तस्मात्सर्वेषु कालेषु मामनुस्मर युध्य च ।
मय्यर्पितमनोबुद्धिर्मामेवैष्यस्यसंशयः ॥ (संशयम्)
tasmātsarveṣu kāleṣu māmanusmara yudhya ca |
mayyarpitamanobuddhirmāmevaiṣyasyasaṃśayaḥ ||
·
तस्मात्सर्वेषु कालेषु मामनुस्मर युध्य च ।
मय्यर्पितमनोबुद्धिर्मामेवैष्यस्यसंशयः ॥ (संशयम्)
tasmātsarveṣu kāleṣu māmanusmara yudhya ca |
mayyarpitamanobuddhirmāmevaiṣyasyasaṃśayaḥ ||
तस्मात्सर्वेषु कालेषु मामनुस्मर युध्य च ।
मय्यर्पितमनोबुद्धिर्मामेवैष्यस्यसंशयम् ॥
tasmātsarveṣu kāleṣu māmanusmara yudhya ca |
mayyarpitamanobuddhirmāmevaiṣyasyasaṃśayam ||
Sri Madhvacharya (1238–1317)Bhagavad Gita Tatparya Nirnaya
8.7–8.8
‘युक्तचेतसः’ इति विशेषणान्नित्यं स्मरतामेवापरोक्षज्ञानं जायते।
भक्त्या ज्ञानानिषिद्धानां त्यागान्नित्यं हरिस्मृतेः।
अरागाद्विहितात्यागादित्येतैरेव संयुतैः।
अपरोक्षदर्शनं विष्णोर्जायते नान्यथा क्वचित्’
इति सत्तत्त्वे॥07-08॥
Swami Sivananda (1887–1963)Bhagavad Gita
7. Therefore, at all times remember Me only and fight. With mind and intellect fixed (or
absorbed) in Me, thou shalt doubtless come to Me alone.
Bannanje Govindacharya (1936–2020)Bhagavad Gita Pravachana
ತಸ್ಮಾತ್ ಸರ್ವೇಷು ಕಾಲೇಷು ಮಾಮ್ ಅನುಸ್ಮರ ಯುಧ್ಯ ಚ।
ಮಯಿ ಅರ್ಪಿತ ಮನಃ ಬುದ್ದಿಃ ಮಾಮ್ ಏವ ಏಷ್ಯಸಿ ಅಸಂಶಯಃ -ಆದ್ದರಿಂದ ಎಲ್ಲಾ ಕಾಲದಲ್ಲೂ ನನ್ನನ್ನು ನೆನೆ,
ನೆನೆಯುತ್ತಾ ಹೋರಾಡು. ನಿನ್ನೆಲ್ಲಾ ಬಯಕೆ ನಿರ್ಧಾರಗಳು ನನ್ನ ಕುರಿತಾದಾಗ ನಿಶ್ಚಯವಾಗಿ ನನ್ನನ್ನೇ
ಸೇರುವೆ.
ದೇವರನ್ನು ಸ್ಮರಣೆ ಮಾಡುವ ಕಾಲ ಅಂತ ಒಂದಿಲ್ಲ. ಕೃಷ್ಣ ಹೇಳುತ್ತಾನೆ “ಸರ್ವ ಕಾಲದಲ್ಲೂ ನನ್ನನ್ನು ಸ್ಮರಣೆ
ಮಾಡು” ಎಂದು. ಪ್ರತಿಯೊಂದು ಕ್ರಿಯೆ ಮಾಡುವಾಗ ಆ ಕ್ರಿಯೆ ಮಾಡಿಸುತ್ತಿರುವವ ಭಗವಂತ ಎನ್ನುವ
ಎಚ್ಚರವಿರಲಿ. ಯುದ್ಧ ಮಾಡುವಾಗಲೂ ಸಹ “ಆ ಭಗವಂತ ನನ್ನೊಳಗೆ ಕೂತು ಈ ಕಾರ್ಯವನ್ನು
ಮಾಡಿಸುತ್ತಿದ್ದಾನೆ, ಇದು. ಅವನ ಸಂಕಲ್ಪ” ಎನ್ನುವ ಭಾವನೆ ಯುದ್ಧವನ್ನೂ ದೇವರ ಪೂಜೆಯನ್ನಾಗಿ
ಪರಿವರ್ತಿಸುತ್ತದೆ! ನಮ್ಮಿಂದ ತಿಳಿದೋ ತಿಳಿಯದೆಯೋ ಆಗುವ ತಪ್ಪಿನಲ್ಲಿಯೂ ಕೂಡಾ ಭಗವಂತನ ಅರಿವು,
ಶರಣಾಗತಿ ನಮಗೆ ಪಾಪದ ಲೇಪ ಬರದಂತೆ ತಡೆಯುತ್ತದೆ. ಭಗವಂತನ ಸ್ಮರಣೆಗೆ ಯಾವುದೇ ಕಾಲದ
ನಿರ್ಬಂಧವಿಲ್ಲ... ಯಾವಾಗ ಭಗವಂತನ ಸ್ಮರಣೆ ಬಂತೋ ಅದೇ ಪುಣ್ಯಕಾಲ. ಆತನ ಸ್ಮರಣೆ
ಮನಸ್ಸಿನಲ್ಲಿರುವುದೇ ಮಡಿ. ಆದ್ದರಿಂದ ಭಗವಂತನ ಪೂಜಾರೂಪವಾಗಿ ಅಹಂಕಾರವಿಲ್ಲದೆ ಆತನನ್ನು ನೆನೆದು
ಕರ್ತವ್ಯ ಮಾಡಬೇಕು.
ಕ್ರಿಯೆಯಲ್ಲಿ ಇರತಕ್ಕ ಭಾವ ಧರ್ಮ-ಅಧರ್ಮವನ್ನು ನಿರ್ಣಯ ಮಾಡುತ್ತದೆ. ಉದಾಹರಣೆಗೆ ಧರ್ಮವ್ಯಾದ. ಈತ
ಮಾಂಸ ಮಾರಿಯೂ ಪರಮ ಧಾರ್ಮಿಕನಾಗಿ ಬದುಕಿದ. ಏಕೆಂದರೆ ಆತನ ಅನುಸಂಧಾನ ಶುದ್ಧವಾಗಿತ್ತು.
“ದೇವರು ನನ್ನನ್ನು ಈ ಕೆಲಸಕ್ಕೆ ಹಚ್ಚಿದ್ದಾನೆ, ನನ್ನ ಈ ಜನ್ಮದ ಕರ್ತವ್ಯ ಮಾಂಸ ಮಾರಿ ಬದುಕುವುದು. ಅದನ್ನು
ಪ್ರಾಮಾಣಿಕವಾಗಿ ಮಾಡಿ ಜೀವನ ಸಾಗಿಸಬೇಕು” ಎನ್ನುವ ಅನುಸಂಧಾನ ಆತನಲ್ಲಿತ್ತು. ಆತ ತನ್ನ
ವ್ಯಾಪಾರವನ್ನು ಕೇವಲ ತನ್ನ ಹಾಗೂ ತನ್ನ ಕುಟುಂಬದ ಜೀವನ ನಿರ್ವಹಣೆಗಾಗಿ ಮಾಡುತ್ತಿದ್ದ. ಈ ರೀತಿ
ಪ್ರಾಮಾಣಿಕನಾಗಿ ಬದುಕಿ ಆತ ಖುಷಿಗಳನ್ನೂ ಮೀರಿಸುವಷ್ಟು ಎತ್ತರಕ್ಕೇರಿದ. ಆದ್ದರಿಂದ ಭಾವ ಶುದ್ಧಿ ಅತ್ಯಂತ
ಶ್ರೇಷ್ಠ. ಹಾಗಾಗಿ ನಾವು ನಮ್ಮ ಮನಸ್ಸು ಮತ್ತು ಬುದ್ಧಿಯನ್ನು ಭಗವಂತನಲ್ಲಿ ನೆಲೆ ನಿಲ್ಲಿಸಬೇಕು. “ಆಗ
ನಿಸ್ಸಂಶಯವಾಗಿ ನನ್ನನ್ನು ಸೇರುವೆ” ಎನ್ನುತ್ತಾನೆ ಕೃಷ್ಣ.
Bibek Debroy (1955–2024)The Bhagavad Gita
(7)
‘Therefore, always think of me. And fight. With mind and intellect offered
to me, you will without doubt attain me alone.’