अहं हि सर्वयज्ञानां भोक्ता च प्रभुरेव च ।
न तु मामभिजानन्ति तत्त्वेनातश्च्यवन्ति ते ॥
ahaṃ hi sarvayajñānāṃ bhoktā ca prabhureva ca |
na tu māmabhijānanti tattvenātaścyavanti te ||
Sri Madhvacharya (1238–1317)Bhagavad Gita Tatparya Nirnaya
मामिष्ट्वा प्रार्थयन्त इत्युक्तत्वाज्जानन्तोऽपि नाभितो जानन्ति तत्त्वेन।
‘सर्वदेववरत्वेन यो न जानाति केशवम्।
तस्य पुण्यानि मोफानि याति जान्धन्तमो ध्रुवम्’ इति च
‘मोघाशा मोघकर्माणः’ इत्युक्तत्वाच्च न केवलाज्ञविषयं मिथ्याज्ञानिविषयं वा ‘च्यवन्ति ते’ इत्यादि।
अतः सर्वाधिक्यं विष्णोर्ज्ञात्वाऽपि ब्रह्मादीनां तत्परिवारत्वादिकम् अजानतामिदं फलम्॥24॥
Swami Sivananda (1887–1963)Bhagavad Gita
24. (For) I alone am the enjoyer and also the Lord of all sacrifices; but they do not know Me
in essence (in reality), and hence they fall (return to this mortal world).
Sri Vishwesha Tirtharu (1931–2019)Gitasaroddhara
9.22–9.31 · ಯೋಗಕ್ಷೇಮಂ ವಹಾಮ್ಯಹಮ್
ಯೋಗಕೇಮಂ ವಹಾಮಹಂ
ವೈ ೧೧2೧25. ಭೆ
ತನ್ನ ಭಕ್ತ ರ ಸಂರಕ್ಷ ಣೆಯ ಪೂರ್ಣ ಭಾರವನ್ನು ಭಗವಂತನು ಹೊತ್ತಿ ರುಷನು,
ತನ್ನನ್ನೇ ತ್ತ ದೃಢನಿಷ್ಠೆಯಿಂದ ಉಪಾಸಿಸುವ ನಿತ್ಯಾಭಿ ಯುಕ್ತರಾದ ಭಕ್ತರ
ಯೋಗಕ್ಷೇಮವನ್ನು ತಾನು ನಿರ್ವಹಿಸುವೆನೆಂದು ಶ್ರೀಕೃಷ್ಣನು ಗೀತೆಯಲ್ಲಿ
ಅಭಿವಚನವನ್ನು ನೀಡಿರುವನು. ನಮ್ಮಲ್ಲಿ ಆತ್ಮವಿಶ್ವಾಸ ಹಾಗೂ ಹೃದಯ
ಬಲವನ್ನು ಕುದುರಿಸುವ ಜಗದೀಶ್ವರನ ಆಶ್ವಾಸನದ ದಿವ್ಯ ಸಂಜೀವಿನಿಯು
ಮ ದ
ದೊರಕಿರುವಾಗ ಜನತೆಯು ಜೀವನದ ಹೋರಾಟದಲ್ಲಿ ಕಂಗೆಡುವುದೇಕೆ?
ಭಗವದ್ಭಕ್ತಿಯ ಭದ್ರವಾದತಳಹದಿಯ ಮೇಲೆ ಜೀವನದ ಉತ್ತು ೦ಗ ಸೌಧದ
ನಿರ್ಮಾಣಕಾರ್ಯದಲ್ಲಿ ನಾವು ದೃಢ ನಿರ್ಧಾರದಿಂದ ತೊಡಗಬಹುದು. ತನ್ನನ್ನು
ಮೊರಹೊಕ್ಕು ವ್ರಾರ್ಥಿಸುತ್ತಿ ರುವ ಭಕ್ತಃ ವರ್ಗವನ್ನು ರಕ್ಷಿಸುವುದು ತನ್ನ ವ್ರತವೆಂದು
ರಾಮಾವತಾರದಲ್ಲಿ ಭಗವಂತನು ಹೇಳಿದ್ದಾನೆ.
ಸಕೃದೇವ ಪ್ರಹನ್ನೋ ಯಃ ತವಾಸ್ಮೀತಿ ಚೆ ಯಾಚತೇ |
ಅಭಯಂ ಸರ್ವಭೂತೇಚ್ಛಃ ದದಾಮ್ಯೇತದ್ ವ್ರತಂ ಮಮ ॥
ಇದು ರಾಮಾವತಾರದಲ್ಲಿ ಶರಣಾಗತ ಭಕ್ತನಿಗೆ ಪರಮಾತ್ಮನೇ ನೀಡಿದ
ಅಭಯವಾಣಿಯಾಗಿದ್ದರೆ,
ಅನನ್ಯಾಶ್ಚಿಂತಯಂತೋ ಮಾಂ ಯೇ ಜನಾಃ ಪರ್ಯುಪಾಸತೇ
ತೇಷಾಂ ನಿತ್ಯಾಭಿಯುಕ್ತಾ ನಾಂ ಯೋಗಕ್ಷ್ನ ಮಂ ವಹಾಮ್ಯಹಂ 1
ಇದು ಕೃಷ್ಣಾ ವತಾರದಲ್ಲಿ ಭಗವಂತನು ನೀಡಿದ ಭರವಸೆಯ ಅಮೃತವಾಣಿ
ಆಗಿದೆ.
ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿ ।
“ಅರ್ಜುನಃ ನನ್ನ ಭಕ್ತನಿಗೆ ಎಂದೆಂದಿಗೂನಾಶವಿಲ್ಲವೆಂಬುದನ್ನು ದೃಢವಾಗಿ
ತಿಳಿದುಕೋ' ಎಂದು ಭಕ್ತಿಯ ಮಾರ್ಗದಲ್ಲಿ ಮುನ್ನಡೆಯುವವನಿಗೆ ಯಾವ
ಹಾನಿಯೂ ಇಲ್ಲವೆಂದು ಅಭಿನಿವೇಶದಿಂದ ಭಗವಂತನು ಸಾರಿದ್ದಾನೆ. ಇಂತಹ
ಸುಸ್ಪಷ್ಟ ಘೋಷಣೆಗಳಿರುವಾಗ ಜೀವಬ್ರಹ್ಮ್ಮೈಕ್ಯದಂತಹ ಅಪಕ್ವ ಹಾಗೂ
ಅಸಂಬದ್ಧ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ಭಕ್ತಿವಿರೋಧಿ
ಮಾರ್ಗಗಳನ್ನು ಬೋಧಿಸಿ ಜನರ ಮನಸ್ಸಿನಲ್ಲಿ ವೃಥಾ ಗೊಂದಲವೆಬ್ಬಿಸುವುದನ್ನು
ಕಂಡು ನಮ್ಮ ಮನಸ್ಸಿಗೆ ಬಹಳ ಸಂತಾಪವಾಗುತ್ತಿದೆ. ಭಗವಂತನೇ
ಭಕ್ತಿಮಾರ್ಗವನ್ನು ಶ್ರೇಷ್ಠವೂ ಪವಿತ್ರವೂ ಎನಿಸಿದ ನಿರಾತಂಕವಾದ ರಾಜಪಥ
ವೆಂದು ಘೋಷಿಸಿರುವಾಗ ಆ ಮಾರ್ಗದಲ್ಲಿ ನಡೆಯಲು ಸಂಕೋಚ,
ಸಂದೇಹಗಳೇಕೆ? ಇದು ಅಜ್ಞಾನಿಗಳಿಗೆ ಮಾತ್ರ ಮೀಸಲಾದ ದಾರಿಯೆಂದು
ಅದನ್ನು ಏಕೆ ಹೀಗಳೆಯುತ್ತಾರೆಂಬುದೇ ನಮಗೆ ಅರ್ಥವಾಗುತ್ತಿಲ್ಲ. ಜನರು
ಇಂತಹ ಅಸಂಬದ್ಧ ವಿಚಾರ ಗೊಂದಲಗಳಲ್ಲಿ ವೃಥಾ ಕಾಲಹರಣ ಮಾಡದೆ
ನಿಸಂಕೋಚಭಾವದಿಂದ ಭಕ್ತಿಯೋಗವನ್ನಾಶ್ರಯಿಸುವುದೇ ವಿಹಿತವಾಗಿದೆ.
ಕೌಂತೇಯ ಪ್ರತಿಜಾನೀಹಿ ನಮೇ ಭಕ್ತಃ ಪ್ರಣಶ್ಯತಿ ।
ಈ ವಾಕ್ಯದಲ್ಲಿ ಶ್ರೀಕೃಷ್ಣನು ತನ್ನ ಭಕ್ತರಿಗೆ ಎಂದಿಗೂ ನಾಶವಿಲ್ಲವೆಂದು
ಅರ್ಜುನನಿಂದ ಪ್ರತಿಜ್ಞೆ ಮಾಡಿಸುತ್ತಾನೆ. ಅದೇಕೆ? ತಾನು ಪ್ರತಿಜ್ಞೆ ಮಾಡದೆ
ಅರ್ಜುನನಿಂದ ಭಗವಂತನು ಏಕೆ ಪ್ರತಿಜ್ಞೆ ಮಾಡಿಸುತ್ತಾನೆ? ತನ್ನ
ಪ್ರತಿಜ್ಞೆಯಾದರೂ ಕೆಲವೊಮ್ಮೆ ಹುಸಿಯಾದೀತು. ತನ್ನ ಭಕ್ತರ ಪ್ರತಿಜ್ಞೆಯು
ಎಂದಿಗೂ ಹುಸಿಯಾಗಲಾರದೆಂದು ಶ್ರೀಕೃಷ್ಣನ ಆಶಯವಾಗಿದೆ.
ಸ್ವನಿಯಮಮಪಹಾಯ ಮತ್ ಪ್ರತಿಜ್ಞಾಂ
ಯತಮಧಿಕರ್ತುಮವಪ್ಪುತೋ ರಥಸ್ಥಃ
ಧೃತರಥಚರಣೋರಭ್ಯಯಾಚ್ಛಲದ್ದು:
ಹರಿರಿವ ಹಂತುಮಿಮಂ ಗತೋತ್ತರೀಯಃ ॥
ಎಂದು ಭಾಗವತದಲ್ಲಿ ಭೀಷ್ಮರು ವರ್ಣಿಸುತ್ತಾರೆ. ""ತನ್ನ ಭಕ್ತರ ಪ್ರತಿಜ್ಞೆಯು
ಹುಸಿಯಾಗಬಾರದೆಂದು ಚಕ್ರವನ್ನು ಧರಿಸಿ ತನ್ನ ಪ್ರತಿಜ್ಞೆಯನ್ನೇ ಭಕ್ತರಿಗಾಗಿ
ಭಂಗಗೊಳಿಸಲು ಅಣಿಯಾದ ಶ್ರೀಕೃಷ್ಣನ ಭಕ್ತಾನುಗ್ರಹಕಾರಕವಾದ ಆ
ಪ್ರಸನ್ನವದನವನ್ನು ನಾನೆಂತು ಮರೆಯಲಿ! ಮರಣಶಯ್ಯೆಯಲ್ಲಿ ದ್ವಭೀಷ್ಮರ
ಉದ್ಗಾರವಿದು. ಮಹಾಭಾರತ ಯುದ್ಧದಲ್ಲಿ ತಾನು ಆಯುಧವನ್ನು
ಧರಿಸುವುದಿಲ್ಲವೆಂದು ಶ್ರೀಕೃಷ್ಣನು ಪ್ರತಿಜ್ಞೆ ಮಾಡಿದ್ದರೂ ಕೃಷ್ಣನು ಆಯುಧವನ್ನು
ಧರಿಸುವಂತೆ ಮಾಡುವೆನೆಂಬ ಭೀಷ್ಮರ ಪ್ರತಿಜ್ಞೆಯನ್ನು ಪರಿಪಾಲಿಸುವುದಕ್ಕಾಗಿ
ಅವರ ಶಸ್ತ್ರಾಸ್ತ್ರಗಳಿಂದ ಪೀಡಿತನಾದಂತೆ ನಟಿಸಿ, ತನ್ನ ಪ್ರತಿಜ್ಞೆಯನ್ನು ಮುರಿದು
ಶಸ್ತ್ರಧಾರಣೆಯನ್ನು ಮಾಡುವನು. ತನ್ನ ಮಾತಿಗಿಂತಲೂ ತನ್ನ ಭಕ್ತರ ಮಾತಿಗೆ
ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದ ಶ್ರೀಕೃಷ್ಣನು ನಮ್ಮಲ್ಲಿ ವಿಶ್ವಾಸವನ್ನು
ಮೂಡಿಸುವುದಕ್ಕಾಗಿ ತನ್ನ ಪರಮಭಕ್ತ ಅರ್ಜುನನಿಂದಲೇ ""ನ ಮೇ ಭಕ್ತಃ
ಪ್ರಣಶ್ಯತಿ' ಎಂದು ಪ್ರತಿಜ್ಞೆ ಮಾಡಿಸುತ್ತಾನೆಂದು ಈ ಶ್ಲೋಕವನ್ನು ಸ್ವಾರಸ್ಯಕರ
ರೀತಿಯಲ್ಲಿ ಕೆಲವರು ವ್ಯಾಖ್ಯಾನ ಮಾಡಿರುವರು.
Bannanje Govindacharya (1936–2020)Bhagavad Gita Pravachana
ಅಹಮ್ ಹಿ ಸರ್ವಯಜ್ಞಾನಾಮ್ ಭೋಕ್ತಾ ಚ ಪ್ರಭುಃ ಏವ ಚ |
ನ ತು ಮಾಮ್ ಅಭಿಜಾನಂತಿ ತತ್ತ್ವೇನ ಅತಃ ಚ್ಯವಂತಿ ತೇ -- ನಾನೇ ಅಲ್ಲವೇ ಎಲ್ಲಾ ಪೂಜೆಗಳನ್ನು
ಕೊಳ್ಳುವವನು ಮತ್ತು ನಡೆಸುವವನು. ನಿಜವಾಗಿ ಅವರು ನನ್ನನ್ನು ಚೆನ್ನಾಗಿ ತಿಳಿದಿಲ್ಲ. ಆದ್ದರಿಂದ ಜಾರಿ
ಬೀಳುತ್ತಾರೆ.
ಹಿಂದೆ ವಿಶ್ಲೇಶಿಸಿದಂತೆ ಕೆಲವರು ತಮ್ಮ ಬಯಕೆಗಳನ್ನು ಈಡೇರಿಸುವಂತೆ ಕೋರಿ ದೇವತೆಗಳನ್ನು
ಪ್ರಮುಖವಾಗಿ (ಭಗವಂತನಿಗಿಂತ ಬಿನ್ನವಾಗಿ) ಪೂಜಿಸುತ್ತಾರೆ. ಹೀಗೆ ಮಾಡಿದಾಗ ಏನಾಗುತ್ತದೆ ಎನ್ನುವ ಪ್ರಶ್ನೆ
ನಮಗೆ ಮೂಡಬಹುದು. ಹಿಂದೆ ಕೃಷ್ಣ ಹೇಳಿದ್ದ “ಎಲ್ಲವುದರಲ್ಲೂ ಇರುವವನು ನಾನು” ಎಂದು. ಯಾರನ್ನು
ಪ್ರಮುಖವಾಗಿ ಪೂಜಿಸಿದರೂ ಕೂಡಾ ಅದು ಸಲ್ಲುವುದು ಭಗವಂತನನ್ನೇ. ಇಲ್ಲಿ ಸಮಸ್ಯೆ ಎಂದರೆ ಪೂಜೆ
ಮಾಡುವವರಿಗೆ ಆ ಅರಿವು ಇಲ್ಲದಿರುವುದು. ಇದರಿಂದ ತಪ್ಪು ಅನುಸಂಧಾನ. ಅರಿವಿಲ್ಲದೇ ಮಾಡುವ ಭಕ್ತಿ
ಪೂರ್ಣ ಭಕ್ತಿಯಾಗಲಾರದು. ಪರತತ್ವದ ಎಚ್ಚರ ಇಲ್ಲದೇ ಮಾಡುವ ಪೂಜೆ ಎಂದೂ ನಮ್ಮನ್ನು
ಉನ್ನತಿಗೇರಿಸಲಾರದು. ಕೃಷ್ಣ ಹೇಳುತ್ತಾನೆ “ಈ ರೀತಿಯ ಪೂಜೆಯಿಂದ ಪುಣ್ಯ ಗಳಿಸುವ ಬದಲು, ಪುಣ್ಯ ಕರ್ಮ
ಮಾಡಿಯೂ ಜಾರಿ ಬಿದ್ದಂತೆ” ಎಂದು. ಆದ್ದರಿಂದ ಯಾವ ಪೂಜೆಯನ್ನೇ ಆಗಲಿ ಪರತತ್ವದ ಎಚ್ಚರದಿಂದ
ಮಾಡಿದಾಗ ಮಾತ್ರ ಅದು ಸಾರ್ಥಕ. ಯಾರನ್ನೇ ಪೂಜಿಸಿದರೂ ಆ ಪೂಜೆ ಅಂತತಃ ಸಲ್ಲುವುದು
ಭಗವಂತನನ್ನೇ. ಏಕೆಂದರೆ ಸರ್ವ ಯಜ್ಞಗಳ ಭೋಕ್ತಾರ ಭಗವಂತ. ಇದು ಯಜ್ಞದ ಹಿಂದಿರುವ ಯಜ್ಞಪುರುಷನ
ರಹಸ್ಯ. ಪುರುಷಸೂಕ್ತದಲ್ಲಿ ಹೇಳುವಂತೆ "ಯಜ್ಞೇನ ಯಜ್ಞ ಮಯಜಂತ ದೇವಾಃ”-ಯಜ್ಞದಿಂದ ಯಜ್ಞ ನಾಮಕ
ಭಗವಂತನ ಆರಾಧನೆ. ಯಜ್ಞಗಳ ಭೋಕ್ತ, ಯಜ್ಞಗಳ ಸ್ವಾಮಿ, ಯಜ್ಞ ಶಬ್ದವಾಚ್ಯನಾದ ಭಗವಂತನ
ಆರಾಧನೆಯಿಂದ ನಾವು ಭಗವಂತನನ್ನು ಸೇರಬಹುದು.
ಹೀಗಿದ್ದರೂ ಕೂಡಾ ಸಮಾಜದಲ್ಲಿ ನಾವು ಅನೇಕ ರೀತಿಯಲ್ಲಿ ದೇವತಾ ಆರಾಧನೆ ಮಾಡುವವರನ್ನು
ನೋಡುತ್ತೇವೆ. ಅಂತವರು. ಆ ದೇವತೆಯನ್ನು ಪೂಜಿಸುವುದರಲ್ಲೇ ಶ್ರದ್ಧೆ ಇಟ್ಟಿರುತ್ತಾರೆ. ಆ ರೀತಿ ಪೂಜೆ
ಮಾಡುವವರ ಗತಿ ಏನು? ಇದಕ್ಕೆ ಕೃಷ್ಣ ಮುಂದಿನ ಶ್ಲೋಕದಲ್ಲಿ ಉತ್ತರಿಸುತ್ತಾನೆ.
Bibek Debroy (1955–2024)The Bhagavad Gita
(24)
‘Because I alone am the receiver of offerings and the granter of fruits at all
yajnas. But they do not know my true nature and, therefore, are cast
down.’27