ಮತ್ತು ಸಮಸ್ತ ಜೀವಜಾತಗಳು ಎಲ್ಲವೂ ಭೂತಗಳು. ಈ ಹಿಂದೆ ಸೃಷ್ಟಿಯಾದ ಅನಂತ ಬ್ರಹ್ಮಾಂಡ, ಈಗಿರುವ ಬ್ರಹ್ಮಾಂಡ, ಮುಂದೆ ಸೃಷ್ಟಿಯಾಗಲಿರುವ ಅನಂತ ಬ್ರಹ್ಮಾಂಡ, ಹಿಂದೆ ಇದ್ದ ಅನಂತ ಜೀವಜಾತಗಳು, ಈಗಿರುವ ಅನಂತ ಜೀವಜಾತಗಳು ಮತ್ತು ಮುಂದೆ ಸೃಷ್ಟಿಯಾಗಲಿರುವ ಅನಂತ ಜೀವಜಾತಗಳನ್ನು ತಿಳಿದವನು ಆ ಅನಂತಕೋಟಿ ಬ್ರಹ್ಮಾಂಡ ನಾಯಕ ಭಗವಂತನೊಬ್ಬನೆ. ಕೃಷ್ಣ ಹೇಳುತ್ತಾನೆ “ಮಾಮ್‌ ತು ವೇದ ನ ಕಶ್ಚನ” ಎಂದು. ಅಂದರೆ ನನ್ನನ್ನು ಬಿಟ್ಟು ಇನ್ಯಾರೂ ಇದನ್ನು ಪೂರ್ಣವಾಗಿ ತಿಳಿದಿಲ್ಲ'. ಭಗವಂತನನ್ನು ಪೂರ್ಣವಾಗಿ ತಿಳಿದವರಿಲ್ಲ ಹಾಗೂ ತಿಳಿಯುವುದು ಸಾಧ್ಯವಿಲ್ಲ. ಆತ ಸ್ವತಂತ್ರ, ಪೂರ್ಣ ಮತ್ತು ನಿತ್ಯಸತ್ಯ. ಜೀವ ಅಪೂರ್ಣ, ಅಸ್ವತಂತ್ರ ಮತ್ತು ಅನಿತ್ಯಸತ್ಯ. ಭಗವಂತನನ್ನು ಪೂರ್ಣವಾಗಿ ತಿಳಿಯುವುದು ಅಸಾಧ್ಯ. ಆದರೆ ತಮ್ಮ ಯಥಾಶಕ್ತಿ ಅರಿಯಲು ಎಲ್ಲರಿಗೂ ಏಕೆ ಸಾಧ್ಯವಾಗುವುದಿಲ್ಲ ಎನ್ನುವುದನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(26) ‘O Arjuna! I know all beings in the past, the present and the future. But no one knows me.’