9.1

श्रीभगवानुवाच ।
इदं तु ते गुह्यतमं प्रवक्ष्याम्यनसूयवे ।
ज्ञानं विज्ञानसहितं यज्ज्ञात्वा मोक्ष्यसेऽशुभात् ॥
śrībhagavānuvāca |
idaṃ tu te guhyatamaṃ pravakṣyāmyanasūyave |
jñānaṃ vijñānasahitaṃ yajjñātvā mokṣyase'śubhāt ||
Swami Sivananda (1887–1963)Bhagavad Gita
1. I shall now declare to thee who does not cavil, the greatest secret, the knowledge combined with experience (Self-realisation). Having known this, thou shalt be free from evil.
Bannanje Govindacharya (1936–2020)Bhagavad Gita Pravachana
ಭಗವಾನ್‌ ಉವಾಚ-ಭಗವಂತ ಹೇಳಿದನು: ಇದಮ್‌ ತು ತೇ ಗುಹ್ಯತಮಮ್‌ ಪ್ರವಕ್ಷ್ಯಾಮಿ ಅನಸೂಯವೆ€। ಜ್ಞಾನಮ್‌ ವಿಜ್ಞಾನ ಸಹಿತಮ್‌ ಯತ್‌ ಜ್ಞಾತ್ವಾ ಮೋಕ್ಷ್ಯಸೇ ಅಶುಭಾತ್‌- ಇದಂತೂ ತುಂಬಾ ಬಚ್ಚಿಡಬೇಕಾದದ್ದು. ಕಿಚ್ಚು ಪಡದೆ ಮೆಚ್ಚುವವನೆಂದು ಹೇಳುತ್ತಿದ್ದೇನೆ: ತಿಳಿವು ಮತ್ತು ತಿಳಿವಿನ ಬಿತ್ತರ. ಇದನ್ನು ತಿಳಿದು ಕುತ್ತಿನಿಂದ ಪಾರಾಗುವೆ. ಕೃಷ್ಣ ಹೇಳುತ್ತಾನೆ: “ಭಗವದ್‌ ತತ್ವದ ಬಗೆಗೆ ನಿನಗೆ ಪುನಃ ಹೇಳುತ್ತೇನೆ; ಅತ್ಯಂತ ರಹಸ್ಯವಾದ ಉಪಾಸನೆ ಸಂಗತಿಯನ್ನು ನಿನ್ನ ಮುಂದೆ ಬಿಚ್ಚಿಡುತ್ತಿದ್ದೇನೆ” ಎಂದು. ಇದು ಎಲ್ಲರ ಮುಂದೆ ತೆರೆದಿಡುವ ಸಂಗತಿಯಲ್ಲ. ಯಾರಿಗೆ ಭಗವಂತನ ಉಪಾಸನೆಯಲ್ಲಿ ಅನನ್ಯವಾದ ಕಾತರ ಇರುವರರಿಗೆ, ಭಗವಂತನಲ್ಲದೆ ನನಗೆ ಇನ್ನೇನೂ ಬೇಡ ಎನ್ನುವ ಮನಸ್ಸುಳ್ಳವರಿಗೆ ಮತ್ತು ಭಗವಂತನಿಗೋಸ್ಕರ ಹಾತೊರೆಯುವವರ ಮುಂದೆ ಹೇಳಬೇಕಾದ ಮಾತು. ಅತ್ಯಂತ ರಹಸ್ಯವಾದ ಗೋಪನೆ ಮಾಡಬೇಕಾದ ಸಂಗತಿ. “ಅದನ್ನು ನಾನು ನಿನಗೆ ಹೇಳುತ್ತಿದ್ದೇನೆ” ಎನ್ನುತ್ತಾನೆ ಕೃಷ್ಣ. ಇಲ್ಲಿ ಅರ್ಜುನನಿಗೆ ಈ ವಿಚಾರವನ್ನು ತಿಳಿಯುವ ಜಿಜ್ಞಾಸೆ ಮತ್ತು ಅರ್ಹತೆ ಇದ್ದುದರಿಂದ ಕೃಷ್ಣ ಆತನಿಗೆ ಈ ಗೋಪ್ಯವಾದ ವಿಚಾರವನ್ನು ಹೇಳುತ್ತಾನೆ. ಕೇಳುವ ಅರ್ಹತೆ ಮತ್ತು ಬಯಕೆ ಇದ್ದವರಿಗೆ ಮಾತ್ರ ಕೊಡಬೇಕಾದ ವಿದ್ಯೆ ಇದು. ಇದನ್ನು ಎಲ್ಲರಿಗೂ ಕೊಡಲಾಗುವುದಿಲ್ಲ. ಇಲ್ಲಿ ಕೃಷ್ಣ “ಅನಸೂಯವೇ” ಎನ್ನುವ ಪದವನ್ನು ಬಳಸಿದ್ದಾನೆ. ಮನುಷ್ಯನಿಗೆ ವೇದಾಂತ ಓದುವ ಮತ್ತು ವೇದಾಂತ ಓದಿದ ನಂತರವೂ ಇರಬೇಕಾದ ಗುಣ(ಆ೬೩॥0/-"ಅಹಂಕಾರ ರಹಿತತೆ'(60015550655). ಅಹಂಕಾರ ಇದ್ದು ವೇದಾಂತ ಓದಿದರೆ ಏನೂ ಉಪಯೋಗವಿಲ್ಲ. ವೇದಾಂತ ಓದುವ ಮೊದಲು ಅಹಂ ಇರಬಾರದು. “ಭಗವಂತನ ಮುಂದೆ ನಾನು ಏನೂ ಅಲ್ಲ” ಎಂದು ತಿಳಿದಿದ್ದರೆ ಅಹಂಕಾರ ಬರುವುದಿಲ್ಲ. ವೇದಾಂತ ಓದಿ “ನಾನು ದೊಡ್ಡ ಜ್ಞಾನಿ' ಅನ್ನುವ ಅಹಂಕಾರ ಬಂದರೆ- ಓದಿ ದೇವರನ್ನು ಕಳೆದುಕೊಂಡಂತಾಗುತ್ತದೆ. ಆದರೆ ಇಂದು ನಾವು ಒಂದಲ್ಲ ಒಂದು ಅಹಂಕಾರಕ್ಕೆ ಒಳಗಾಗಿರುತ್ತೇವೆ. ಜ್ಞಾನದ ಅಹಂಕಾರ, ಅಧಿಕಾರದ ಅಹಂಕಾರ, ಸಂಪತ್ತಿನ ಅಹಂಕಾರ, ಸೌಂದರ್ಯದ ಅಹಂಕಾರ, ಯೌವನದ ಅಹಂಕಾರ, ಇಂತಹ ಅನೇಕ ಸಂಗತಿಗಳು ನಮ್ಮನ್ನು ಕಾಡುತ್ತಿರುತ್ತವೆ. ಅದನ್ನು ಕಳಚಿಕೊಂಡಾಗ ಮಾತ್ರ ವೇದಾಂತವನ್ನು ಅರಿಯಲು ನಾವು ಅರ್ಹತೆ ಪಡೆದಂತಾಗುತ್ತದೆ. ಎಲ್ಲಿಯ ತನಕ ನಮ್ಮಲ್ಲಿ ಅಹಂಕಾರ ತುಂಬಿದೆಯೋ ಅಲ್ಲಿಯ ತನಕ ವೇದಾಂತ ನಮಗೆ ಉಪಯೋಗಕ್ಕೆ ಬರುವುದಿಲ್ಲ. ಎಲ್ಲಾ ಅಹಂಕಾರಕ್ಕಿಂತ ಜ್ಞಾನದ ಅಹಂಕಾರ ಬಹಳ ಅಪಾಯಕಾರಿ. ಇತರ ಅಹಂಕಾರಕ್ಕೆ ಕೊನೆ ಇದೆ, ಆದರೆ ಜ್ಞಾನದ ಅಹಂಕಾರಕ್ಕೆ ಕೊನೆ ಇಲ್ಲ. "ನಾನು ಪಂಡಿತ' ಎನ್ನುವ ಅಹಂಕಾರ ತಲೆಗೆ ಬಂದರೆ ಅಂತವನು ಮಹಾ ದರಿದ್ರ ಎನಿಸುತ್ತಾನೆ! ಅಹಂಕಾರದ ಮರಿ ‘WIA. ಈ ಅಸೂಯೆ ನಮ್ಮನ್ನು ಸುಡುವ ಬೆಂಕಿ. ಅದಕ್ಕಾಗಿ ಅದನ್ನು ಕನ್ನಡದಲ್ಲಿ "ಹೊಟ್ಟೆಕಿಚ್ಚು' ಎನ್ನುತ್ತಾರೆ. ಇದು ನಮ್ಮ ವ್ಯಕ್ತಿತ್ವವನ್ನು ನಾಶ ಮಾಡುತ್ತದೆ. ಅಂತವರಿಗೆ ವೇದಾಂತ ಹೇಳಿ ಉಪಯೋಗವಿಲ್ಲ. “ ನಿನಗೆ ಅಸೂಯೆ ಇಲ್ಲ, ಅದಕ್ಕಾಗಿ ನಿನಗೆ ಈ ಗೋಪ್ಯವನ್ನು ಹೇಳುತ್ತಿದ್ದೇನೆ” ಎನ್ನುತ್ತಾನೆ ಕೃಷ್ಣ. ಯುದ್ಧ ರಂಗದಲ್ಲಿ ನಿಂತ ವ್ಯಕ್ತಿಗೆ ಅಸೂಯೆ ಇಲ್ಲದೇ ಇರುವುದು ಅತ್ಯಂತ ಮಹಾನ್‌ ಸಂಗತಿ. ದ್ವೇಷ-ಅಸೂಯೆ ಅಹಂಕಾರಗಳು ಯುದ್ಧರಂಗದಲ್ಲಿ ಸದಾ ತುಂಬಿ ತುಳುಕುತ್ತಿರುತ್ತವೆ. ಇದನ್ನು ಗೆದ್ದು ನಿಂತವ ಅತ್ಯಂತ ಶ್ರೇಷ್ಠ. ಇಲ್ಲಿ ಕೃಷ್ಣ ಹೇಳುತ್ತಾನೆ: “ಇದನ್ನು ತಿಳಿದುಕೊಂಡರೆ ನಿನ್ನ ಮನಸ್ಸು ಪರಿಶುದ್ಧವಾಗಿ ಭಗವಂತನನ್ನು ಬಯಸುವುದು ಸಾಧ್ಯವಾಗುತ್ತದೆ” ಎಂದು. ಜ್ಞಾನ ಬಂದರೆ ನಮ್ಮೊಳಗಿನ ಕೊಳೆ ತೊಳೆದು ಹೋಗಿ ಮನಸ್ಸು ನಿರ್ಮಲವಾಗುತ್ತದೆ. ನಮ್ಮ ಅತಿ ದೊಡ್ಡ ಸಂಪತ್ತು ಎಂದರೆ ಪ್ರಸನ್ನವಾದ ಸ್ವಚ್ಛ ಮನಸ್ಸು. ಅಂತಹ ಮನಸ್ಸಿನಲ್ಲಿ ಭಗವಂತ ಕಾಣಿಸಿಕೊಳ್ಳುತ್ತಾನೆ. ಅಹಂಕಾರ-ಅಸೂಯೆ ಇಲ್ಲದ ಮನಸ್ಸು 'ವಸುದೇವ' ಹಾಗೂ ಇಂತಹ ಮನಸ್ಸಿಗೆ ಕಾಣುವ ಭಗವಂತ 'ವಾಸುದೇವ'. ಶುದ್ಧ ಮನಸ್ಸಿನಿಂದ ಜ್ಞಾನ, ಜ್ಞಾನದಿಂದ ಆನಂದ. ಆನಂದಮಯವಾದ ಈ ಸ್ಥಿತಿಯಿಂದ ಪಾಂಚಭೌತಿಕ ಶರೀರದಿಂದ ಮತ್ತು ಸಂಸಾರದಿಂದ ಬಿಡುಗಡೆ ಹಾಗೂ ಮೋಕ್ಷ. ನಮಗೆ ಪಾಂಚಭೌತಿಕವಾದ ಮೂರು ಆವರಣವಿದೆ. ಈ ಮೂರು ಆವರಣದ ಒಳಗೆ ಜ್ಞಾನಾನಂದಮಯವಾದ ಆತ್ಮಸ್ವರೂಪವಿದೆ. ಲಿಂಗಶರೀರ, ಸೂಕ್ಷ್ಮಶರೀರ ಮತ್ತು ಸ್ಥೂಲಶರೀರ ಇವು ಆತ್ಮವನ್ನು ಆವರಿಸಿರುವ ಆವರಣಗಳು. ನಾವು. ಈ ಮೂರೂ ಅಂಗಿಗಳನ್ನು BYE, ಅಶುಭದಿಂದ ಬಿಡುಗಡೆಹೊಂದಿ, ಸ್ವರೂಪಭೂತವಾದ ನೈಜ ಸ್ಥಿತಿಯಲ್ಲಿ ಭಗವಂತನ ಮುಂದೆ ನಿಲ್ಲುವುದನ್ನು ಇಲ್ಲಿ ಕೃಷ್ಣ "ಮೋಕ್ಷ್ಯಸೇ*ಶುಭಾತ್‌' ಎಂದು ಸಂಕ್ಷಿಪ್ತವಾಗಿ ಹೇಳಿದ್ದಾನೆ.[ನಾವು ದೇವಸ್ಥಾನದಲ್ಲಿ ದೇವರ ಮುಂದೆ ಅಂಗಿ ತೆಗೆಯುವುದು- 'ಭಗವಂತನ ಮುಂದೆ. ಹಾಕಿಕೊಂಡಿರುವ ಎಲ್ಲಾ ಆವರಣವನ್ನು ತೆಗೆದು ದೇವರ ಮುಂದೆ ಬತ್ತಲಾಗುವುದು' ಎನ್ನುವ ಮುಖ್ಯಾರ್ಥವನ್ನು ಹೊಂದಿದೆ. ನಾವು ಭಗವಂತನ ಮುಂದೆ ಹಾಕಿಕೊಂಡ ಎಲ್ಲಾ ಮುಖವಾಡವನ್ನು ಬಿಚ್ಚಿ ಆತನ ಮುಂದೆ ತೆರೆದುಕೊಳ್ಳಬೇಕು. ಆಗ ಆತ ನಮಗೆ ತೆರೆದುಕೊಳ್ಳುತ್ತಾನೆ.] ಹೀಗೆ ಯಾವ ರೀತಿ ಪಾಂಚಭೌತಿಕ ಶರೀರದಿಂದ ಬಿಡುಗಡೆ ಮತ್ತು ಮೋಕ್ಷ ಎನ್ನುವ ಜ್ಞಾನ-ವಿಜ್ಞಾನವನ್ನು ಭಗವಂತ ಸಮಷ್ಠಿಯಾಗಿ ಅರ್ಜುನನಿಗೆ ಹೇಳುವುದನ್ನುಮುಂದಿನ ಶ್ಲೋಕಗಳಲ್ಲಿ ನೋಡೋಣ.
Bibek Debroy (1955–2024)The Bhagavad Gita
(1) Bhagavan1 said: ‘You are not a detractor.2 I will tell you this extremely secret knowledge of self-realization.3 Knowing this, you will be freed from all evil.’