प्रयाणकाले मनसाऽचलेन
भक्त्या युक्तो योगबलेन चैव ।
भ्रुवोर्मध्ये प्राणमावेश्य सम्यक्
स तं परं पुरुषमुपैति दिव्यम् ॥
prayāṇakāle manasā'calena
bhaktyā yukto yogabalena caiva |
bhruvormadhye prāṇamāveśya samyak
sa taṃ paraṃ puruṣamupaiti divyam ||
Swami Sivananda (1887–1963)Bhagavad Gita
10. At the time of death, with unshaken mind, endowed with devotion and by the power of
Yoga, fixing the whole life-breath in the middle of the two eyebrows, he reaches that resplendent
Supreme Person.
Bannanje Govindacharya (1936–2020)Bhagavad Gita Pravachana
ಪ್ರಯಾಣ ಕಾಲೇ ಮನಸಾ ಅಚಲೇನ 2359, ಯುಕ್ತಃ ಯೋಗಬಲೇನ ಚ ಏವ |
ಭ್ರುವೋಃ ಮಧ್ಯೇ ಪ್ರಾಣಮ್ ಆವೇಶ್ಯ ಸಮ್ಯಕ್ ಸಃ ತಮ್ ಪರಮ್ ಪುರುಷಮ್ ಉಪೈತಿ ದಿವ್ಯಮ್ -ಕೊನೆಯ
ಕಾಲದಲ್ಲಿ ಭಗವಂತನಲ್ಲಿ ಭಕ್ತಿಯಿಟ್ಟು, ಬಿಗಿಯಾದ ಬಗೆಯಿಂದ , ಹುಬ್ಬುಗಳ ನಡುವೆ ಪ್ರಾಣವಾಯುವನ್ನು
ಕದಲದಂತೆ. ಇರಗೊಳಿಸಿ, ಪ್ರಾಹಾಯಾಮದ ಯೋಗದ ಮೂಲಕ ಕೂಡಾ ಲೀಲಾಲೋಲನಾದ ಆ
ಪರಮಪುರುಷನನ್ನು ಪಡೆಯಬಹುದು.
ಭಗವಂತನನ್ನು ಸೇರುವ ಇನ್ನೊಂದು ಮಾರ್ಗ ಹಠಯೋಗ. ಈ ಮಾರ್ಗ ಕರಠಿಣವಾದದ್ದು. ಇದು
ಯಮನಿಯಮನ-ಪ್ರಾಣಾಯಾಮ-ಪ್ರತ್ಯಾಹಾರಗಳಿಂದ ಭಗವಂತನನ್ನು ಸೇರುವ ಬಗೆ. ಈ ಮಾರ್ಗದಲ್ಲಿ
ಸಾಧನೆ ಮಾಡುವವರು ತಮ್ಮ ಸಾವಿನ ಕಾಲದಲ್ಲಿ ಏನು ಮಾಡಬೇಕು ಎನ್ನುವುದನ್ನು ಕೃಷ್ಣ ಈ ಶ್ಲೋಕದಲ್ಲಿ
ವಿವರಿಸುತ್ತಾನೆ. ಆಸನ ಪ್ರಾಣಾಯಾಮ ಮಾಡಿ ಸ್ಥಿರವಾದ ದೇಹ, ಸ್ಥಿರವಾದ ಪ್ರಾಣಮಯ ಕೋಶವನ್ನು
ಸಾಧಿಸಿದ ಮೇಲೆ, ಪ್ರತ್ಯಾಹಾರದ ಮೂಲಕ ತನ್ನೊಳಗೆ ತುಂಬಿದ ಕೆಟ್ಟ ಸಂಗತಿಗಳನ್ನು ಹೊರ ಹಾಕಿ, ಕೆಟ್ಟ
ವಿಚಾರ ಒಳಬಾರದಂತೆ ತಡೆದು, ಏಕಾಗ್ರತೆ ಸಾಧಿಸುವುದು. ಇದು ತುಂಬಾ ಥೀರ್ಥವಾದ ಕಠಿಣ ಸಾಧನೆ.
ಇಂತವರು ತಮ್ಮ ಹೃತ್ಕಮಲ ಮಧ್ಯ(ಅನಾಹತ ಚಕ್ರ) ದಲ್ಲಿ ಪ್ರಾಣಶಕ್ತಿಯೊಂದಿಗಿರುವ ಜೀವವನ್ನು ಅಲ್ಲಿಂದ
ಊರ್ಧ್ವ ಮುಖವಾಗಿ ವಿಶುದ್ಧಿಚಕ್ರದ ಮೂಲಕ ಭ್ರುಮಧ್ಯ (ಎರಡು ಹುಬ್ಬುಗಳ ನಡುವೆ ಇರುವ ಆಜ್ಞಾ ಚಕ್ರ)
ತಂದು ನಿಲ್ಲಿಸಬೇಕು. ಈ ಪ್ರಕ್ರಿಯೆ ಅತ್ಯಂತ ಕಠಿಣ. ಈ ಸಂಪೂರ್ಣ ಕ್ರಿಯೆಯಲ್ಲಿ ಅನನ್ಯ ಭಕ್ತಿ ಬಹಳ ಮುಖ್ಯ. ಈ
ರೀತಿ ಭ್ರುಮಧ್ಯದಿಂದ ಸಹಸ್ರಾರದ ಬ್ರಹ್ಮರಂದ್ರದ ಮೂಲಕ ಜೀವ ಹೊರ ಹೋದರೆ ಅವರು ನೇರವಾಗಿ
ಭಗವಂತನನ್ನು ಸೇರುತ್ತಾರೆ.
ಈ ರೀತಿಯ ಹಠಯೋಗ ಕಠಿಣ ಸಾಧನವಾಗಿರುವುದರಿಂದ ಪ್ರಾಚೀನರು ಅದಕ್ಕೆ ಪೂರಕವಾದ ಅತ್ಯಂತ ಸರಳ
ವಿಧಾನವನ್ನು ತಮ್ಮ ದೈನಂದಿನ ಜೀವನದಲ್ಲಿ ತೊಡಗಿಸಿಕೊಂಡಿದ್ದರು. ಇದಕ್ಕೆ ಉತ್ತಮ ಉದಾಹರಣೆ
ಊರ್ಧ್ವಪುಂಡ್ರ. ಇದು ಜೀವದ ಊರ್ಧ್ವಮುಖ ಗತಿಗೆ ಸಂಬಂಧಪಟ್ಟದ್ದು. ಇದು ಪೂರ್ಣ ಪ್ರಮಾಣದಲ್ಲಿ
ದೇಹದಲ್ಲಿರುವ ಶಕ್ತಿ ಕೇಂದ್ರಗಳನ್ನು ಜಾಗೃತಿಗೊಳಿಸುವ ಒಂದು ಸರಳ ವಿಧಾನ. [ಆದರೆ ಇಂದು ನಾವು ಏಕೆ
ನಾಮ ಹಾಕಿ ಕೊಳ್ಳುತ್ತೇವೆ ಎನ್ನುವುದೇ ನಮಗೆ ತಿಳಿದಿಲ್ಲ].
ಹಠಯೋಗವನ್ನು ಸರಿಯಾದ ಮಾರ್ಗದರ್ಶನ ಇಲ್ಲದೆ ಮಾಡುವುದು ಅಪಾಯಕಾರಿ. ಭಾಗವತದ ದ್ವಿತೀಯ
०८८९ ಜೀವವನ್ನು ಮೇಲಕ್ಕೆ ಕೊಂಡೊಯ್ಯುವ ಹಂತವನ್ನು ಒಂದು ಅಧ್ಯಾಯದಲ್ಲಿ ವಿವರವಾಗಿ
ವಿವರಿಸಿದ್ದಾರೆ. ಹೀಗೆ ಯೋಗದ ಮೂಲಕ ಹಠಮಾಡಿ ಭಗವಂತನನ್ನು ಸೇರಬಹುದು, ಅಥವಾ ತಾಯಿಯಲ್ಲಿ
ಮಗು ಹಠಮಾಡಿದಂತೆ ಭಗವಂತನಲ್ಲಿ ಭಕ್ತ ಸದಾ ಭಕ್ತಿಯೆಂಬ ಹಠಮಾಡಿ ಆತನನ್ನು ಸೇರಬಹುದು.
ಹೀಗೆ ಭ್ರುಮಧ್ಯದಲ್ಲಿ ಜೀವವನ್ನು ತಂದು ನಿಲ್ಲಿಸುವ ವಿಧಾನವನ್ನು ವಿವರಿಸಿದ ಕೃಷ್ಣ, ಅಲ್ಲಿಂದ ಮುಂದೆ
ಸಹಸ್ರಾರದ ಶಕ್ತಿ ಕೇಂದ್ರದ ದ್ವಾರದ ಮೂಲಕ ಜೀವ ಹೊರ ಹೋಗುವ ವಿಧಾನವನ್ನು ಇನ್ನೂ ವಿವರವಾಗಿ
ಮುಂದಿನ ಮೂರು ಶ್ಲೋಕದಲ್ಲಿ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(10)
‘...At the time of death,13 with devotion, with the mind fixed, with the
strength of yoga used to hold the breath of life between the brows, he
attains the resplendent supreme spirit.’