एतद्योनीनि भूतानि सर्वाणीत्युपधारय ।
अहं कृत्स्नस्य जगतः प्रभवः प्रलयस्तथा ॥
etadyonīni bhūtāni sarvāṇītyupadhāraya |
ahaṃ kṛtsnasya jagataḥ prabhavaḥ pralayastathā ||
Sri Madhvacharya (1238–1317)Bhagavad Gita Tatparya Nirnaya
7.4–7.6
‘अचेतना चेतनेति द्विविधा प्रकृतितिर्मता।
त्रिगुणाऽचेतना तत्र चेतना श्रीर्हरिप्रिया।
ते उभे विष्णुवशगे जगतः कारणे मते।
पिता विष्णुः स जगतो माता श्रीर्या त्वचेतना।
उपादानं तु जगतः सैव विष्णुबलेरिता॥’ इति च॥04-06॥
Swami Sivananda (1887–1963)Bhagavad Gita
6. Know that these two (My higher and lower Natures) are the womb of all beings. So, I am
the source and dissolution of the whole universe.
Bannanje Govindacharya (1936–2020)Bhagavad Gita Pravachana
ಏತತ್ ಯೋನೀನಿ ಭೂತಾನಿ ಸರ್ವಾಣಿ ಇತಿ ಉಪಧಾರಯ |
ಅಹಮ್ ಕೃತ್ಸ್ನಸ್ಯ ಜಗತಃ ಪ್ರಭವಃ ಪ್ರಳಯಃ ತಥಾ-ಈ ಎರಡು ಪ್ರಕೃತಿಗಳಿಂದಲೇ ಎಲ್ಲಾ ಜೀವಿಗಳು
ರೂಪುಗೊಂಡಿವೆ ಎಂದು ತಿಳಿ. ನಾನೇ ಜಗದ ಎಲ್ಲಾ ಹುಟ್ಟು-ಸಾವುಗಳಿಗೆ ಕಾರಣನಾಗಿದ್ದೇನೆ.
ಜಡ ಪ್ರಕೃತಿ ಮತ್ತು ಚಿತ್ ಪ್ರಕೃತಿ ಇವೇ ಇಡೀ ಜಗತ್ತಿನ ಎಲ್ಲಾ ಜೀವಜಾತಕ್ಕೆ ಮೂಲ ಕಾರಣ. ಭಗವಂತ
ಜೀವಜಾತದ ಹಿಂದೆ ತಂದೆಯಾಗಿ, ಲಕ್ಷ್ಮೀದೇವಿ ತಾಯಿಯಾಗಿ ನಿಂತು ಈ ಜಗತ್ತನ್ನು ಸೃಷ್ಟಿ ಮಾಡಿದರು.
ತಾಯಿಯ ಗರ್ಭದಲ್ಲಿ ಬೆಳೆಯುವ ಭ್ರೂಣದಂತೆ ಜಡಪ್ರಕೃತಿ ವಿಕಾರಗೊಂಡಿತು. ಹೀಗೆ ಚಿತ್ ಪ್ರಕೃತಿ ಜಡ
ಪ್ರಕೃತಿಗೆ ರೂಪ ಕೊಟ್ಟಳು, ಕೊಟ್ಟು ಧಾರಣೆ ಮಾಡಿದಳು, ಅದೇ ಜಗತ್ತಾಯಿತು.
ಭಗವಂತನ ಶಕ್ತಿ ಆಧಾನದಿಂದ, ಪ್ರೇರಣೆಯಿಂದ, ಜಡ ಮತ್ತು ಚಿತ್ ಪ್ರಕೃತಿಯ ಮೂಲಕ ಈ ಜಗತ್ತಿನ ಹುಟ್ಟಿಗೆ
ಭಗವಂತ ಹೇಗೆ ಕಾರಣನೋ, ಹಾಗೇ ಇಡೀ ಜಗತ್ತಿನ ಪ್ರಳಯ ಕೂಡಾ ಭಗವಂತ. ಕೃಷ್ಣ ಹೇಳುತ್ತಾನೆ “ ಸಮಸ್ತ
ಜಗತ್ತಿನ ಉತ್ಪತ್ತಿಗೆ ಮೂಲ ಕಾರಣ ನಾನು, ಜಗತ್ತಿನ ಸಂಹಾರಕ್ಕೆ ಕಾರಣ ನಾನು” ಎಂದು. ಈ ಜಗತ್ತಿನ ಹುಟ್ಟಿನ
ಮೊದಲಿದ್ದವ, ಹುಟ್ಟಿಗೆ ಕಾರಣ, ಸಂಹಾರಕ್ಕೆ ಕಾರಣ, ಸಂಹಾರದ ನಂತರ ಇರುವವ ಆ ಭಗವಂತ.
ನಮ್ಮಲ್ಲಿ ಕೆಲವರು ಕೇಳುವುದಿದೆ: ಜಡಪ್ರಕೃತಿಗೆ ನಿಯಾಮಕ ಶಕ್ತಿ- ಚೇತನಪ್ರಕೃತಿ, ಚೇತನ ಪ್ರಕೃತಿಯನ್ನು
ಪ್ರೇರಣೆ ಮಾಡಿ ಸೃಷ್ಟಿ ಸಂಹಾರದಲ್ಲಿ ತೊಡಗಿಸುವವ 'ಪುರುಷ' ನಾಮಕ ಭಗವಂತ. ಹಾಗಾದರೆ ಈ
ಭಗವಂತನನ್ನು ನಿಯಂತ್ರಿಸುವವರು ಯಾರು? ಎಂದು. ಇದಕ್ಕೆ ಕೃಷ್ಣ ಮುಂದಿನ ಶ್ಲೋಕದಲ್ಲಿ ಉತ್ತರಿಸುತ್ತಾನೆ.
Bibek Debroy (1955–2024)The Bhagavad Gita
(6)
‘Know all matter9 to be born from these.10 I am the reason for the creation
of the entire universe and its destruction.’