श्रीभगवानुवाच ।
अक्षरं ब्रह्म परमं स्वभावोऽध्यात्ममुच्यते ।
भूतभावोद्भवकरो विसर्गः कर्मसंज्ञितः ॥
śrībhagavānuvāca |
akṣaraṃ brahma paramaṃ svabhāvo'dhyātmamucyate |
bhūtabhāvodbhavakaro visargaḥ karmasaṃjñitaḥ ||
Sri Madhvacharya (1238–1317)Bhagavad Gita Tatparya Nirnaya
8.3–8.4
परमाक्षरं विष्णुरेव मुख्यत इति प्रसिद्धत्वात् तथैव परिहरति। अज्ञानां तदपि ज्ञापयितुं तथैव
परिहारः। पुनरहमिति नोक्तमित्याशङ्का ‘अव्यक्तं व्यक्तिमापन्नम्’ इति विष्णावेव प्रयुक्तेनाव्यक्तशब्देन
‘अव्यक्तोऽक्षर इत्युक्तः’ इति परिह्रियते। ‘ये चाप्यक्षरमव्यक्तम्’ इत्यत्र तु पृथक् प्रश्नादुपासकयोः
फलतारतम्यकथनात् कूटस्थोऽक्षर उच्यते’ इत्युक्ताक्षरादपि चोत्तमः इति
विष्णोरुत्तमत्वकथनाच्चान्यदेवेत्यवसीयते। ‘अधियज्ञोऽहमेव’ इति साधियज्ञमित्युक्त्वा
प्राप्तभेदनिवृत्यर्थम्। तस्मैव सर्वप्राणिदेहस्थितरूपान्तरापेक्षया सहितत्वं युज्यते।
‘प्राणिनां देहगो विष्णुरधियज्ञ इतीरितः।
स एव व्याप्तरूपेण ब्रह्मेति परिकीर्त्यते।
तैस्तैरधिकयज्यत्वाद् बृंहितत्वाच्च हेतुतः।
अध्यात्मं तत्स्वभावो यदधिकः परमात्मगः।
पुंसां सजडभावानां सर्गः कर्म हरेः स्मृतम्।
भूताधिकत्वतो जीवा अधिभूतमितीरिताः।
अधिको दैवतं विष्णुरेव यस्यास्तु सा रमा।
पुरुप्राणाधिदैवाख्या त्विति ज्ञेयमिदं नरैः’ इति तत्त्वविवेके।
कथंरूपोऽधियज्ञ इति प्रश्नस्तु ‘अहमेव’ इत्युक्तत्वात् तल्लक्षणोक्त्यैव परिहृतः॥03-04॥
Swami Sivananda (1887–1963)Bhagavad Gita
3. Brahman is the Imperishable, the Supreme; His essential nature is called Self-knowledge;
the offering (to the gods) which causes existence and manifestation of beings and which also
sustains them is called action.
Bannanje Govindacharya (1936–2020)Bhagavad Gita Pravachana
ಭಗವಾನ್ ಉವಾಚ - ಭಗವಂತ ಹೇಳಿದನು:
ಅಕ್ಷರಮ್ ಬ್ರಹ್ಮ ಪರಮಮ್ ಸ್ವಭಾವಃ ಅಧ್ಯಾತ್ಮಮ್ ಉಚ್ಯತೇ |
ಭೂತ ಭಾವ ಉದ್ಭವ ಕರಃ ವಿಸರ್ಗಃ ಕರ್ಮ ಸಂಜ್ಞಿತಃ -- ಪರಮಾಕ್ಷರ ಎನಿಸಿದ ಪರತತ್ವವೇ “ಬ್ರಹ್ಮ”.
ಜೀವಸ್ವರೂಪ ಮತ್ತು ಜೀವಕ್ಕೆ ಸಂಬಂಧಿಸಿದ ಸಮಷ್ಟಿ ಪಿಂಡಾಂಡವನ್ನು [ಭಗವಂತನ ಬಗೆಯ ನಿಲುವನ್ನು]
"ಅಧ್ಯಾತ್ಮ' ಎನ್ನುತ್ತಾರೆ. ಜೀವ-ಜಡಗಳ ಅಭಿವ್ಯಕ್ತಿಗೆ ಕಾರಣವಾದ ಭಗವಂತನ ಬಗೆಬಗೆಯ ಸೃಷ್ಟಿಕ್ರಿಯೆಗೆ
'ಕರ್ಮ' ಎಂದು ಹೆಸರು.
ಕೃಷ್ಣ ಹೇಳುತ್ತಾನೆ WB, ಅಂದರೆ “ಪರಮಂ ಬ್ರಹ್ಮ -ಪರಮಂ ಅಕ್ಷರ' ಎಂದು. ಭಗವಂತ ಎಲ್ಲರಿಗಿಂತ
ಹಿರಿದಾದ ಪರಮಮ್ ಬ್ರಹ್ಮ- ಆತ ಪರಮಾಕ್ಷರ. ಅಂತಹ ಭಗವಂತನ ಬಗೆಗೆ ತಿಳಿದುಕೊಳ್ಳಬೇಕು ಎನ್ನುವುದು
'ಬ್ರಹ್ಮ' ಪದದ ಹಿಂದಿನ ಅರ್ಥ. ವಿಷ್ಣು ಸಹಸ್ರನಾಮದಲ್ಲಿ ಭಗವಂತನನ್ನು ಈ ರೀತಿ ವರ್ಣಿಸಿದ್ದಾರೆ:
ಪರಮಂ ಯೋ ಮಹತ್ತೇಜಃ ಪರಮಂ ಯೋ ಮಹತ್ತಪಃ |
ಪರಮಂ ಯೋ ಮಹದ್ಭಹ್ಮ ಪರಮಂ ಯಃ ಪರಾಯಣಮ್ ||
ಭಗವಂತ ಬೆಳಕುಗಳಿಗೆ ಬೆಳಕು ನೀಡುವ ಸ್ವರೂಪ; ಎಲ್ಲರ ಚಿಂತನೆಯ ಕೊನೆಯ ಗುರಿ; ಎಲ್ಲಾ ಜ್ಞಾನದ ಗಮ್ಯ ಆ
ಭಗವಂತ. ಇಲ್ಲಿ ಭಗವಂತನನ್ನು 'ಪರಮ ಮಹಾ ಬ್ರಹ್ಮ' ಎನ್ನುತ್ತಾರೆ. ಬ್ರಹ್ಮ ಎಂದರೆ ಜೀವರು; ಪರಬ್ರಹ್ಮ
ಎಂದರೆ ಮುಕ್ತರಾದ ಜೀವರು; ಪರಮಬ್ರಹ್ಮ ಎಂದರೆ ಶ್ರೀತತ್ವ,-ನಿತ್ಯ ಮುಕ್ತಳಾದ ಶ್ರೀಲಕ್ಷ್ಮಿ. ಪರಮ ಮಹಾ
ಬ್ರಹ್ಮ ಎಂದರೆ ನಾರಾಯಣ. ಭಗವಂತ ಪರಾಯಣರಿಗೂ ಕೂಡಾ ಪರಮ. ಇಲ್ಲಿ ಪರಾಯಣರು ಎಂದರೆ ನಮಗೆ
ಆಸರೆಯಾಗಿರುವ ತತ್ತ್ವಾಭಿಮಾನಿ ದೇವತೆಗಳು. ಭಗವಂತ ಸರ್ವ ದೇವತೆಗಳ ಒಡೆಯ. ಇದು ನಾವು
ತಿಳಿದುಕೊಳ್ಳಬೇಕಾದ ಆರು ಸಂಗತಿಗಳಲ್ಲಿ ಒಂದಾದ 'ಬ್ರಹ್ಮ' ಪದದ ಅರ್ಥ.
ಮುಂದುವರಿದು ಕೃಷ್ಣ ಹೇಳುತ್ತಾನೆ: “ಸ್ವಭಾವಃ ಅಧ್ಯಾತ್ಮಮ್ ಉಚ್ಯತೇ” ಎಂದು. ಇಲ್ಲಿ ಸ್ವಭಾವ ಎಂದರೆ
ತನ್ನತನ. ಜೀವದ ಇರವಿನ ಬಗೆ ಮತ್ತು ಜೀವ ಸ್ವಭಾವ. ನಾವು ಭಗವಂತನನ್ನು ಅರಿಯುವ ಮೊದಲು ನಮ್ಮ
ಜೀವ ಸ್ವಭಾವವನ್ನು ಅರಿಯಬೇಕು. ನಾನು ಅಂದರೆ ಏನು? ನನ್ನಲ್ಲಿರುವ ಉತ್ತಮ ©oJ(plus point)
ಯಾವುದು? ಕೆಟ್ಟ ©0oF(minus point) ಯಾವುದು ಎಂದು ನಿರಂತರ ನಾವು ನಮ್ಮನ್ನು ತಿಳಿಯಲು
ಪ್ರಯತ್ನಿಸಬೇಕು [ಆದರೆ ನಾವು ನಮ್ಮ ಹೆಚ್ಚಿನ ಸಮಯವನ್ನು ಇನ್ನೊಬ್ಬರ ಬಗ್ಗೆ ತೀರ್ಪು ಕೊಡುವುದರಲ್ಲಿ
ಕಳೆಯುತ್ತೇವೆ!॥] . ನಮಗೆ ಈ ದೇಹದಲ್ಲಿ ಕಣ್ಣು, ಕೈ, ಕಾಲು ಹಾಗೂ ಇತರ ಅಂಗಾಂಗಗಳನ್ನು ಬಿಟ್ಟು ಒಂದು
"ನಾನು' ಅನ್ನುವ ವಸ್ತುವಿದೆ ಎನ್ನುವ ಅರಿವೇ ಇರುವುದಿಲ್ಲ [awareness of self]. ಮೊದಲು ನಾವು ಜೀವದ
ಇರುವಿಕೆಯನ್ನು ತಿಳಿದುಕೊಳ್ಳಬೇಕು. ನಂತರ ಅದರ ಸ್ವಭಾವವೇನು ಎಂದು ತಿಳಿಯಬೇಕು. [ಸಾಮಾನ್ಯವಾಗಿ
ನಮಗೆ ನಮ್ಮ ಜೀವ ಸ್ವಭಾವ ಏನು ಎಂದು ತಿಳಿದಿರುವುದಿಲ್ಲ. ನಾವು ಪ್ರಭಾವದಲ್ಲೇ ಬದುಕುತ್ತಿರುತ್ತೇವೆ.]
ಜೀವ ಅನ್ನುವುದು ಅತೀ ಸೂಕ್ಷ್ಮವಾದ ವಸ್ತು. ಅದು ಹೃತ್ಕಮಲ ಮಧ್ಯದಲ್ಲಿ ಅನಾಹತ ಚಕ್ರ(!1)73ಟ5
०।३।१५) 2८०९ ಶಕ್ತಿ ಕೇಂದ್ರದಲ್ಲಿದೆ. ಈ ಜೀವ ಎನ್ನು ವುದು ಕೋಣೆಯಲ್ಲಿ ಹಚ್ಚಿದ ಪುಟ್ಟ ದೀಪದಂತೆ. ದೀಪ ಇಡೀ
ಕೋಣೆಯನ್ನು ಬೆಳಗಿಸುವಂತೆ, ಜೀವ ಅತಿ ಸೂಕ್ಷ್ಮವಾದರೂ ಕೂಡಾ ಅದರ ಬೆಳಕು ಇಡೀ ದೇಹವನ್ನು
ವ್ಯಾಪಿಸಿರುತ್ತದೆ. ಇಂತಹ ಜೀವ ಮತ್ತು ಜೀವ ಸ್ವಭಾವವೇ 'ಅಧ್ಯಾತ್ಮ'.
ಕೃಷ್ಣ ಮುಂದುವರಿದು ಹೇಳುತ್ತಾನೆ: “ಈ ಪ್ರಪಂಚ ಎಂದರೆ ಭೂತ DA) ಭಾವ-ಅಂದರೆ ಇದು ಜೀವ ಮತ್ತು
ಜಡದ ಸೃಷ್ಟಿ” ಎಂದು. ನಾವು ಈ ಜಗತ್ತಿನಲ್ಲಿದ್ದೇವೆ. ಇಂತಹ ಜಗತ್ಸು ಹೇಗೆ ಸೃಷ್ಟಿಯಾಯಿತು? ಯಾವಾಗ
ಸೃಷ್ಟಿಯಾಯಿತು? ಅದರ ಹಿಂದಿರುವ ಮೂಲದ್ರವ್ಯ ಯಾವುದು? ಅದರ ನಿಮಿತ್ತ ಮತ್ತು ಉಪಧಾನ ಕಾರಣ
ಯಾರು? ಜೀವ ದೇಹದಮೂಲಕ ಹುಟ್ಟುವುದು ಏಕೆ? ಎಲ್ಲವನ್ನೂ ವ್ಯವಸ್ಥಿತವಾಗಿ ನಡೆಸುತ್ತಿರುವ ಆ ಮಹಾ ಶಕ್ತಿ
ಯಾವುದು? ಹೀಗೆ ಚಿಂತನೆ ಮಾಡಿದಾಗ ನಮಗೆ ಒಂದು ವಿಷಯ ತಿಳಿಯುತ್ತದೆ-ಅದೇ ಕರ್ಮ ಸಿದ್ಧಾಂತ. ಈ
ಜೀವಜಾತವನ್ನು ಮತ್ತು ಜಡಪ್ರಪಂಚವನ್ನು ಸೃಷ್ಟಿ ಮಾಡುವ ಮೂಲ ಶಕ್ತಿ ಆ ಭಗವಂತ. ಅವನ ಕ್ರಿಯೆಯೇ
ನಿಜವಾದ ಕ್ರಿಯೆ. ಈ ಪ್ರಪಂಚದ ವೈವಿಧ್ಯಮಯವಾದ ಸೃಷ್ಟಿಯ ಮೂಲವನ್ನು ತಿಳಿದಾಗ ನಿಜವಾದ ಕರ್ಮ
ತಿಳಿಯುತ್ತದೆ. ನಾವೆಲ್ಲರೂ ಕೂಡಾ ಭಗವಂತ ಸೃಷ್ಟಿ ಮಾಡಿದ ಗೊಂಬೆಗಳು-ಆತ ಸೂತ್ರದಾರ. ನಮ್ಮ ಕ್ರಿಯೆ ಆ
ಸೂತ್ರದಾರನ ನಿಯಮಕ್ಕೆ ಬದ್ಧ. ಇಡೀ ವಿಶ್ವಚಕ್ರ ಭಗವಂತನ ಅಧೀನವಾಗಿ ತಿರುಗುತ್ತಿದೆ. ಭಗವಂತನ ಕ್ರಿಯೆ
ಮಹಾಕ್ರಿಯೆ. ನಮ್ಮ ಕ್ರಿಯೆ -ಸುತ್ತುತ್ತಿರುವ ಮಹಾ ಚಕ್ರದ ಮೇಲೆ ಚಲಿಸುತ್ತಿರುವ ಇರುವೆಯಂತೆ. ಇರುವೆ ಯಾವ
ದಿಕ್ಕಿಗೆ ಚಲಿಸಿದರೂ ಕೂಡಾ ಅದು ಚಲಿಸುವುದು ಚಕ್ರ ತಿರುಗಿದಂತೇ ಹೊರತು ಇರುವೆ ಚಲಿಸಿದಂತೆ ಚಕ್ರ
ತಿರುಗುವುದಿಲ್ಲ. ಅದೇ ರೀತಿ ಪ್ರಪಂಚದ ಗತಿ ನಮ್ಮ ಕ್ರಿಯೆಯ ಮೇಲೆ ನಿರ್ಧಾರವಲ್ಲ. ಅದು ತನ್ನ
ಗತಿಗನುಗುಣವಾಗಿ ನಿರಂತರ ನಡೆಯುತ್ತಿರುತ್ತದೆ. ಆದ್ದರಿಂದ “ನಾನು ಮಾಡಿದೆ” "ನನ್ನಿಂದಾಯ್ತು' ಎಂದು
ಅಹಂಕಾರ ಪಡುವುದರಲ್ಲಿ ಯಾವ ಅರ್ಥವೂ ಇಲ್ಲ. ಹೀಗೆ ಜೀವ ಜಡ ಪ್ರಪಂಚ ಸೃಷ್ಟಿಗೆ ಕಾರಣವಾಗಿರತಕ್ಕಂತಹ
ವಿಶಿಷ್ಟವಾದ ಸೃಷ್ಠಿ ಕ್ರಿಯೆಯೇ ನಿಜವಾದ “ಕರ್ಮ'.
ಈ ಶ್ಲೋಕವನ್ನು ಇನ್ನೊಂದು ಆಯಾಮದಲ್ಲಿ ನೋಡಿದಾಗ ಇದು ಹೊಸ ರೀತಿಯಲ್ಲಿ ತೆರೆದುಕೊಳ್ಳುತ್ತದೆ. ಇಲ್ಲಿ
ಜೀವ ಬರುವುದೇ ಇಲ್ಲ. ಎಲ್ಲಾ ಮೂರೂ ಸಂಗತಿಗಳೂ ಭಗವಂತನನ್ನು ಹೇಳುತ್ತವೆ. ಬ್ರಹ್ಮ ಎಂದರೆ 'ಭಗವಂತ' ;
ಸ್ವಭಾವ ಅಂದರೆ ಭಗವಂತನ ಸ್ವತಂತ್ರ ಭಾವ. ಆದ್ದರಿಂದ ಭಗವಂತನ ಗುಣ-ಧರ್ಮ ಚಿಂತನೆಯೇ ಅಧ್ಯಾತ್ಮ.
ನಮ್ಮಲ್ಲಿ ಕೆಲವರು ಕೇಳುವುದಿದೆ. “ಭಗವಂತನಿಗೆ ಏಕೆ ಈ ಸ್ವಭಾವ ? ಒಬ್ಬರಿಗೆ ಸುಖ, ಒಬ್ಬರಿಗೆ ದುಃಖ,
ಒಬ್ಬರಿಗೆ ಬಡತನ, ಒಬ್ಬರಿಗೆ ಸಿರಿತನ, ಒಬ್ಬರು ನರಕಕ್ಕೆ, ಒಬ್ಬರು ಸ್ವರ್ಗಕ್ಕೆ , ಏಕೆ ಈ ತಾರತಮ್ಯ 2" ಎಂದು.
ಇದು ಬಾಲಿಷ ಪ್ರಶ್ನೆ. ಇಂತಹ ವಾದದಿಂದಲೇ ನಮ್ಮಲ್ಲಿ ನಾಸ್ತಿಕತೆ ಹುಟ್ಟಿಕೊಂಡಿರುವುದು. ಜೀವ ಅನಾದಿನಿತ್ಯ,
ಅದನ್ನು. ಭಗವಂತ ಸೃಷ್ಟಿ. ಮಾಡುವುದಿಲ್ಲ. ಪ್ರತಿಯೊಂದು ಜೀವಸ್ವರೂಪದ ಗುಣಧರ್ಮ
ಸ್ವಭಾವಕ್ಕನುಗುಣವಾಗಿ, ಅರ್ಹತೆಗನುಗುಣವಾಗಿ, ಅವರವರನ್ನು ಸೃಷ್ಟಿ ಮಾಡುವುದು ಭಗವಂತನ ಸ್ವಭಾವ
ಆದ್ದರಿಂದ ಇಲ್ಲಿ ತಾರತಮ್ಯ ಅನ್ನುವ ಪ್ರಶ್ನೆಯೇ ಇಲ್ಲ. ಭಗವಂತನ ಸೃಷ್ಟಿಯ ಹಿಂದಿರುವ ಆತನ ಸ್ವಾತಂತ್ರ್ಯ;
ನಿಷ್ಪಕ್ಷಪಾತ; ಯಾವುದೇ ಪ್ರಭಾವಕ್ಕೊಳಗಾಗದಿರುವುದು; ತ್ರಿಗುಣಾತೀತತ್ವ-ಇವು ಭಗವಂತನ ಮೂಲಭೂತ
ಸ್ವಭಾವ. ಇದರ ಅರಿವೇ 'ಅಧ್ಯಾತ್ಮ'. ಭಗವಂತನ ಗುಣಧರ್ಮವನ್ನು ತಿಳಿದಾಗ ಅವನ ಸೃಷ್ಟಿ ಏನು ಎಂದು
ಅರ್ಥವಾಗುತ್ತದೆ. ಅದೇ ಕರ್ಮ. ಭಗವಂತನ ಕ್ರಿಯೆಯಲ್ಲಿ ಜ್ಞಾನ-ಇಚ್ಛೆ-ಕೃತಿ ಎನ್ನುವ ಮೂರು ಹಂತವಿಲ್ಲ. ಆತ
ಇಚ್ಚಿಸುವುದೇ ಕ್ರಿಯೆ. ಇದನ್ನು ತಿಳಿಯುವುದು “ಕರ್ಮದ ಅರಿವು'. ಹೀಗೆ ಭಗವಂತನ ಸ್ವರೂಪದ, ಗುಣಧರ್ಮದ
ಮತ್ತು ಕ್ರಿಯೆಯ ಅರಿವೇ -ಬ್ರಹ್ಮ ಅಧ್ಯಾತ್ಮ ಮತ್ತು ಕರ್ಮ.
Bibek Debroy (1955–2024)The Bhagavad Gita
(3)
Bhagavan6 said:
‘The indestructible brahman is the supreme spirit and its inhabitation of
individual beings is called adhyatma. Action is the offering7 that leads to
the creation and sustenance of all beings.’