8.28

वेदेषु यज्ञेषु तपःसु चैव
दानेषु यत्पुण्यफलं प्रदिष्टम् ।
अत्येति तत्सर्वमिदं विदित्वा
योगी परं स्थानमुपैति चाद्यम् ॥
vedeṣu yajñeṣu tapaḥsu caiva
dāneṣu yatpuṇyaphalaṃ pradiṣṭam |
atyeti tatsarvamidaṃ viditvā
yogī paraṃ sthānamupaiti cādyam ||
Sri Madhvacharya (1238–1317)Bhagavad Gita Tatparya Nirnaya
8.27–8.28
‘मार्गौ ब्रह्म च यः पश्येत् साक्षादेवापरोक्षतः। सर्वपुण्यातिगोऽमुह्यन् यात्यसौ ब्रह्मतत् परम्’ इति च॥27-28॥
Swami Sivananda (1887–1963)Bhagavad Gita
28. Whatever fruits or merits is declared (in the scriptures) to accrue from (the study of) the Vedas, (the performance of) sacrifices, (the practice of) austerities, and (the offering of) gifts—beyond all these goes the Yogi, having known this; and he attains to the supreme primeval (first or ancient) Abode.
Bannanje Govindacharya (1936–2020)Bhagavad Gita Pravachana
ವೇದೇಷು ಯಜ್ಞೇಷು ತಪಸ್ಸು ಚ ಏವ ದಾನೇಷು ಯತ್‌ ಪುಣ್ಯಫಲಮ್‌ ಪ್ರದಿಷ್ಟಮ್‌ | ಅತ್ಯೇತಿ ತತ್‌ ಸರ್ವಮ್‌ ಇದಮ್‌ ವಿದಿತ್ವಾ ಯೋಗೀ ಪರಮ್‌ ಸ್ಥಾನಮ್‌ ಉಪೈತಿ ಚ ಆದ್ಯಮ್‌ -ವೇದವನ್ನು ಓದಿದರೆ, ಯಜ್ಞಗಳನ್ನು ಮಾಡಿದರೆ, ತಪಗಳನ್ನು ಆಚರಿಸಿದರೆ, ದಾನಗಳನ್ನು ನೀಡಿದರೆ ಏನು ಪುಣ್ಯಫಲ ಹೇಳಲಾಗಿದೆಯೋ ಅದನ್ನೆಲ್ಲಾ ಮೀರಿ ನಿಲ್ಲುತ್ತಾನೆ ಇದನ್ನು ಬಲ್ಲ ಸಾಧಕ; ಎಲ್ಲಕ್ಕೂ ಮೊದಲ ಹಿರಿಯ ತಾಣವನ್ನು ಸೇರುತ್ತಾನೆ. ಉಪಸಂಹಾರ ಮಾಡುತ್ತಾ ಕೃಷ್ಣ ಹೇಳುತ್ತಾನೆ-ಎಲ್ಲಕ್ಕೆಂತ ಮಿಗಿಲಾದ ತಿಳಿವು ಅಂದರೆ ಈ ಅಂತ್ಯ ಕಾಲದ ಅರಿವು ಎಂದು . ಸಮಸ್ತ ಶಾಸ್ತ್ರದಲ್ಲಿ ಯಜ್ಞ-ದಾನ-ತಪಸ್ಸುಗಳ ಮೂಲಕ ಏನು ಪುಣ್ಯ ಹೇಳಿದ್ದಾರೆ, ಈ ಅಂತ್ಯ ಕಾಲದ ಸಾವಿನ ರಹಸ್ಯದ ಅರಿವು ಈ ಎಲ್ಲಾ ಪುಣ್ಯ ಫಲವನ್ನು ಮೀರಿ ನಿಲ್ಲುತ್ತದೆ. ಆದ್ದರಿಂದ ಎಲ್ಲಕ್ಕಿಂತ ದೊಡ್ಡ ಸಾಧನೆ ಅಂತ್ಯ ಕಾಲದ ಚಿಂತನೆ. ಈ ಕಾರಣದಿಂದ ಬದುಕಿಗಿಂತ ಸಾವಿನ ಬಗ್ಗೆ ಹೆಚ್ಚು ಚಿಂತನೆಯ ಅಗತ್ಯವಿದೆ. ಸಾವು ಅಮಂಗಳವಲ್ಲ. ಸಾವು ದುಃಖದ ಅನುಭವ ಎನ್ನುವುದು ನಮ್ಮ ಭ್ರಮೆ. ದೇಹದ ಒಳಗಿರುವಾಗ ಭೌತಿಕ ಶರೀರದ ಎಲ್ಲಾ ಯಾತನೆ ಜೀವಕ್ಕೆ ಅಂಟಿಕೊಂಡಿರುತ್ತದೆ. ಸಾವು ಎಂದರೆ ಈ ಸ್ಥೂಲ ಶರೀರದಿಂದ ಬಿಡುಗಡೆ. ಆದ್ದರಿಂದ ಸೂಕ್ಷ್ಮ ಶರೀರದಲ್ಲಿರುವ ಜೀವ ಪಂಜರದಿಂದ ಹೊರ ಬಂದು ಮುಕ್ತವಾಗಿ ಆಕಾಶದಲ್ಲಿ ಹಾರಾಡುವ ಪಕ್ಷಿಯಂತೆ. ಈ ಕಾರಣದಿಂದ ಸಾವಿನ ಭಯ ಬಿಟ್ಟು ಕೊನೇ ಕ್ಷಣದಲ್ಲಿ ಮಾಂಗಲಿಕವಾಗಿ ಎತ್ತರಕ್ಕೇರುವ ದೇವತಾ ಅನುಸಂಧಾನ ನಿರಂತರವಾಗಿ ನಮ್ಮ ಬದುಕಿನಲ್ಲಿರಬೇಕು. ಇತಿ ಅಷ್ಟಮೋಧ್ಯಾಯಃ ಎಂಟನೆಯ ಅಧ್ಯಾಯ ಮುಗಿಯಿತು
Bibek Debroy (1955–2024)The Bhagavad Gita
(28) ‘Knowing the prescribed good fruit that accrues from knowledge of the Vedas, yajnas, practice of austerities and donation of alms, the yogi transcends all these and attains the supreme and original abode.’