9.14

सततं कीर्तयन्तो मां यतन्तश्च दृढव्रताः ।
नमस्यन्तश्च मां भक्त्या नित्ययुक्ता उपासते ॥
satataṃ kīrtayanto māṃ yatantaśca dṛḍhavratāḥ |
namasyantaśca māṃ bhaktyā nityayuktā upāsate ||
Swami Sivananda (1887–1963)Bhagavad Gita
14. Always glorifying Me, striving, firm in vows, prostrating before Me, they worship Me with devotion, ever steadfast.
Bannanje Govindacharya (1936–2020)Bhagavad Gita Pravachana
ಸತತಮ್‌ ಕೀರ್ತಯಂತಃ ಮಾಮ್‌ ಯತಂತಃ ಚ ದೃಢ ವ್ರತಾಃ। ನಮಸ್ಯಂತಃ ಚ ಮಾಮ್‌ TY, ನಿತ್ಯ ಯುಕ್ತಾಃ ಉಪಾಸತೇ -ಅನುದಿನವೂ ನನ್ನಲ್ಲಿ ಬಗೆಯಿಟ್ಟು ನನ್ನನ್ನೇ ಸೇವಿಸುತ್ತಾರೆ. ನಿರಂತರ ನನ್ನನ್ನು ಕೊಂಡಾಡುತ್ತಾ ನೇಮಗಳನ್ನು ನೆಮ್ಮಿಕೊಂಡು ಹೆಣಗುತ್ತಾ ನನಗಾಗಿ ತಲೆಬಾಗುತ್ತಾ. “ದೈವೀ ಸ್ವಭಾವದವರು ನಿರಂತರ ನನ್ನನ್ನು ಕೀರ್ತನ ಮಾಡುತ್ತಾರೆ” ಎನ್ನುತ್ತಾನೆ ಕೃಷ್ಣ. ಅವರ ಪ್ರತಿಯೊಂದು ಚಟುವಟಿಕೆಯಲ್ಲೂ ಭಗವದ್‌ ಪ್ರಜ್ಞೆ ಗಾಢವಾಗಿರುತ್ತದೆ. ಇನ್ನೊಂದು ಅರ್ಥದಲ್ಲಿ ತತವಾದ್ಯವನ್ನು ಹಿಡಿದು, ತಂತಿಯನ್ನು ಮೀಟುತ್ತಾ ಭಗವಂತನ ಗುಣಗಾನ ಮಾಡುತ್ತಾ, ಹಾಡುತ್ತಾ(ನಾರದ ಮಹರ್ಷಿಗಳಂತೆ) ಸದಾ ಸಂತೋಷವಾಗಿರುವವರು ದೈವೀ ಸ್ವಭಾವದವರು. ಇವರು ನಿರಂತರ, ತಮ್ಮ ಗುರಿ ತಲುಪುವತನಕವೂ ದೃಡ ಧೀಕ್ಷೆಯಿಂದ, ಅನನ್ಯ ಪ್ರೀತಿಯಿಂದ ಉಪಾಸನೆ ಮಾಡುತ್ತಾರೆ. ಇವರಲ್ಲಿ ಇನ್ನೊಂದು ವಿಧದ ಭಕ್ತರನ್ನು ಕೃಷ್ಣ ಮುಂದಿನ ಶ್ಲೋಕದಲ್ಲಿ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(14) ‘Careful and firm in their rites, they15 faithfully offer obeisance and always sing my praise, always focused on worshipping me.’