ज्ञानयज्ञेन चाप्यन्ये यजन्तो मामुपासते ।
एकत्वेन पृथक्त्वेन बहुधा विश्वतोमुखम् ॥
jñānayajñena cāpyanye yajanto māmupāsate |
ekatvena pṛthaktvena bahudhā viśvatomukham ||
Sri Madhvacharya (1238–1317)Bhagavad Gita Tatparya Nirnaya
‘एक मूर्तिश्चतुर्मूर्तिरथवा पञ्चमूर्तिकः।
द्वादशादिप्रभेदो वा पूज्यते सज्जनैर्हरिः’ इति च॥15॥
Swami Sivananda (1887–1963)Bhagavad Gita
15. Others also, sacrificing with the wisdom-sacrifice, worship Me, the all-faced, as one, as
distinct, and as manifold.
Bannanje Govindacharya (1936–2020)Bhagavad Gita Pravachana
ಜ್ಞಾನಯಜ್ಞೇನ ಚ ಅಪಿ ಅನ್ಯೇ ಯಜಂತಃ ಮಾಮ್ ಉಪಾಸತೇ |
ಏಕತ್ವೇನ ಪೃಥಕ್ ತ್ವೇನ ಬಹುಧಾ ವಿಶ್ವತಃ ಮುಖಮ್-ಕೆಲವರು ಅರಿವಿನ ಮಾನಸ ಯಜ್ಞದಿಂದ ಎಲ್ಲೆಡೆ
ತುಂಬಿರುವ. ನನ್ನನ್ನು ಪೂಜಿಸುತ್ತಾ ಸೇವಿಸುತ್ತಾರೆ. ಎಲ್ಲೆಡೆಯಿರುವ ಭಗವಂತನೊಬ್ಬನೇ
ಎಂದು[ಏಕಮೂರ್ತಿಯೆಂದು], ಎಲ್ಲಕ್ಕೆಂತ ಬೇರೆಯೆಂದು[ಚತುರ್ಮೂರ್ತಿಯೆಂದು], ಬಗೆಬಗೆಯ ಬಣ್ಣದವನೆಂದು
[ಅನೇಕಮೂರ್ತಿಯೆಂದು], ಹೀಗೆ ಹಲವಾರು ಬಗೆಯಿಂದ.
ಇನ್ನು ಕೆಲವರು ಭಗವಂತನ ಅರಿವಿನ ಪ್ರಪಂಚದಲ್ಲಿ ಮುಳುಗಿಬಿಟ್ಟಿರುತ್ತಾರೆ. ಧ್ಯಾನದಲ್ಲಿ ಅವರಿಗೆ ಹೊರಗಿನ
ಪ್ರಪಂಚದ ಅರಿವೇ ಇರುವುದಿಲ್ಲ. ಧ್ಯಾನದಲ್ಲಿ ಭಗವಂತನನ್ನು ಅನೇಕ ಆಯಾಮದಲ್ಲಿ ಕಾಣುವುದೇ ಅವರ
ಉಪಾಸನೆ. ಇವರ ಉಪಾಸನೆ ಧ್ಯಾನ ಪೂರ್ವಕವಾದ ಯಜ್ಞ. ಬಾಹ್ಯವಾಗಿ ಇವರನ್ನು ಮಹಾತ್ಮರು ಎಂದು
ಗುರುತಿಸುವುದು ಬಹಳ ಕಷ್ಟ. ಕೃಷ್ಣ ಹೇಳುತ್ತಾನೆ: “ಇಂತವರು ನನ್ನನ್ನು ಒಂದಾಗಿ, ಬೇರೆಯಾಗಿ, ಬಹುವಾಗಿ
ಕಾಣುತ್ತಾರೆ” ಎಂದು. ಇಲ್ಲಿ ಏಕತ್ವೇನ ಅಂದರೆ ಭಗವಂತ ಒಬ್ಬನೆ ಎಂದು ಉಪಾಸನೆ ಮಾಡುವುದು.
ಒಂದೊಂದು ದೇಶಕ್ಕೆ, ಒಂದೊಂದು ಜಾತಿಗೆ, ಒಂದೊಂದು ಮತಕ್ಕೆ ಒಬ್ಬ ದೇವರಲ್ಲ. ಎಲ್ಲರಿಗೂ ದೇವರು
ಒಬ್ಬನೇ ಎಂದು ಉಪಾಸನೆ ಮಾಡುವುದು ಏಕತ್ವೇನ. ಪೃಥಕ್ತೇನ ಎಂದರೆ ಎಲ್ಲರಿಂದ ವಿಲಕ್ಷಣನಾದ
ಭಗವಂತನನ್ನು ಅನೇಕ ಬಗೆಯಿಂದ ಕಾಣುವುದು. ಇವರು ಭಗವಂತನನ್ನು ಧ್ಯಾನದಲ್ಲಿ ಅನೇಕ ವರ್ಣದಿಂದ
ಕಾಣುತ್ತಾರೆ. ಹೀಗೆ ವಿಶ್ವತೋಮುಖ ಭಗವಂತನನ್ನು ಏಕ ಎಂತಲೂ, ಚತುರ್ಮೂರ್ತಿ ಎಂತಲೂ, ಅನೇಕ
ಮೂರ್ತಿ ಎಂತಲೂ, ಅನೇಕ ವರ್ಣದಿಂದ ಉಪಾಸನೆ ಮಾಡುತ್ತಾರೆ.
ಭಗವಂತನನ್ನು ಹೇಗೆ ಅನುಸಂಧಾನ ಮಾಡಬೇಕು, ಹೇಗೆ ಮಾಡಬಾರದು ಎನ್ನುವ ಅರಿವನ್ನು ಕೊಟ್ಟ ಕೃಷ್ಣ,
ಮುಂದೆ ಭಗವಂತನ ವಿಭೂತಿಯನ್ನು ಬೇರೆ ಬೇರೆ ಪ್ರತೀಕಗಳಲ್ಲಿ ಹೇಗೆ ಅನುಸಂಧಾನ ಮಾಡಬೇಕು
ಎನ್ನುವುದನ್ನು ವಿವರಿಸುತ್ತಾನೆ. ಇಡೀ ವಿಶ್ವದ ಅಣು ಕಣಗಳಲ್ಲಿ ತುಂಬಿರುವ ಭಗವಂತನ ಅನುಸಂಧಾನ ಹಾಗೂ
ಅದರ ವಿಶಿಷ್ಟ ಉಪಾಸನೆಯ ವಿವರವನ್ನು ಈ ಅಧ್ಯಾಯದ ಮುಂದಿನ ಭಾಗದಲ್ಲಿ ಕೃಷ್ಣ ವಿವರಿಸಿದ್ದಾನೆ. ಬನ್ನಿ ಈ
ಅಪೂರ್ವ ವಿಶಿಷ್ಟ ಜ್ಞಾನವನ್ನು ಭಗವಂತನಿಂದಲೇ ಕೇಳಿ ತಿಳಿದು ಕೃತಾರ್ಥರಾಗೋಣ.
Bibek Debroy (1955–2024)The Bhagavad Gita
(15)
‘Some worship me through the yajna that is the path of knowledge. Some
worship me as one, others as separate.16 I, who pervade the universe, am
worshipped in many forms.’