9.17

पिताहमस्य जगतो माता धाता पितामहः ।
वेद्यं पवित्रमोङ्कार ऋक्साम यजुरेव च ॥
pitāhamasya jagato mātā dhātā pitāmahaḥ |
vedyaṃ pavitramoṅkāra ṛksāma yajureva ca ||
Sri Madhvacharya (1238–1317)Bhagavad Gita Tatparya Nirnaya
9.16–9.19
‘अर्च्यत्वादृक् समत्वाच्च निजरूपेषु साम सः। याज्यत्वात् स यजुर्यज्ञः सार्वज्ञात् पुरुषोत्तमः। ‘क्रतुः कृतिस्वरूपत्वात् स्वधाऽनन्यधृतो यतः। मानात् त्रातीति मन्त्रोऽयमुष्टानां निधिरौषधम्। आ ज्यायस्त्वादाज्यनाम दर्भो दरधरो यतः। आहूतत्वाद्भुतं चायमग्निर्नेताऽगतेर्यतः’ इत्यादि च। ‘तत्तत्पदार्थभिन्नॊऽपि तत्तन्नामैवमच्युतः। स्वातन्त्र्यात् सर्वकर्तृत्वात् गुणानन्त्याच्च केवलम्’ इति च। ‘ओमित्याक्रियते यस्मादोङ्कारो भगवान् परः’ इति च। ‘पातीति स पिता मानान्माता यत् स पितुर्महान्। पितामहो निधातृत्वान्निधानं भीतरक्षणात्। शरणं व्यञ्जनाच्चैव बीजमित्युच्यते प्रभुः’ इति च । प्रलयकाले संहर्तृत्वात् प्रलयः। अन्यदाऽपीति मृत्युः। ‘प्राणगः प्राणधर्ता यदमृतं प्रविलापयन्। विश्वं प्रलय इत्युक्तो मृत्युरन्यत्र मारणात्’ इति च। ‘सत् साधुगुणपूर्णत्वादस्मान्नान्यो गुणाधिकः। यतोऽतोऽसदिति प्रोक्तं विष्ण्वाख्यं परमं पदम्’ इति शब्दनिर्णये॥16 -19॥
Swami Sivananda (1887–1963)Bhagavad Gita
17. I am the father of this world, the mother, the dispenser of the fruits of actions, and the grandfather; the (one) thing to be known, the purifier, the sacred monosyllable (Om), and also the Rig-, the Sama- and Yajur Vedas.
Bannanje Govindacharya (1936–2020)Bhagavad Gita Pravachana
ಪಿತಾ ಅಹಮ್‌ ಅಸ್ಯ ಜಗತಃ ಮಾತಾ ಧಾತಾ ಪಿತಾಮಹಃ | ವೇದ್ಯಮ್‌ ಪವಿತ್ರಮ್‌ ಓಂಕಾರಃ ಖುಕ್‌ ಸಾಮ ಯಜುಃ ಏವ ಚ- ನಾನು ಈ ಜಗದ ತಂದೆ, ತಾಯಿ, ಪೋಷಕ ಮತ್ತು ಅಜ್ಜ-ಮುತ್ತಜ್ಜ.[ಸಲಹುವುದರಿಂದ 'ಪಿತೃ'. ಅರಿಯುವುದರಿಂದ "ಮಾತೃ'. ಬೆಳೆಸುವುದರಿಂದ 'ಧಾತೃ'. ತಂದೆಗಿಂತಲೂ ಹಿರಿಯನಾದ್ದರಿಂದ 'ಪಿತಾಮಹ'] ಜಗವೆಲ್ಲಾ ತಿಳಿಯಬೇಕಾದವನು. ಜಗಕೆ ಪಾವನನಾದವನು. ಓಂಕಾರದಿಂದ, ಖುಗ್ವೇದ-ಸಾಮವೇದ-ಯಜುರ್ವೇದಗಳಿಂದ ವಾಚ್ಯನಾದವನು. [६.0 ०20८) ಕರೆಸಿಕೊಳ್ಳುವುದರಿಂದ 'ಓಂಕಾರ'. ಪೂಜನೀಯನಾದ್ದರಿಂದ aE”. ಸಮಾನನಾದ್ದರಿಂದ “ಸಾಮ ಯಜ್ಞಗಳಿಂದ ಆರಾಧ್ಯನಾದ್ದರಿಂದ "ಯಜುಸ್‌'`] ಬದುಕಿನ ಸಂಬಂಧಗಳಿಗೆ ಸಂಬಂಧಿಸಿ ಭಗವಂತನ ಉಪಾಸನೆಯನ್ನು ಕೃಷ್ಣ ಇಲ್ಲಿ ವಿವರಿಸುತ್ತಾನೆ. ಕೃಷ್ಣ ಹೇಳುತ್ತಾನೆ “ಪಿತಾ ಅಹಮ್‌ ಅಸ್ಯ ಜಗತಃ ಮಾತಾ ಧಾತಾ ಪಿತಾಮಹಃ” ಎಂದು. ಅಂದರೆ “ನಾನೇ ತಂದೆ, ನಾನೇ ತಾಯಿ, ನಾನೇ ಧಾರಕ ಮತ್ತು ಪಿತಾಮಹ”. ನಮಗೆ ತಿಳಿದಂತೆ ಒಬ್ಬರು ತಂದೆಯಾಗಬಹುದು ಅಥವಾ ತಾಯಿಯಾಗಬಹುದು. ಆದರೆ ಒಬ್ಬರೇ ತಾಯಿ-ತಂದೆ ಎರಡೂ ಆಗುವುದು ಸಾಧ್ಯವಿಲ್ಲ. ಇದು ಭಗವಂತನಲ್ಲಿ ಮಾತ್ರ ಸಾಧ್ಯ. ಭಗವಂತ ಎಲ್ಲರಿಗೂ ಅಪ್ಪ ಮತ್ತು ಎಲ್ಲರಿಗೂ ಅಮ್ಮ. ತಂದೆಯೊಳಗೆ ತಂದೆಯಾಗಿ, ತಾಯಿಯೊಳಗೆ “ತಾಯಿ'ಯಾಗಿ ತುಂಬಿರುವ ಶಕ್ತಿ ಆ ಭಗವಂತ. ಇದನ್ನು ನಾವು ಈ ರೀತಿ ಸ್ತುತಿಸುತ್ತೇವೆ: ತ್ವಮೇವ ಮಾತಾಚ ಪಿತಾ ತ್ವಮೇವ, ತ್ವಮೇವ ಬಂಧುಶ್ಚ ಸಖಾ ತ್ವಮೇವ ತ್ವಮೇವ ವಿದ್ಯಾ ದ್ರವಿಣಂ ತ್ವಮೇವ, ತ್ವಮೇವ ಸರ್ವಂ ಮಮ ದೇವ ದೇವ ಗಾಯತ್ರಿಯಲ್ಲಿ ಮೂಲತಃ ಈ ಅನುಷ್ಠಾನವಿದೆ. “ತತ್ಸವಿತುರ್ವರೇಣ್ಯಂ ಭರ್ಗಃ” ಎನ್ನುವಲ್ಲಿ ಭಗವಂತ ಜಗತ್ತನ್ನು ಸೃಷ್ಟಿ ಮಾಡಿದ BoB ಎನ್ನುವ ಅರ್ಥವಿದೆ. क" ಎಂದರೆ ಜಗತ್ತನ್ನು ಹೆತ್ತವನು ಎಂದರ್ಥ. ಪ್ರಳಯಕಾಲದಲ್ಲಿ ಜಗತ್ತನ್ನು ತನ್ನ ಉದರದಲ್ಲಿ ಧರಿಸಿ, ಸೃಷ್ಟಿ ಕಾಲದಲ್ಲಿ ಅದನ್ನು ಭಗವಂತ ಹೆತ್ತ. ಹೆತ್ತು ಹೊತ್ತು ಸಲಹುವವಳು “ತಾಯಿ'-ಆದ್ದರಿಂದ ಭಗವಂತ ತಾಯಿಯೂ ಹೌದು. ಅಷ್ಟೇ ಅಲ್ಲ, ಪ್ರತಿಯೊಬ್ಬ ತಾಯಿಯೊಳಗಿದ್ದು ಆ ತಾಯಿಯ ತಾಯ್ತನವನ್ನು ಜಾಗೃತಗೊಳಿಸಿ, ತಾಯಿಯೊಳಗೆ ತಾಯಿಯಾಗಿ ತುಂಬಿರುವ ಭಗವಂತ, ಎಲ್ಲಾ ತಂದೆಯಂದಿರ ಒಳಗೂ ಇದ್ದು, ಅವರಲ್ಲಿ ಪಿತೃತ್ವ ಜಾಗೃತಗೊಳಿಸುವ ತಂದೆ. ಪಿತಾ ಅನ್ನುವ ಪದದ ನಿರ್ವಚನ ನೋಡಿದರೆ ‘Bod’ ಅನ್ನುವುದು ಕೇವಲ ರೂಢಿ ಅರ್ಥ. ಶ್ರುತಿಯಲ್ಲಿ ಹೀಗೆ ಹೇಳುತ್ತಾರೆ: ಯೋನಃ ಪಿತಾ ಜನಿತಾಯೋ ವಿಧಾತಾ ಧಾಮಾನಿ ವೇದ ಭುವನಾನಿ ವಿಶ್ವಾ| ಯೋ ದೇವಾನಾಂ ನಾಮಧಾ ಏಕ ಏವ ತಂ ಸಂಪ್ರಶ್ನಂ ಭುವನಾ ಯಂತ್ಯನ್ಯಾ|| ಇಲ್ಲಿ ಪಿತಾ ಮತ್ತು ಜನಕನನ್ನು ಬೇರೆ ಬೇರೆಯಾಗಿ ಹೇಳುತ್ತಾರೆ. ಅವನು ನಮ್ಮ ತಂದೆ, ಅವನು ನಮ್ಮ ಜನಕ. ಅಂದರೆ: ಹುಟ್ಟಿಸಿದವನೂ ಅವನೇ, ರಕ್ಷಕನೂ ಅವನೇ. ಲೋಕದಲ್ಲಿ ಗಂಡು ಹೆಣ್ಣಲ್ಲ, ಹೆಣ್ಣು ಗಂಡಲ್ಲ. ಆದರೆ ಭಗವಂತ ಎಲ್ಲರ ಬಿಂಬರೂಪ. ಆದ್ದರಿಂದ ಭಗವಂತ ಉಭಯಲಿಂಗ-ಆತ ಸ್ತ್ರೀಪುಂಸಕ. ಆದರೆ ಆತನಲ್ಲಿ ಸ್ತ್ರೀಯಲ್ಲಿರುವ ದೋಷವಾಗಲೀ, ಪುರುಷನಲ್ಲಿರುವ ದೋಷವಾಗಲೀ ಇಲ್ಲ. ಆದ್ದರಿಂದ ಆತ ಲಿಂಗಾತೀತಕೂಡಾ ಹೌದು.[ಇದನ್ನು ನಾವು ಭಗವಂತನ ನಾಮಾವಳಿಗಳಲ್ಲಿ ಕಾಣಬಹುದು]. ಭಗವಂತನೇ 'ಧಾತಾ'. ಆತ ಅನಾಧಿ ಅನಂತಕಾಲದಲ್ಲಿ ಈ ಜಗತ್ತಿನ ಧಾರಣೆ ಮತ್ತು ಪೋಷಣೆ ಮಾಡುವವ. ಚತುರ್ಮುಖ ಬ್ರಹ್ಮನೊಳಗಿದ್ದು, ಪಿತಾಮಹ ಶಬ್ದ ವಾಚ್ಯನಾಗಿರುವವ ಭಗವಂತ. ಇಲ್ಲಿ ಕೃಷ್ಣ ಕೇವಲ ಮುಖ್ಯವಾದ ಸಂಬಂಧವನ್ನು ಮಾತ್ರ ಹೇಳಿದ. ಇದರರ್ಥ ಎಲ್ಲಾ ಸಂಬಂಧದಲ್ಲಿಯೂ ಆ ಭಾವವನ್ನು ಜಾಗೃತಗೊಳಿಸುವವ ಅಂತರ್ಯಾಮಿ ಭಗವಂತ ಎಂಬುದು. ಪ್ರತಿಯೊಂದು ಸಂಬಂಧದ ಹಿಂದೆ ಭಗವಂತನ ಸಂಬಂಧವಿದೆ. ಆದರೆ ನಮಗೆ ಆ ಕಲ್ಪನೆ ಇರುವುದಿಲ್ಲ. ಆಯಾ ಜೀವದ ಪ್ರಾರಾಬ್ದ ಕರ್ಮಕ್ಕನುಗುಣವಾಗಿ ಸಂಬಂಧಗಳು. ಅಲ್ಲಿರುವ ಪ್ರೀತಿ, ಮಮತೆ, ಶತ್ರುತ್ವ ಎಲ್ಲವೂ ಭಗವಂತನ ಕಾರ್ಯಕ್ರಮ. ಇದನ್ನು ನಾವು ತಿಳಿದಾಗ ನಮ್ಮ ಜೀವನ ಸುಗಮ. ಒಬ್ಬರು ನಮ್ಮನ್ನು ದ್ವೇಷಿಸಿದಾಗ ಕುಗ್ಗುವ ಅಗತ್ಯವಾಗಲೀ, ಒಬ್ಬರು ನಮ್ಮನ್ನು ಪ್ರೀತಿಸಿದಾಗ ಹಿಗ್ಗುವ ಅಗತ್ಯವಾಗಲೀ ಇಲ್ಲ. ಎಲ್ಲವೂ ನಮ್ಮ ಜೀವಸ್ವಭಾವ ಮತ್ತು ಪ್ರರಾಬ್ಧಕರ್ಮಕ್ಕನುಗುಣವಾಗಿ ಭಗವಂತನ ಲೀಲೆ ಎನ್ನುವ ಎಚ್ಚರ ಇಲ್ಲಿ ಬಹಳ ಮುಖ್ಯ. ಇದಕ್ಕೆ ಒಂದು ಉತ್ತಮ ದೃಷ್ಟಾಂತ ಭಾಗವತದಲ್ಲಿ ಬರುವ ವೃತ್ರ ಮತ್ತು ಇಂದ್ರನ ಯುದ್ಧದ ಕಥೆ: ಇಂದ್ರನನ್ನು ಕೊಲ್ಲಲು ಹೊರಟ 'ವೃತ್ರ'ನ ತಂದೆ SI ಎಂಬುವನು ಉಚ್ಚರಿಸಿದ ಮಂತ್ರದಲ್ಲಿ ಒಂದು ಸ್ವರ ತಪ್ಪಾಗಿದ್ದರಿಂದ-ವೃತ್ರನಿಂದ ಇಂದ್ರಹತ್ಯೆಯಾಗುವ ಬದಲು, ಇಂದ್ರನೇ ವೃತ್ರನನ್ನು ಕೊಲ್ಲುವಂತಾಯಿತು. ವೃತ್ರ ಮತ್ತು ಇಂದ್ರರ ಯುದ್ಧದಲ್ಲಿ ಇಂದ್ರ ಮಹಾಜ್ಞಾನಿಯಾದ ವೃತ್ರನನ್ನು ಕೊಲ್ಲಲು ಹಿಂದೇಟು ಹಾಕುತ್ತಾನೆ. ಆಗ ವೃತ್ರ ಹೇಳುತ್ತಾನೆ: “ಸಂಕೋಚ ಪಡಬೇಡ ಇಂದ್ರ, ನನ್ನನ್ನು ಕೊಂದುಬಿಡು. ಏಕೆಂದರೆ ಈ ನಾಟಕದಲ್ಲಿ ಭಗವಂತ ನಿನಗೆ ಕೊಲ್ಲುವ ಪಾತ್ರವನ್ನೂ ಮತ್ತು ನನಗೆ ಸಾಯುವ ಪಾತ್ರವನ್ನೂ ಕೊಟ್ಟಿದ್ದಾನೆ. ನಾವು ಅದನ್ನು ಅಭಿನಯಿಸಬೇಕು ಅಷ್ಟೇ” ಎಂದು. ಈ ರೀತಿ ಎಚ್ಚರವಿದ್ದರೆ ನಮಗೆ ಇನ್ನೊಬ್ಬರು ಬೈದಾಗ ಅಥವಾ ದ್ವೇಷಿಸಿದಾಗ ಬೇಸರವಾಗುವುದಿಲ್ಲ. ಎಲ್ಲವೂ ಭಗವಂತನ ವ್ಯವಸ್ಥೆ ಎಂದು ತಿಳಿದಾಗ ಎಲ್ಲವೂ ಏಕರೂಪವಾಗಿ ಕಾಣುತ್ತದೆ. ದ್ವೇಷ ಮತ್ತು ಪ್ರೀತಿ ಸಹಜವಾಗಿ ಬಿಡುತ್ತದೆ. ಸಂಬಂಧ ಕಳಚಿದಾಗ ಕುಗ್ಗುವುದಾಗಲೀ, ಬೆಸೆದಾಗ ಹಿಗ್ಗುವುದಾಗಲೀ ಇರುವುದಿಲ್ಲ. ಇದು ಬಹಳ ಎತ್ತರದ ಸ್ಥಿತಿ. ಒಟ್ಟಿನಲ್ಲಿ ಕೃಷ್ಣ ಇಲ್ಲಿ ಹೇಳಿರುವ ವಿಚಾರವೆಂದರೆ: ಎಲ್ಲಾ ಸಂಬಂಧದ ಹಿಂದೆ ಇರುವವನು ಆ ಭಗವಂತ. ಎಲ್ಲರ ಒಳಗೂ ‘Oude’ ಆಗಿ ಆತ ತುಂಬಿದ್ದಾನೆ. ಒಂದೊಂದು ರೂಪದಲ್ಲಿ, ಅವರವರಲ್ಲಿ, ಆಯಾ ಕ್ರಿಯೆಗಳನ್ನು ಮಾಡಿಸುತ್ತಾನೆ. ಇದು ನಾವು ಅನುಸಂಧಾನ ಮಾಡಬೇಕಾದ ವಿಜ್ಞಾನ. ಕ್ರಿಯೆ, ಸಂಬಂಧಗಳನ್ನು ವಿವರಿಸಿದ ಕೃಷ್ಣ ಈಗ ಜ್ಞಾನದ ಬಗ್ಗೆ ವಿವರಿಸುತ್ತಾನೆ. ಕೃಷ್ಣ ಹೇಳುತ್ತಾನೆ “ವೇದ್ಯಂ ಪವಿತ್ರಮೋಂಕಾರ ಖುಕ್‌ ಸಾಮ ಯಜುರೇವ ಚ” ಎಂದು. ನಾಮಾತ್ಮಕವಾದ ಈ ಪ್ರಪಂಚದ ಎಲ್ಲಾ ನಾಮಗಳ ಮೂಲ ६0". ಕೃಷ್ಣ ಹೇಳುತ್ತಾನೆ: “ನಾನು ಓಂಕಾರ” ಎಂದು. ಪ್ರಪಂಚದಲ್ಲಿನ ಎಲ್ಲಾ ಶಬ್ದವೂ ಹುಟ್ಟಿದ್ದು ಓಂಕಾರದಿಂದ. ಆದ್ದರಿಂದ ಭಗವಂತ ಸರ್ವಶಬ್ದವಾಚ್ಯ. ಸಂಸ್ಕೃತದಲ್ಲಿನ ಎಲ್ಲಾ ಶಬ್ದಗಳೂ ಕೂಡಾ ಓಂಕಾರದಿಂದ ಆವಿರ್ಬಾವಗೊಂಡ ಶಬ್ದಗಳು. ಅದು ಹೇಗೆಂದು ಸಂಕ್ಷಿಪ್ತವಾಗಿ ನೋಡೋಣ: ವೈದಿಕವಾಹ್ಮಯದ ಮೂಲಾಕ್ಷರವಾದ ಓಂಕಾರದಲ್ಲಿ ಎಂಟು ಅಕ್ಷರಗಳು: ಅಕಾರ, ಉಕಾರ, ಮಕಾರ, ನಾದ, ಬಿಂದು, ಕಲೆ, ಶಾಂತ, ಅತಿಶಾಂತ. ಇದರಿಂದ ವ್ಯಕ್ತವಾದದ್ದು ನಾರಾಯಣ ಅಷ್ಟಾಕ್ಷರ: ಓಂ ನಮೋ ನಾರಾಯಣಾಯಃ', = ಓಂಕಾರದ ಎಂಟು ಮೂಲವರ್ಣಗಳಿಂದ ಅಕ್ಷರ ಮಾಲಿಕೆಯ ಎಂಟು ವರ್ಗಗಳು ರೂಪುಗೊಂಡವು: ೧. ಸ್ವರಾಕ್ಷರಗಳು: ಅಆಇಈಯಉಊಖುಖೂಎಟಏಐಬಒಓಔ ಅಂಅಃ 9. ಕ-ವರ್ಗ:ಕಖಗಘಜ ೩. ಚ-ವರ್ಗ: ಚಛಜರು ಇ ೪.ಟ-ವರ್ಗ:ಟಠಡ ಢಣ ೫. ತ-ವರ್ಗ:ತಥದಧನ ೬. ಪ-ವರ್ಗ:ಪಫಬಭಮ ೭.ಅಂತಸ್ಥಾಕ್ಷರಗಳು:ಯ ರಲವ ೮. ಕೊನೆಯ ಆರು ಅಕ್ಷರಗಳು: ಶಷಸಹಳಕ್ಷ ಒಟ್ಟು 'ಅ' ದಿಂದ 'ಕ್ಷ' ತನಕ ಐವತ್ತೊಂದು ಅಕ್ಷರಗಳು(ಅ ದಿಂದ ಕ್ಷ ತನಕ ಆದ್ದರಿಂದ ಅ-ಕ್ಷ-ರ). ಇಡೀ ಪ್ರಪಂಚದಲ್ಲಿರುವ ಎಲ್ಲಾ ಶಬ್ದಗಳೂ ಈ ಅಕ್ಷರಗಳ ಸಂಯೋಜನೆ. ಎಲ್ಲಾ ಶಬ್ದಗಳೂ ಓಂಕಾರದಿಂದ ಹುಟ್ಟಿರುವುದರಿಂದ ಓಂಕಾರ ವಾಚ್ಯ ಭಗವಂತ ಸರ್ವಶಬ್ದ ವಾಚ್ಯ. ಆದ್ದರಿಂದ ಎಲ್ಲಾ ಶಬ್ದಗಳ ಮೂಲಭೂತ ಪವಿತ್ರ ಅರ್ಥ ಭಗವಂತನನ್ನು ಹೇಳುತ್ತದೆ. ದೋಷವನ್ನು ಹೇಳುವ ಪದಗಳೂ ಕೂಡಾ ಭಗವಂತನಲ್ಲಿ ಕೇವಲ ಪವಿತ್ರ ಅರ್ಥವನ್ನು ಮಾತ್ರ ಹೇಳುತ್ತವೆ. ಉದಾಹರಣೆಗೆ 'ದುಃಖಿ'. ಇದು ಭಗವಂತನಲ್ಲಿ ಹೇಳುವಾಗ "ದುಃಖದ ಒಡೆಯ ಎನ್ನುವ ಅರ್ಥವನ್ನು ಕೊಡುತ್ತದೆ. ಐವತ್ತೊಂದು ಅಕ್ಷರಗಳಿಂದ(ಮಾತೃಕೆಗಳಿಂದ) ವಾಚ್ಯನಾದ ಭಗವಂತನ ರೂಪಗಳೂ ಐವತ್ತೊಂದು: ೧. ಅಜ, ೨. ಆನಂದ, ೩. ಇಂದ್ರ, ೩. ಈಶ, ೪. ಉಗ್ರ, ೫. ಊರ್ಜ, ೭. ಖತಂಭರ, छ. ಖೂಘ, ೯. ಲ್‌ 3, ೧೦. ಲ್‌ವೀಜಿ, ೧೧. ಏಕಾತ್ಮ , ೧೨. ಐರ, ೧೩. ಓಜೋಭೃತ್‌, ೧೪. ಔರಸ, ೧೫. ಅಂತ, ೧೬. ಅರ್ಧಗರ್ಭ, ೧೭. ಕಪಿಲ, ೧೮. ಖಪತಿ, ೧೯. ಗರುಡಾಸನ, ೨೦. ಘರ್ಮ, ೨೧. ಜಸಾರ ೨೨. ಚಾರ್ವಾಂಗ, ೨೩. ಛಂದೋಗಮ್ಯ, ೨೪. ಜನಾರ್ದನ, ೨೫. ರೂಟಿತಾರಿ, ೨೬. ಇವು, ೨೭.ಟಂಕಿ, ೨೮.ಠಕಲ, 9 € . ಡರಕ, ೩೦.ಢರಿ, ೩೧. ಣಾತ್ಮ, ೩೨. ತಾರ, ೩೩. ಥಭ, ೩೪. ದಂಡಿ, ೩೫. ಧನ್ವಿ, ೩೬. ನಮ್ಯ, ೩೭. ಪರ, ೩೮. ಫಲಿ, ೩೯. ಬಲಿ, ೪೦. ಭಗ, ೪೧. ಮನು, ೪೨. ಯಜ್ಞ, ೪೩. ರಾಮ, ೪೪. ಲಕ್ಷ್ಮೀಪತಿ, ೪೫. ವರ, ೪೬. ಶಾಂತಸಂವಿತ್‌, ೪೭. IW, ೪೮. ಸಾರಾತ್ಮ, ೪೯. ಹಂಸ, ೫೦. ಳಾಳುಕ, ೫೧. ನೃಸಿಂಹ[ನೃಹರ್ಯಕ್ಷ]. ಓಂಕಾರದ ಮೂಲ ಮೂರಕ್ಷರ ಅ-ಉ-ಮ ಪದ್ಯ-ಗದ್ಯ-ಗಾನ. ಇದು ಮೂರು ರೂಪದ ವೇದವನ್ನು ಮತ್ತು ವೇದ ಪ್ರತಿಪಾದ್ಯ ಭಗವಂತನನ್ನು ಹೇಳುತ್ತವೆ. 'ಅ'ಕಾರ ಖುಗ್ವೇದಕ್ಕೆ, "ಉ'ಕಾರ ಯಜುರ್ವೇದಕ್ಕೆ ಮತ್ತು 'ಮ'ಕಾರ ಸಾಮವೇದಕ್ಕೆ ಸಂಬಂಧಪಟ್ಟದ್ದು. ಖುಗ್ರೇದ " ಅಗ್ನಿಮೀ”ಳೇ ಪುರೋಹಿತಂ ಯಜ್ಞಸ್ಯ ದೇವಂ-ಖತ್ವಿಜಂ” | ಹೋತಾ”ರಂ ರತ್ನ ಧಾತಮಂ |..." ಎಂದು "ಅ' ಕಾರದಿಂದ ಪ್ರಾರಂಭವಾಗುತ್ತದೆ. ಮತ್ತು “...ಸಮಾನಮಸ್ತು ವೋ ಮನೋ ಯಥಾ ವಃ ಸುಸಹಾಸತಿ II” ಎಂದು 'ಇ'ಕಾರದಲ್ಲಿ ಕೊನೆಗೊಳ್ಳುತ್ತದೆ. ಅಲ್ಲಿಂದ ಮುಂದುವರಿದು ಯಜುರ್ವೇದ “ಇಷೇ ತ್ವೋರ್ಜೆ ತ್ವಾ ..” ಎಂದು 'ಇ'ಕಾರದಿಂದ ಪ್ರಾರಂಭವಾಗಿ ಸಮುದ್ರೋ ಬಂಧುಃ” ಎಂದು "ಉ'ಕಾರದಲ್ಲಿ ಕೊನೆಗೊಳ್ಳುತ್ತದೆ. ಹೀಗೆ ಓಂಕಾರದಲ್ಲಿನ 'ಅ'ಕಾರ ಮತ್ತು “ಉ'ಕಾರ ಖುಗ್ರೇದ ಮತ್ತು ಯಜುರ್ವೇದವನ್ನು ಪೂರ್ಣವಾಗಿ ಸೂಚಿಸುವ ಸಂಕ್ಷೇಪಣಾ(೩00೯೮॥18೪೦೧)ರೂಪ. ಇಲ್ಲಿಂದ ಮುಂದೆ ಸಾಮವೇದ. ಸಾಮವೇದ “ಅಗ್ನ ಆ ಯಾಹಿ ಗ. ಎಂದು 'ಅ'ಕಾರದಿಂದ ಆರಂಭವಾಗಿ ಬ್ರಸ್ಪತಿರ್ದಧಾತು” ಎಂದು "ಉ'ಕಾರದಲ್ಲಿ ಕೊನೆಗೊಳ್ಳುತ್ತದೆ. ಆದ್ದರಿಂದ ಇಲ್ಲಿ ಮ' ಕಾರ ಬಂದಿಲ್ಲ. ಆದರೆ ನಮಗೆ ತಿಳಿದಂತೆ ಸಾಮವೇದ ನಾದ ರೂಪದಲ್ಲಿದೆ. ಓಂಕಾರದಲ್ಲಿ ಕೂಡಾ "ಮ' ಎನ್ನುವುದು ನಾದರೂಪದಲ್ಲಿ ಹೊರ ಹೊಮ್ಮುವ ಅಕ್ಷರ- ಅದು ಸಂಗೀತ. ಹೀಗೆ ಓಂಕಾರ ವೇದದ ಸಂಕ್ಷೇಪಣಾರೂಪ ಬೀಜಾಕ್ಷರ. ಇದು ನಮಗೆ ವೇದವನ್ನು ಗುರುತಿಸುವ ಮಾರ್ಗದರ್ಶಿ. ಆದ್ದರಿಂದ ಓಂಕಾರ ಭಗವಂತನನ್ನು ಸ್ತೋತ್ರ ಮಾಡುವ ಮಂತ್ರಗಳಲ್ಲಿ ಅತ್ಯಂತ ಪ್ರಕೃಷ್ಣವಾದುದ್ದು. ಇದಕ್ಕಿಂತ ದೊಡ್ಡ ಸ್ತೋತ್ರಮಾಡುವ ಶಬ್ದ ಈ ಪ್ರಪಂಚದಲ್ಲಿಲ್ಲ. ಈ ಕಾರಣದಿಂದ ಓಂಕಾರ ಭಗವಂತನನ್ನು ನಾವು ಕರೆಯಲು ಬಳಸುವ ಅವನ DT eR(Exclusive) ನಾಮ. ಓಂಕಾರ ವಿಸ್ಪತವಾದಾಗ ವ್ಯಾಹೃತಿ, ವ್ಯಾಹೃತಿ ವಿಸ್ತಾರವಾಗಿ ಗಾಯತ್ರಿ, ಗಾಯತ್ರಿ ವಿಸ್ತಾರವಾಗಿ ಕುರುಡ ಸೂಕ್ತ, ನಂತರ ಮೂರು ವೇದಗಳು, ಅಲ್ಲಿಂದ ಸಮಸ್ತ ವೇದಗಳು. ಹೀಗೆ ಪ್ರಣವದಲ್ಲಿ, ವ್ಯಾಹೃತಿಯಲ್ಲಿ, ಪುರುಷ ಸೂಕ್ತದಲ್ಲಿ, ಸಮಸ್ತವೇದಗಳಲ್ಲಿ ಭಗವಂತ ನೆಲೆಸಿದ್ದಾನೆ. ಓಂಕಾರದ ಬಗ್ಗೆ ಇನ್ನೂ ಅನೇಕ ವಿವರಗಳನ್ನು ಈಗಾಗಲೇ ಅಧ್ಯಾಯ ಏಳರಲ್ಲಿ(ಶ್ಲೋಕ -೦೮) ವಿಶೇಷವಾಗಿ ವಿವರಿಸಲಾಗಿದೆ. ವೇದದ ಶಬ್ದಗಳಿಂದಲೇ ಹುಟ್ಟಿ ಬಂದ ಪ್ರಪಂಚದ ಎಲ್ಲಾ ಶಬ್ದದಲ್ಲೂ ಎಲ್ಲಾ ಲೌಕಿಕ ನಾದದಲ್ಲೂ ತುಂಬಿದ ಭಗವಂತ, ಆಕಾಶದಲ್ಲಿ ಅನಂತ ಶಬ್ದಗಳನ್ನೂ, ಅನಂತ ನಾದಗಳನ್ನೂ ಸೃಷ್ಟಿ ಮಾಡಿದ. ನಮಗೆ ಶಬ್ದದಿಂದ ಅನಂತ ಅನುಭವವನ್ನು ಕೊಟ್ಟು, ಆ ಶಬ್ದವನ್ನು ಗ್ರಹಿಸುವ ಮತ್ತು ಗ್ರಹಿಸಿ ಪುನರುಚ್ಛರಿಸುವ ವಿಶೇಷ ಶಕ್ತಿಯನ್ನು ಕರುಣಿಸಿದ. ಜ್ಞಾನದ ಮೂಲಕ ಈ ಶಬ್ದ ನಾಮಕ ಭಗವಂತನನ್ನು ತಿಳಿಯುವ ವಿಶೇಷ ಶಕ್ತಿ ಮಾನವನಿಗೆ ಭಗವಂತನ ವಿಶೇಷ ಕೊಡುಗೆ. ಭಗವಂತ वख: ಯಾವುದರಿಂದ ನಾವು ಭಗವಂತನನ್ನು ಅರ್ಚನೆ ಮಾಡುತ್ತೇವೋ ಅದು ಖುಕ್‌. ನಾಉವು ಅರ್ಚನೆ ಮಾಡುವುದು ಮಂತ್ರಗಳ ಮೂಲಕ. ಯಾರು ಅರ್ಚಿಸಲ್ಪಡುತ್ತಾನೋ ಅವನು 'ಖುಕ್‌' ನಾಮಕ ಭಗವಂತ. ಎಲ್ಲಾ ಮಂತ್ರಗಳಿಂದ ಅರ್ಚಿಸಲ್ಪಡುವವ-ಸ್ಪುತಿಗೆ ಪಾತ್ರನಾದ ಭಗವಂತ 'ಖುಕ್‌' ಭಗವಂತ 'ಸಾಮಃ': ಎಲ್ಲವನ್ನು ಸಮೀಕರಿಸಿದವನು. ತನ್ನ ಎಲ್ಲಾ ರೂಪದಲ್ಲಿ ಜ್ಞಾನಾನಂದಾದಿ ಗುಣಗಳಿಂದ ಸಮನಾದ್ದರಿಂದ ಮತ್ತು ಅವರವರ ಯೋಗ್ಯತೆಗೆ ಸಮನಾಗಿ ಜೀವನ ಕೊಡುವ ಭಗವಂತ “ಸಾಮಃ'. ಭಗವಂತ ab”: ಎಲ್ಲಾ ಯಾಗಗಳಿಂದ ಹೋಮಿಸಲ್ಪಡುವ, ವೇದಗಳಲ್ಲಿ ಸನ್ನಿಹಿತನಾಗಿರುವ ಸರ್ವಶಬ್ದವಾಚ್ಯ ಭಗವಂತ “ಯಜುಸ್‌.
Bibek Debroy (1955–2024)The Bhagavad Gita
(17) ‘I am the father, mother, grandfather and sustainer of this universe. I am all that is pure18 and is to be known. I am the Om syllable. I am also the Rik, Saman and Yajus.’19