मामुपेत्य पुनर्जन्म दुःखालयमशाश्वतम् ।
नाप्नुवन्ति महात्मानः संसिद्धिं परमां गताः ॥
māmupetya punarjanma duḥkhālayamaśāśvatam |
nāpnuvanti mahātmānaḥ saṃsiddhiṃ paramāṃ gatāḥ ||
Swami Sivananda (1887–1963)Bhagavad Gita
15. Having attained Me these great souls do not again take birth (here), which is the place of
pain and is non-eternal; they have reached the highest perfection (liberation).
Bannanje Govindacharya (1936–2020)Bhagavad Gita Pravachana
ಮಾಮ್ ಉಪೇತ್ಯ ಪುನಃ ಜನ್ಮ ದುಃಖ ಆಲಯಮ್ ಅಶಾಶ್ವತಮ್ |
ನ ಅಪ್ಪುವಂತಿ ಮಹಾ ಆತ್ಮಾನಃ ಸಂಸಿದ್ಧಿಮ್ ಪರಮಾಮ್ ಗತಾಃ -ಹಿರಿಯ ಸಿದ್ಧಿಯನ್ನು ಪಡೆದ ಇಂತಹ
ಜೀವಗಳು ನನ್ನನ್ನು ಪಡೆದ ಮೇಲೆ ದುಗುಡಗಳ ನೆಲೆಯಾದ ನಾಲ್ಕು ದಿನದ ಈ ಸಂಸಾರದಲ್ಲಿ ಮರಳಿ ಹುಟ್ಟಿ
ಬರುವುದಿಲ್ಲ.
ಸಾಧನೆಯ ಮೂಲಕ ಸಿದ್ಧಿಯನ್ನು ಪಡೆದು ಭಗವಂತನನ್ನು ಸೇರಿದ ಜೀವರು ಎಂದೂ ದುಃಖಮಾಯವಾದ ಮತ್ತು
ಅಶಾಶ್ವತವಾದ ಈ ಸಂಸಾರದಲ್ಲಿ ಮರಳಿ ಹುಟ್ಟುವುದಿಲ್ಲ. “ನನ್ನನ್ನು ಬಂದು ಸೇರುವವರು ಪುಣ್ಯಾತ್ಮರು.
ಜಗತ್ತಿನಲ್ಲಿ, ಜೀವನದ ಸಾಧನೆಯಲ್ಲಿ ಅತ್ಯಂತ ಶ್ರೇಷ್ಠವಾದ ಸಿದ್ದಿ ಎಂದರೆ ಭಗವಂತನ ಸಾಕ್ಷಾತ್ಕಾರ. ಅದನ್ನು
ಪಡೆದವರು ಮತ್ತೆ ಸಂಸಾರದ ಬಂಧದಲ್ಲಿ ಸಿಲುಕಿ ಒದ್ದಾಡುವ ಅಗತ್ಯವಿಲ್ಲ” ಎನ್ನುತ್ತಾನೆ ಕೃಷ್ಣ.
Bibek Debroy (1955–2024)The Bhagavad Gita
(15)
‘Great souls who attain me, because they have achieved supreme liberation,
are freed from rebirth, which is transient and the abode of sorrow.’