9.16

अहं क्रतुरहं यज्ञः स्वधाहमहमौषधम् ।
मन्त्रोऽहमहमेवाज्यमहमग्निरहं हुतम् ॥
ahaṃ kraturahaṃ yajñaḥ svadhāhamahamauṣadham |
mantro'hamahamevājyamahamagnirahaṃ hutam ||
Sri Madhvacharya (1238–1317)Bhagavad Gita Tatparya Nirnaya
9.16–9.19
‘अर्च्यत्वादृक् समत्वाच्च निजरूपेषु साम सः। याज्यत्वात् स यजुर्यज्ञः सार्वज्ञात् पुरुषोत्तमः। ‘क्रतुः कृतिस्वरूपत्वात् स्वधाऽनन्यधृतो यतः। मानात् त्रातीति मन्त्रोऽयमुष्टानां निधिरौषधम्। आ ज्यायस्त्वादाज्यनाम दर्भो दरधरो यतः। आहूतत्वाद्भुतं चायमग्निर्नेताऽगतेर्यतः’ इत्यादि च। ‘तत्तत्पदार्थभिन्नॊऽपि तत्तन्नामैवमच्युतः। स्वातन्त्र्यात् सर्वकर्तृत्वात् गुणानन्त्याच्च केवलम्’ इति च। ‘ओमित्याक्रियते यस्मादोङ्कारो भगवान् परः’ इति च। ‘पातीति स पिता मानान्माता यत् स पितुर्महान्। पितामहो निधातृत्वान्निधानं भीतरक्षणात्। शरणं व्यञ्जनाच्चैव बीजमित्युच्यते प्रभुः’ इति च । प्रलयकाले संहर्तृत्वात् प्रलयः। अन्यदाऽपीति मृत्युः। ‘प्राणगः प्राणधर्ता यदमृतं प्रविलापयन्। विश्वं प्रलय इत्युक्तो मृत्युरन्यत्र मारणात्’ इति च। ‘सत् साधुगुणपूर्णत्वादस्मान्नान्यो गुणाधिकः। यतोऽतोऽसदिति प्रोक्तं विष्ण्वाख्यं परमं पदम्’ इति शब्दनिर्णये॥16 -19॥
Swami Sivananda (1887–1963)Bhagavad Gita
16. I am the Kratu; I am the Yajna; I am the offering (food) to the manes; I am the medicinal herb and all the plants; I am the Mantra; I am also the ghee or melted butter; I am the fire; I am the oblation.
Bannanje Govindacharya (1936–2020)Bhagavad Gita Pravachana
ಅಹಮ್‌ ಕ್ರತುಃ ಅಹಮ್‌ ಯಜ್ಞಃ ಸ್ವಧಾ ಅಹಮ್‌ ಅಹಮ್‌ ಔಷಧಮ್‌ | ಮಂತ್ರಃ ಅಹಮ್‌ ಅಹಮ್‌ ಏವ ಆಜ್ಯಮ್‌ ಅಹಮ್‌ ಅಗ್ನಿ: ಅಹಮ್‌ ಹುತಮ್‌- ನನ್ನಿಂದ ಯಾಗ. [ನನ್ನ ಕ್ರಿಯೆ ನನ್ನ ಸ್ವರೂಪವಾದ್ದರಿಂದ ನಾನು BA]. ನನ್ನಿಂದ ಹವನ ಕ್ರಿಯ್ದ(ಎಲ್ಲಾ ಬಲ್ಲವನಾದ್ದರಿಂದ “ಯಜ್ಞ”. ಪಿತೃಗಳ ಅನ್ನ ನನ್ನಿಂದ [ನನಗೆ ನಾನೇ ಆಸರೆಯಾದ್ದರಿಂದ Toe’). ನನ್ನಿಂದ ಮನುಷ್ಯರ ಅಆಹಾರ([ಬೆಂದವರಿಗೆ ಆಸರೆಯಾದ್ದರಿಂದ BAF]. ಮಂತ್ರ ನನ್ನಿಂದ[ತಿಳಿವಿತ್ತು ಸಲಹುದರಿಂದ "ಮಂತ್ರ']. ನನ್ನಿಂದಲೇ ತುಪ್ಪ [ಎಲ್ಲಕ್ಕೆಂತ ಹಿರಿಯನಾದ್ದರಿಂದ 'ಅಜ್ಯ']. ನನ್ನಿಂದ ಬೆಂಕಿ.[ನಾನೇ ಚಲಿಸದ ವಿಶ್ವಕ್ಕೆ ಚಲನೆ ನೀಡುವುದರಿಂದ "ಅಗ್ನಿ']. ನನ್ನಿಂದ ಹೋಮದ ಹವಿ[ಭಕ್ತರು ಕರೆವುದರಿಂದ ನಾನೇ कड]. ಭಗವಂತನ ಉಪಾಸನೆಗೆ ಮೂರು ಪ್ರತೀಕವನ್ನು ಶಾಸ್ತ್ರಕಾರರು ಹೇಳಿದ್ದಾರೆ. ವೇದದಲ್ಲಿ ಆ ಮೂರು ಪ್ರತೀಕಗಳಿಂದ ಉಪಾಸನೆಯೇ ನಮಗೆ ಎಲ್ಲಾ ಕಡೆ ಸಿಗುವುದು. ಅವುಗಳೆಂದರೆ ಅಗ್ನಿಪ್ರತೀಕ, ವಾಯುಪ್ರತೀಕ ಮತ್ತು ಆದಿತ್ಯಪ್ರತೀಕ. ಭೂಸ್ತರದಲ್ಲಿ ಭಗವಂತನ ಉಪಾಸನೆ ಅಗ್ನಿಪ್ರತೀಕದಲ್ಲಿ. ಅಂತರಿಕ್ಷ ಸ್ತರದಲ್ಲಿ ಆದಿತ್ಯ ಮುಖದಲ್ಲಿ ಮತ್ತು ಅಂತರಂಗದಲ್ಲಿ ಭಗವಂತನ ಉಪಾಸನೆ ವಾಯುವಿನ ಪ್ರತೀಕದಲ್ಲಿ. ಭೂಮಿಯಲ್ಲಿ ಸಾಮಾನ್ಯವಾಗಿ ಮನುಷ್ಯರು ಜ್ಞಾನಮಾರ್ಗಕ್ಕಿಂತ ಹೆಚ್ಚು ಕರ್ಮ ಮಾರ್ಗಕ್ಕೆ ಅಂಟಿಕೊಂಡವರು. ಇಂಥವರಲ್ಲಿ ಜ್ಞಾನಕ್ಕಿಂತ ಕರ್ಮಕ್ಕೆ ಒತ್ತು ಹೆಚ್ಚು. ಕೆಲವರು ಬೆಳಿಗ್ಗೆಯಿಂದ ಸಂಜೆ ತನಕ ಪೂಜೆ ಮಾಡುತ್ತಾರೆ. ಆದರೆ ತಾವು ಮಾಡುವ ಅನುಷ್ಠಾನದ ಜ್ಞಾನವೇ ಅವರಿಗಿರುವುದಿಲ್ಲ. ಇವರಿಗೆ ಜ್ಞಾನ ಸಂಪಾದನೆ ದ್ವಿತೀಯಕ(5600768/7). ಇದು ಮನುಷ್ಯನ ದೌರ್ಬಲ್ಯ. ನಮಗೆ ನಮ್ಮ ಮಡಿವಂತಿಕೆಯಲ್ಲಿರುವಷ್ಟು ಒತ್ತು ಜ್ಞಾನದಲ್ಲಿರುವುದಿಲ್ಲ! ತಿಳಿಯದ ಬಾಹ್ಯಾನುಷ್ಠಾನದಲ್ಲಿ ಕಾಲಹರಣ ಮಾಡುವುದಕ್ಕಿಂತ ಪಾಠ ಪ್ರವಚನದಿಂದ ಸ್ವಲ್ಪಮಟ್ಟಿನ ಜ್ಞಾನ ಗಳಿಸಿಕೊಳ್ಳುವುದು ದೇವರು ಮೆಚ್ಚುವ ಮಹಾ ಪೂಜೆ ಎನಿಸುತ್ತದೆ. ಕರ್ಮ ಪ್ರಧಾನವಾಗಿರುವವರಿಗೆ ಭಗವಂತನ ಅನುಷ್ಠಾನ ಹೇಗಿರಬೇಕು ಎನ್ನುವುದನ್ನು ಕೃಷ್ಣ ಇಲ್ಲಿ ವಿವರಿಸಿದ್ದಾನೆ. FHA ಹೇಳುತ್ತಾನೆ: “ಅಹಮ್‌ ಕ್ರತುಃ ಅಹಮ್‌ ಯಜ್ಞಃ” ಎಂದು. ಭಗವಂತನ ಆರಾಧನೆಗೋಸ್ಕರ ಮಾಡತಕ್ಕಂತಹ ಅಗ್ನಿ ಆರಾಧನೆಯ ಪ್ರಕ್ರಿಯೆ FB. ಇಲ್ಲಿ ಯಜ್ಞದ ಮೂಲಕ ಭಗವಂತನಿಗೆ ಆಹುತಿ ಕೊಡುವಾಗ ಈ ರೀತಿ ಹೇಳಿ ಆಹುತಿ ಕೊಡುತ್ತೇವೆ: ಅಗ್ನಯೇ ಸ್ವಾಹಾ-ಅಗ್ನಯ ಇದಂ ನ ಮಮ; ಪ್ರಜಾಪತೆಯೇ ಸ್ವಾಹ ಪ್ರಜಾಪತಯ ಇದಂ ನ ಮಮ; ಇಂದ್ರಾಯ ಸ್ವಾಹಾ-ಇಂದ್ರಾಯ ಇದಂ ನ ಮಮ; ಸೂರ್ಯಾಯ ಸ್ವಾಹಾ-ಸೂರ್ಯಾಯ ಇದಂ ನ ಮಮ; ವಾಯವೇ ಸ್ವಾಹಾ-ವಾಯವ ಇದಂ ನ ಮಮ; ವರುಣಾಯ ಸ್ವಾಹಾ-ವರುಣಾಯ ಇದಂ ನ ಮಮ,..ಇತ್ಯಾದಿ. ಹೀಗೆ ಬೇರೆ ಬೇರೆ ಪ್ರತೀಕದಲ್ಲಿ ಭಗವಂತನಿಗೆ ಆಹುತಿ ಕೊಡುವುದು ಯಜ್ಞ. ಇಲ್ಲಿ ಕೃಷ್ಣ ಹೇಳುತ್ತಾನೆ “ನೀವು ಮಾಡುವ ಕ್ರತುವಿನ ನಿಯಾಮಕ ನಾನು" ಎಂದು. ನಾವು ಯಾವ ಪ್ರತೀಕದಲ್ಲಿ ಪೂಜೆ ಮಾಡಿದರೂ ಅದು ಸಲ್ಲುವುದು ಆ ದೇವತೆಯ ಅಂತರ್ಯಾಮಿ ಭಗವಂತನಿಗೆ. ಉದಾಹರಣೆಗೆ ಗಣಹೋಮ, ಚಂಡಿಕಾಹೋಮ, ನವಗ್ರಹಹೋಮ ಇತ್ಯಾದಿ. ಇಲ್ಲಿ ನಾವು ಯಾವ ದೇವತೆಯ ಪ್ರತೀಕದಲ್ಲಿ ಯಜ್ಞ ಮಾಡಿದರೂ ಕೂಡಾ ಆ ಯಜ್ಞ ಭಗವಂತನಿಗೆ ಸಲ್ಲುತ್ತದೆ ಎನ್ನುವ ಅನುಸಂಧಾನ ನಮ್ಮಲ್ಲಿರಬೇಕು. ಭಗವಂತ ಅನೇಕ ಶಕ್ತಿ ರೂಪದಲ್ಲಿ ಅಭಿವ್ಯಕ್ತನಾದರೂ ಕೂಡಾ, ಸರ್ವ ನಿಯಾಮಕ ಭಗವಂತ ಒಬ್ಬನೇ. [ನಮಗೆ ಬಂದಿರುವ ಆಪತ್ತಿನ ನಿವಾರಣೆಗಾಗಿ ಜೋತಿಷಿಗಳು ಭಗವಂತನ ಆಯಾ ಶಕ್ತಿ ಪ್ರತೀಕವನ್ನು ಪೂಜಿಸುವಂತೆ ಹೇಳುತ್ತಾರೆಯೇ ಹೊರತು, ಭಗವಂತ ಅನೇಕ ಅಲ್ಲ]. ದೇವತೆಯ ಒಳಗಿರುವ ಭಗವಂತ ಪ್ರೀತನಾದಾಗ ಮಾತ್ರ ಅದು ಆ ದೇವತೆಗೂ ಮತ್ತು ಭಗವಂತನಿಗೂ ಸಂದಂತೆ. ಆದ್ದರಿಂದ ಒಂದೊಂದು ದಿನ ಒಂದೊಂದು ದೇವತೆಗೆ ಪ್ರೀತಿಯಾಗುವುದಕ್ಕೋಸ್ಕರ ಕರ್ಮ ಮಾಡುವುದಲ್ಲ. ಸರ್ವಾಂತರ್ಯಾಮಿ ಭಗವಂತನಿಗೆ ನಮ್ಮ ಪೂಜೆ ಮೀಸಲಾಗಿರಬೇಕು. ನಮ್ಮ ದೇಹದೊಳಗೆ ತತ್ತ್ವಾಭಿಮಾನಿ ದೇವತೆಗಳಿದ್ದಾರೆ. ದೇವತೆಗಳೆಲ್ಲರೂ ಗುರು ಸ್ಥಾನೀಯರು. ಅವರು ದೇವರ ಪರಿವಾರ. ಅವರನ್ನು ನಿಯಮನ ಮಾಡಿಕೊಂಡು ಆ ಭಗವಂತನಿದ್ದಾನೆ. ಈ ತತ್ತ್ವಾಭಿಮಾನಿ ದೇವತೆಗಳು ಭಗವಂತನ ಅನುಗ್ರಹದಿಂದ ನಮ್ಮನ್ನು ಸನ್ಮಾರ್ಗದಲ್ಲಿ ನಡೆಸಲಿ ಎಂದು ಅವರ ಅಂತರ್ಯಾಮಿಯಾದ ಭಗವಂತನನ್ನು ಆರಾಧಿಸುವುದು ಯಜ್ಞ. ನಾವು ನಿತ್ಯ ಪೀಠದಲ್ಲಿ ಮಾಡುವ ಪೂಜೆ ತತ್ತ್ವಾಭಿಮಾನಿ ದೇವತೆಗಳನ್ನು ಕುರಿತು ಮಾಡುವ ಯಜ್ಞವಾದರೆ, ಶ್ರಾದ್ಧ- ಪಿತೃದೇವತೆಗಳನ್ನು ಕುರಿತು ಮಾಡುವ ಯಜ್ಞ. ನಮ್ಮಲ್ಲಿ ಅನೇಕರಿಗೆ ಒಂದು ತಪ್ಪು ಕಲ್ಪನೆ ಇದೆ. ಶ್ರಾದ್ಧ "ದೇಹ ತ್ಯಾಗ ಮಾಡಿದ ಜೀವಕ್ಕೆ' ಎಂದು. ಆದರೆ ಇದು ಸರಿಯಲ್ಲ. ಶ್ರಾದ್ಧ ಸ್ಥೂಲ ದೇಹವನ್ನು ತ್ಯಜಿಸಿ ಸೂಕ್ಷ್ಮ ಶರೀರದಲ್ಲಿರುವ ಜೀವವನ್ನು ನಿಯಂತ್ರಿಸುವ 'ಪಿತೃದೇವತೆಗಳಿಗೆ' ಮಾಡುವಂತ್ತದ್ದು. ವಿಶೇಷವಾಗಿ ಹತ್ತು ಮಂದಿ ವಿಶ್ವೇದೇವತೆಗಳು(ಕ್ರತು,ದಕ್ಷ, ವಾಸು, ಸತ್ಯ, ಕಾಮ, ಕಾಲ,ಧುರಿ, ಲೋಚನ,ಪುರೂರವ ಆರ್ದ್ರವ); ಇವರಲ್ಲಿ ಪುರೂರವ ಮತ್ತು ಆರ್ದ್ರವರದ್ದು ಪಿತೃಗಣದ ನಿಯಮನ ಮಾಡತಕ್ಕಂತಹ ಖಾತೆ(೧೦/೫0೦॥0). ಪಿತೃದೇವತೆಗಳ ಗಣ ಹತ್ತು(ನೂರು ಮಂದಿ ಪಿತೃಗಳಲ್ಲಿ ಇವರು ಪ್ರಧಾನರು): ಯಮ, ಸೋಮ, ಕವ್ಯವಾಹ(ಇವರು ಮೂವರು ಪಿತೃಪತಿಗಳು, ಸೋಮಸದರು, ಅಗ್ನಿಷ್ಟಾತ್ತರು, ಬಹಿರ್ಷದರು, ಸೋಮಪರು, ಹವಿರ್ಭುಜರು, ಅಜ್ಯಪರು, ಸುಕಾಲಿಗಳು. ನಾವು ಪಿಂಡ ಹಾಕುವುದು ಜೀವದ ಹಸಿವು ನೀಗಲಿಕ್ಕೆ ಅಲ್ಲ. ನಮ್ಮ ಹಿರಿಯರು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುವುದು ಅವರು ಮಾಡಿದ ಕರ್ಮಫಲದಿಂದಲೇ ಹೊರತು ನಾವು ಹಾಕಿದ ಶ್ರಾದ್ಧದಿಂದಲ್ಲ. ಶ್ರಾದ್ಧ ಮಾಡುವ ಉದ್ದೇಶ ಏನೆಂದರೆ ಪಿತೃದೇವತೆಗಳ ಸ್ವಾದೀನದಲ್ಲಿರುವ ಜೀವ ಯಾವುದೋ ದುರಿತದ ಪ್ರಭಾವದಿಂದ ದಾರಿಯಲ್ಲಿ ತಡೆಯನ್ನು (Road blockers) ಎದುರಿಸಬೇಕಾಗಬಹುದು. ಆ ಸಮಯದಲ್ಲಿ ಅದನ್ನು ನಿವಾರಣೆ ಮಾಡುವ ಕರ್ಮಾನುಷ್ಠಾನ ಆ ಸೂಕ್ಷ್ಮ ಶರೀರದಲ್ಲಿ ಇರುವುದಿಲ್ಲ. ಅದಕ್ಕೋಸ್ಕರ ಅಂತಹ ಪ್ರತಿಬಂಧಕಗಳಿಂದ ಅವರನ್ನು ಪಾರು ಮಾಡಿ ಮುಂದೆ ಸಾಗಲು ನೆರವು ಕೋರಿ ಮಾಡುವ ಪಿತೃದೇವತೆಗಳ ಪೂಜೆಯೇ ಶ್ರಾದ್ಧ. ಒಟ್ಟಾರೆ ಇದು ಹಿರಿಯರು ಸತ್ತ ದಿನದ ನೆನಪು, ಅವರಿಗೆ ಕೃತಜ್ಞತೆ ಮತ್ತು ಪಿತೃದೇವತೆಗಳ ಪೂಜೆ. ಕೃಷ್ಣ ಹೇಳುತ್ತಾನೆ: “ಸ್ವಧಾ ಅಹಮ್‌” ಎಂದು. ಮಂತ್ರಗಳು ವಿಳಾಸದಂತೆ, TVET ತತ್ತ್ವಾಭಿಮಾನಿ ದೇವತೆಗಳಿಗಾದರೆ 'ಸ್ವಧಾ' ಪಿತೃದೇವತೆಗಳಿಗೆ. ನನ್ನ ಮುಖೇನವೇ ಶ್ರಾದ್ಧ ಪಿತೃದೇವತೆಗಳಿಗೆ ಸಲ್ಲುವುದು ಎನ್ನುತ್ತಾನೆ ಕೃಷ್ಣ. ತತ್ತ್ವಾಭಿಮಾನಿದೇವತೆಗಳು ಮತ್ತು ಪಿತೃದೇವತೆಗಳ ನಂತರ ಮನುಷ್ಯರು. ಮನುಷ್ಯರ ಮುಖ್ಯವಾದ ಆಹಾರ "ಓಷಧಿ'. ಫಲ ಕೊಟ್ಟು ಸಾಯುವ ಗಿಡವನ್ನು ಸಂಸ್ಕೃತದಲ್ಲಿ 'ಓಷಧಿ' ಎನ್ನುತ್ತಾರೆ. ಆ ಗಿಡದ ಪ್ರಸವವೇ ಅದರ ಸಾವು. ಮನುಷ್ಯ ತಿನ್ನುವ ದವಸಧಾನ್ಯ ಎಲ್ಲವೂ ಓಷಧಿಗಳು. ಇಂತಹ ಓಷಧಥಿಗಳ ಸಮುದಾಯವೇ ಔಷಧಿ. ಕೃಷ್ಣ ಹೇಳುತ್ತಾನೆ “ಅಹಮ್‌ ಔಷಧಮ್‌” ಎಂದು. ನಾವು ತಿನ್ನುವ ದವಸ ಧಾನ್ಯ ಸಲ್ಲುವುದು ಕೂಡಾ ವೈಶ್ವಾನರನಾಗಿ ಒಳಗೆ ಕುಳಿತಿರುವ ಭಗವಂತನಿಗೆ. ಔಷಧ ಕೊಡತಕ್ಕವ, ಅದರಿಂದ ರೋಗ ನಿವಾರಿಸುವವ, ಹಸಿವು ನಿವಾರಿಸಿ ರಕ್ಷಣೆ ಮಾಡುವವ ಭಗವಂತ. ನಾವು ಬೇರೆಬೇರೆ ಮಂತ್ರಗಳಿಂದ ಆಹುತಿಯನ್ನು ಕೊಡುತ್ತೇವೆ. ಈ ಹಿಂದೆ ಹೇಳಿದಂತೆ ಮಂತ್ರ ವಿಳಾಸವಿದ್ದಂತೆ. ಕೊಡುವ ಆಹುತಿ ಎಲ್ಲವೂ ಭಗವಂತನಿಗೆ ಸೇರುವುದಾದರೆ ಬೇರೆಬೇರೆ ವಿಳಾಸವೇಕೆ? ಕೃಷ್ಣ ಹೇಳಿದ: “ಬೇರೆ ಬೇರೆ ವಿಳಾಸದಲ್ಲಿರುವ ನನಗೆ” ಎಂದು! ಭಗವಂತ ಏಕ ಆದರೆ ಆತನ ರೂಪ ಅನೇಕ. ನಾವು ಯಾವ ಮಂತ್ರದಿಂದ ಕಳುಹಿಸಿದರೂ ಕೂಡಾ-ಅದು ಸೇರುವುದು ಎಲ್ಲಾ ಮಂತ್ರದಿಂದ ವಾಚ್ಯನಾದ, ಸರ್ವಶಬ್ದವಾಚ್ಯ ಭಗವಂತನನ್ನು. ಹೀಗೆ ಬೇರೆಬೇರೆ ಶಕ್ತಿ ರೂಪವನ್ನು ಬೇರೆಬೇರೆ ದೇವತಾ ಪ್ರತೀಕದಲ್ಲಿ ಪೂಜಿಸಿದರೂ ಕೂಡಾ ಪ್ರತಿಯೊಂದು ನಾಮವೂ ಸಹ ಅಂತತಃ ಭಗವಂತನನ್ನೇ ಹೇಳುತ್ತದೆ. ಎಲ್ಲವುದರ ಸಾರವೂ ಭಗವಂತ. ಇದಕ್ಕೆ ಉತ್ತಮ ಉದಾಹರಣೆ ತೆಂಗಿನಕಾಯಿ. ಸಿಪ್ಪೆ ಸಹಿತವಾಗಿರುವ ತೆಂಗಿನಕಾಯಿ ಉರಿಯುವ ಬೆಂಕಿಯಂತೆ; ಸಿಪ್ಪೆಯೊಳಗಿನ ಕಾಯಿ ಬೆಂಕಿಯ ಅಂತರ್ಯಾಮಿ ಅಗ್ನಿ ದೇವತೆಯಂತೆ; ಚಿಪ್ಪಿನ ಒಳಗಿನ ಕೊಬ್ಬರಿ ಅಗ್ನಿ ದೇವತೆಯೊಳಗಿನ ಭಗವಂತನಂತೆ. ಇಲ್ಲಿ ನಾವು ಎಲ್ಲವನ್ನೂ ಕರೆಯುವುದು ತೆಂಗಿನಕಾಯಿ ಅಥವಾ ಅಗ್ನಿ ಎಂತಲೆ. ಹೇಗೆ ನಿಜವಾದ ತೆಂಗಿನಕಾಯಿ ಒಳಗಿನ ಸಾರವೋ ಹಾಗೇ ನಿಜವಾದ ಅಗ್ನಿ ಅಂತತಃ ಅಂತರ್ಯಾಮಿ ಭಗವಂತ. ಈ ಶ್ಲೋಕದಲ್ಲಿ ಕೃಷ್ಣ ಇದನ್ನೇ “ಅಹಮ್‌ ಅಗ್ನಿಃ” ಎಂದಿರುವುದು. ಕೃಷ್ಣ ನಾವು ಆಹುತಿಯಾಗಿ ಕೊಡುವ ಒಂದು ಪ್ರಮುಖ ವಸ್ತುವನ್ನು ಉದಾಹರಣೆಯಾಗಿ ತೆಗೆದುಕೊಂಡು ಹೇಳುತ್ತಾನೆ “ಅಹಮ್‌ ಏವ ಆಜ್ಯಮ್‌” ಎಂದು. ಆಜ್ಯ ಎಂದರೆ ತುಪ್ಪ. ಆಜ್ಯದಲ್ಲಿ ದೇವತೆಗಳನ್ನು ತಣಿಸುವ ವಿಶಿಷ್ಟ ಶಕ್ತಿ ಇದೆ. ಅಜ್ಯದಲ್ಲಿ ವಿಶಿಷ್ಟ ಶಕ್ತಿಯಾಗಿ ನಾನಿದ್ದೇನೆ ಎನ್ನುವ ಕೃಷ್ಣ ನಾನೇ ಹೋಮದ ಹವಿ (ಅಹಮ್‌ WIR) ಎನ್ನುತ್ತಾನೆ. ಹವಿಸ್ಸು ಎಂದರೆ ಭಗವಂತನಿಗೆ ಅರ್ಪಿಸುವ ಹೋಮ ದ್ರವ್ಯ. ಆ ಹವಿಸ್ಸಿನಲ್ಲಿ ವಿಶೇಷ ಶಕ್ತಿ ಇರುವುದು ಆ ಭಗವಂತನಿಂದ. ನಾವು ಅರ್ಪಿಸುವ ಹವಿಸ್ಸು ಎಂದೂ ವ್ಯರ್ಥವಲ್ಲ. ಅಗ್ನಿಗೆ ಅರ್ಪಿಸಿದ ಹವಿಸ್ಸು ಅಗ್ನಿಯಿಂದ ಹೊರ ಹೊಮ್ಮುವ ಏಳು ಬಣ್ಣಗಳ ಮುಖೇನ ವಾತಾವರಣದಲ್ಲಿನ ಸೂರ್ಯ ಕಿರಣದೊಂದಿಗೆ ಸೇರಿ ಸಮಾಜಕ್ಕೆ ಫಲವನ್ನು ಕೊಡುತ್ತದೆ. ಹವಿರ್ಭಾಗವನ್ನು ಸ್ವೀಕರಿಸುವ ಭಗವಂತ ಹವಿರ್ಹರಿಃ . "ಸರ್ವ ದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ”. ಭಗವಂತ ಎಲ್ಲಾ ಶಬ್ದಗಳಿಂದ ವಾಚ್ಯನಾದವನು. ಆದ್ದರಿಂದ ಯಾವ ಶಬ್ದವನ್ನು ಹೇಳಿದರೂ ಅದು ಸೇರುವುದು ಅವನನ್ನೇ. ಹೀಗೆ ಹವಿಸ್ಸನ್ನು ಸ್ವೀಕರಿಸಿ ಭಕ್ತರ ಪಾಪವನ್ನು ಪರಿಹರಿಸುವ ಭಗವಂತ ಹವಿರ್ಹರಿಃ . ಈ ಶ್ಲೋಕವನ್ನು ಇನ್ನೊಂದು ಆಯಾಮದಲ್ಲಿ ನೋಡಿದರೆ, ಇಲ್ಲಿ ಬರುವ ಒಂದೊಂದು ಶಬ್ದದಲ್ಲೂ ಭಗವಂತನ ಗುಣಾನುಸಂಧಾನವನ್ನು ಕಾಣುತ್ತೇವೆ. ಕ್ರತುಃ : ಭಗವಂತನೇ ಕ್ರತು ಶಬ್ದದ ಮುಖ್ಯಾರ್ಥ. 'ಕ್ರತು' - ಕ್ರಿಯೆ, ಜ್ಞಾನ, ಇತ್ಯಾದಿ ಅರ್ಥವನ್ನು ಕೊಡುತ್ತದೆ. ಕ್ರಿಯಾ ಸ್ವರೂಪ, ಜ್ಞಾನ ಸ್ವರೂಪ ಭಗವಂತ ಕ್ರತುಃ. ನಮ್ಮಲ್ಲಿ ನಂಬಿಕೆ, ಇಚ್ಛಾಶಕ್ತಿ, ಕ್ರಿಯಾಶಕ್ತಿ ಹಾಗೂ ಅನುಕೂಲತೆ ಕೊಟ್ಟು, ನಮ್ಮ ಹಿಂದೆ ನಿಂತು, ಕ್ರಿಯಾ ಕಲಾಪಗಳನ್ನು ನಡೆಸುವ, ಜ್ಞಾನ ಸ್ವರೂಪನೂ, ಕರ್ಮದ ಕಟ್ಟಿನಿಂದ ನಮ್ಮನ್ನು ಪಾರು ಮಾಡುವನೂ ಆದ ಭಗವಂತ Fr. ಯಜ್ಞ: ಯಜ್ಞ ಅಂದರೆ ಎಲ್ಲವನ್ನೂ ತಿಳಿದವನು. ಜ್ಞಾನರೂಪಿಯಾಗಿ ಎಲ್ಲೆಡೆ ಇರುವ ಭಗವಂತ, ಎಲ್ಲಾ ಕ್ರಿಯೆಗಳಿಂದ ಎಲ್ಲರೂ ಆರಾಧಿಸಬೇಕಾದ ಯಜ್ಞದ ಅಂತರ್ಯಾಮಿ. ಸ್ವಧಾಃ: ಎಂದರೆ ತನ್ನನ್ನು ತಾನು ಆದರಿಸಿ ನಿಂತ ಸರ್ವ ನಿಯಾಮಕ. ಔಷಧಃ: ಭಗವಂತ “ಔಷಧಃ. ಎಂದರೆ ಸಂಸಾರ ತಾಪದಲ್ಲಿ ಬಿದ್ದು ಒದ್ದಾಡುವವ (ಔಷರು)ರಿಗೆ ಆಸರೆ-ಮೋಕ್ಷಪ್ರದ. ಮಂತ್ರಃ: ಜ್ಞಾನಪೂರ್ವಕವಾಗಿ ಅನುಸಂಧಾನ ಮಾಡುವವರನ್ನು ರಕ್ಷಣೆ ಮಾಡುವ ಭಗವಂತ "ಮಂತ್ರ? [ಮಂತ್ರ ನಮ್ಮನ್ನು ರಕ್ಷಣೆ ಮಾಡುವುದು ನಾವು ತಿಳಿದು ಪಠಿಸಿದಾಗ ಮಾತ್ರ. ಇಲ್ಲದಿದ್ದರೆ ಕಿಂಚಿತ್‌ ಫಲ ಮಾತ್ರ ದೊರೆಯಬಹುದೇ ಹೊರತು ನಿಜವಾದ ಮಹಾಫಲವಲ್ಲ| ಆಜ್ಯಃ: ಭಗವಂತ ಎಲ್ಲಕ್ಕಿಂತ ದೊಡ್ಡ ವಸ್ತು ಆದ್ದರಿಂದ ಆತ “ಆಜ್ಯ”. ಅಗ್ನಿಃ ಚಲಿಸದೇ ಇರುವ ವಸ್ತುವಿಗೆ ಚಲನೆ ಕೊಡುವ ಭಗವಂತ “ಅಗ್ನಿಃ”. WSs: ಎಲ್ಲಾ ಭಕ್ತರಿಂದ ಆಹುತನಾದ್ದರಿಂದ ಭಗವಂತ “कठः.
Bibek Debroy (1955–2024)The Bhagavad Gita
(16) ‘I am kratu, I am yajna, I am svadha,17 I am the herbs, I am the mantra, I indeed am the clarified butter, I am the fire, I am the offering.’