शुभाशुभफलैरेवं मोक्ष्यसे कर्मबन्धनैः ।
संन्यासयोगयुक्तात्मा विमुक्तो मामुपैष्यसि ॥
śubhāśubhaphalairevaṃ mokṣyase karmabandhanaiḥ |
saṃnyāsayogayuktātmā vimukto māmupaiṣyasi ||
Swami Sivananda (1887–1963)Bhagavad Gita
28. Thus shalt thou be freed from the bonds of actions yielding good and evil fruits; with the
mind steadfast in the Yoga of renunciation, and liberated, thou shalt come unto Me.
Sri Vishwesha Tirtharu (1931–2019)Gitasaroddhara
9.22–9.31 · ಯೋಗಕ್ಷೇಮಂ ವಹಾಮ್ಯಹಮ್
ಯೋಗಕೇಮಂ ವಹಾಮಹಂ
ವೈ ೧೧2೧25. ಭೆ
ತನ್ನ ಭಕ್ತ ರ ಸಂರಕ್ಷ ಣೆಯ ಪೂರ್ಣ ಭಾರವನ್ನು ಭಗವಂತನು ಹೊತ್ತಿ ರುಷನು,
ತನ್ನನ್ನೇ ತ್ತ ದೃಢನಿಷ್ಠೆಯಿಂದ ಉಪಾಸಿಸುವ ನಿತ್ಯಾಭಿ ಯುಕ್ತರಾದ ಭಕ್ತರ
ಯೋಗಕ್ಷೇಮವನ್ನು ತಾನು ನಿರ್ವಹಿಸುವೆನೆಂದು ಶ್ರೀಕೃಷ್ಣನು ಗೀತೆಯಲ್ಲಿ
ಅಭಿವಚನವನ್ನು ನೀಡಿರುವನು. ನಮ್ಮಲ್ಲಿ ಆತ್ಮವಿಶ್ವಾಸ ಹಾಗೂ ಹೃದಯ
ಬಲವನ್ನು ಕುದುರಿಸುವ ಜಗದೀಶ್ವರನ ಆಶ್ವಾಸನದ ದಿವ್ಯ ಸಂಜೀವಿನಿಯು
ಮ ದ
ದೊರಕಿರುವಾಗ ಜನತೆಯು ಜೀವನದ ಹೋರಾಟದಲ್ಲಿ ಕಂಗೆಡುವುದೇಕೆ?
ಭಗವದ್ಭಕ್ತಿಯ ಭದ್ರವಾದತಳಹದಿಯ ಮೇಲೆ ಜೀವನದ ಉತ್ತು ೦ಗ ಸೌಧದ
ನಿರ್ಮಾಣಕಾರ್ಯದಲ್ಲಿ ನಾವು ದೃಢ ನಿರ್ಧಾರದಿಂದ ತೊಡಗಬಹುದು. ತನ್ನನ್ನು
ಮೊರಹೊಕ್ಕು ವ್ರಾರ್ಥಿಸುತ್ತಿ ರುವ ಭಕ್ತಃ ವರ್ಗವನ್ನು ರಕ್ಷಿಸುವುದು ತನ್ನ ವ್ರತವೆಂದು
ರಾಮಾವತಾರದಲ್ಲಿ ಭಗವಂತನು ಹೇಳಿದ್ದಾನೆ.
ಸಕೃದೇವ ಪ್ರಹನ್ನೋ ಯಃ ತವಾಸ್ಮೀತಿ ಚೆ ಯಾಚತೇ |
ಅಭಯಂ ಸರ್ವಭೂತೇಚ್ಛಃ ದದಾಮ್ಯೇತದ್ ವ್ರತಂ ಮಮ ॥
ಇದು ರಾಮಾವತಾರದಲ್ಲಿ ಶರಣಾಗತ ಭಕ್ತನಿಗೆ ಪರಮಾತ್ಮನೇ ನೀಡಿದ
ಅಭಯವಾಣಿಯಾಗಿದ್ದರೆ,
ಅನನ್ಯಾಶ್ಚಿಂತಯಂತೋ ಮಾಂ ಯೇ ಜನಾಃ ಪರ್ಯುಪಾಸತೇ
ತೇಷಾಂ ನಿತ್ಯಾಭಿಯುಕ್ತಾ ನಾಂ ಯೋಗಕ್ಷ್ನ ಮಂ ವಹಾಮ್ಯಹಂ 1
ಇದು ಕೃಷ್ಣಾ ವತಾರದಲ್ಲಿ ಭಗವಂತನು ನೀಡಿದ ಭರವಸೆಯ ಅಮೃತವಾಣಿ
ಆಗಿದೆ.
ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿ ।
“ಅರ್ಜುನಃ ನನ್ನ ಭಕ್ತನಿಗೆ ಎಂದೆಂದಿಗೂನಾಶವಿಲ್ಲವೆಂಬುದನ್ನು ದೃಢವಾಗಿ
ತಿಳಿದುಕೋ' ಎಂದು ಭಕ್ತಿಯ ಮಾರ್ಗದಲ್ಲಿ ಮುನ್ನಡೆಯುವವನಿಗೆ ಯಾವ
ಹಾನಿಯೂ ಇಲ್ಲವೆಂದು ಅಭಿನಿವೇಶದಿಂದ ಭಗವಂತನು ಸಾರಿದ್ದಾನೆ. ಇಂತಹ
ಸುಸ್ಪಷ್ಟ ಘೋಷಣೆಗಳಿರುವಾಗ ಜೀವಬ್ರಹ್ಮ್ಮೈಕ್ಯದಂತಹ ಅಪಕ್ವ ಹಾಗೂ
ಅಸಂಬದ್ಧ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ಭಕ್ತಿವಿರೋಧಿ
ಮಾರ್ಗಗಳನ್ನು ಬೋಧಿಸಿ ಜನರ ಮನಸ್ಸಿನಲ್ಲಿ ವೃಥಾ ಗೊಂದಲವೆಬ್ಬಿಸುವುದನ್ನು
ಕಂಡು ನಮ್ಮ ಮನಸ್ಸಿಗೆ ಬಹಳ ಸಂತಾಪವಾಗುತ್ತಿದೆ. ಭಗವಂತನೇ
ಭಕ್ತಿಮಾರ್ಗವನ್ನು ಶ್ರೇಷ್ಠವೂ ಪವಿತ್ರವೂ ಎನಿಸಿದ ನಿರಾತಂಕವಾದ ರಾಜಪಥ
ವೆಂದು ಘೋಷಿಸಿರುವಾಗ ಆ ಮಾರ್ಗದಲ್ಲಿ ನಡೆಯಲು ಸಂಕೋಚ,
ಸಂದೇಹಗಳೇಕೆ? ಇದು ಅಜ್ಞಾನಿಗಳಿಗೆ ಮಾತ್ರ ಮೀಸಲಾದ ದಾರಿಯೆಂದು
ಅದನ್ನು ಏಕೆ ಹೀಗಳೆಯುತ್ತಾರೆಂಬುದೇ ನಮಗೆ ಅರ್ಥವಾಗುತ್ತಿಲ್ಲ. ಜನರು
ಇಂತಹ ಅಸಂಬದ್ಧ ವಿಚಾರ ಗೊಂದಲಗಳಲ್ಲಿ ವೃಥಾ ಕಾಲಹರಣ ಮಾಡದೆ
ನಿಸಂಕೋಚಭಾವದಿಂದ ಭಕ್ತಿಯೋಗವನ್ನಾಶ್ರಯಿಸುವುದೇ ವಿಹಿತವಾಗಿದೆ.
ಕೌಂತೇಯ ಪ್ರತಿಜಾನೀಹಿ ನಮೇ ಭಕ್ತಃ ಪ್ರಣಶ್ಯತಿ ।
ಈ ವಾಕ್ಯದಲ್ಲಿ ಶ್ರೀಕೃಷ್ಣನು ತನ್ನ ಭಕ್ತರಿಗೆ ಎಂದಿಗೂ ನಾಶವಿಲ್ಲವೆಂದು
ಅರ್ಜುನನಿಂದ ಪ್ರತಿಜ್ಞೆ ಮಾಡಿಸುತ್ತಾನೆ. ಅದೇಕೆ? ತಾನು ಪ್ರತಿಜ್ಞೆ ಮಾಡದೆ
ಅರ್ಜುನನಿಂದ ಭಗವಂತನು ಏಕೆ ಪ್ರತಿಜ್ಞೆ ಮಾಡಿಸುತ್ತಾನೆ? ತನ್ನ
ಪ್ರತಿಜ್ಞೆಯಾದರೂ ಕೆಲವೊಮ್ಮೆ ಹುಸಿಯಾದೀತು. ತನ್ನ ಭಕ್ತರ ಪ್ರತಿಜ್ಞೆಯು
ಎಂದಿಗೂ ಹುಸಿಯಾಗಲಾರದೆಂದು ಶ್ರೀಕೃಷ್ಣನ ಆಶಯವಾಗಿದೆ.
ಸ್ವನಿಯಮಮಪಹಾಯ ಮತ್ ಪ್ರತಿಜ್ಞಾಂ
ಯತಮಧಿಕರ್ತುಮವಪ್ಪುತೋ ರಥಸ್ಥಃ
ಧೃತರಥಚರಣೋರಭ್ಯಯಾಚ್ಛಲದ್ದು:
ಹರಿರಿವ ಹಂತುಮಿಮಂ ಗತೋತ್ತರೀಯಃ ॥
ಎಂದು ಭಾಗವತದಲ್ಲಿ ಭೀಷ್ಮರು ವರ್ಣಿಸುತ್ತಾರೆ. ""ತನ್ನ ಭಕ್ತರ ಪ್ರತಿಜ್ಞೆಯು
ಹುಸಿಯಾಗಬಾರದೆಂದು ಚಕ್ರವನ್ನು ಧರಿಸಿ ತನ್ನ ಪ್ರತಿಜ್ಞೆಯನ್ನೇ ಭಕ್ತರಿಗಾಗಿ
ಭಂಗಗೊಳಿಸಲು ಅಣಿಯಾದ ಶ್ರೀಕೃಷ್ಣನ ಭಕ್ತಾನುಗ್ರಹಕಾರಕವಾದ ಆ
ಪ್ರಸನ್ನವದನವನ್ನು ನಾನೆಂತು ಮರೆಯಲಿ! ಮರಣಶಯ್ಯೆಯಲ್ಲಿ ದ್ವಭೀಷ್ಮರ
ಉದ್ಗಾರವಿದು. ಮಹಾಭಾರತ ಯುದ್ಧದಲ್ಲಿ ತಾನು ಆಯುಧವನ್ನು
ಧರಿಸುವುದಿಲ್ಲವೆಂದು ಶ್ರೀಕೃಷ್ಣನು ಪ್ರತಿಜ್ಞೆ ಮಾಡಿದ್ದರೂ ಕೃಷ್ಣನು ಆಯುಧವನ್ನು
ಧರಿಸುವಂತೆ ಮಾಡುವೆನೆಂಬ ಭೀಷ್ಮರ ಪ್ರತಿಜ್ಞೆಯನ್ನು ಪರಿಪಾಲಿಸುವುದಕ್ಕಾಗಿ
ಅವರ ಶಸ್ತ್ರಾಸ್ತ್ರಗಳಿಂದ ಪೀಡಿತನಾದಂತೆ ನಟಿಸಿ, ತನ್ನ ಪ್ರತಿಜ್ಞೆಯನ್ನು ಮುರಿದು
ಶಸ್ತ್ರಧಾರಣೆಯನ್ನು ಮಾಡುವನು. ತನ್ನ ಮಾತಿಗಿಂತಲೂ ತನ್ನ ಭಕ್ತರ ಮಾತಿಗೆ
ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದ ಶ್ರೀಕೃಷ್ಣನು ನಮ್ಮಲ್ಲಿ ವಿಶ್ವಾಸವನ್ನು
ಮೂಡಿಸುವುದಕ್ಕಾಗಿ ತನ್ನ ಪರಮಭಕ್ತ ಅರ್ಜುನನಿಂದಲೇ ""ನ ಮೇ ಭಕ್ತಃ
ಪ್ರಣಶ್ಯತಿ' ಎಂದು ಪ್ರತಿಜ್ಞೆ ಮಾಡಿಸುತ್ತಾನೆಂದು ಈ ಶ್ಲೋಕವನ್ನು ಸ್ವಾರಸ್ಯಕರ
ರೀತಿಯಲ್ಲಿ ಕೆಲವರು ವ್ಯಾಖ್ಯಾನ ಮಾಡಿರುವರು.
Bannanje Govindacharya (1936–2020)Bhagavad Gita Pravachana
ಶುಭ ಅಶುಭ ಭಲೈಃ ಏವಮ್ ಮೋಕ್ಷ್ಯಸೇ ಕರ್ಮ WOT ys |
ಸಂನ್ಯಾಸ ಯೋಗ ಯುಕ್ತ ಆತ್ಮಾ ವಿಮುಕ್ತಃ ಮಾಮ್ ಉಪೈಷ್ಯಸಿ-ಹೀಗೆ ಬದುಕಿದಾಗ, ಒಳಿತು-ಕೆಡುಕುಗಳ
ಕಡೆಗೆಳೆವ ಕರ್ಮದ ಸೆರೆಯಿಂದ ಪಾರಾಗುವೆ. ಫಲದ ಹಂಗು ತೊರೆದು ಕರ್ತವ್ಯದಲ್ಲಿ ಬಗೆ ತೊಡಗಿಸುತ್ತಾ ಸೆರೆ
ಕಳಚಿಕೊಂಡು ನನ್ನ ಬಳಿ ಸೇರುವೆ.
ನಾವು ಯಾವುದೇ ಕರ್ಮವನ್ನು “ನನಗೆ ಇಂತಹ ಫಲ ಬರಬೇಕು' ಎನ್ನುವ ಫಲದ ನಂಟಿನಿಂದ ಮತ್ತು 'ನಾನು
ಈ ಕರ್ಮವನ್ನು ಮಾಡಿದೆ' ಎನ್ನುವ ಅಹಮ್ ಇದ್ದು ಮಾಡಿದಾಗ ಆ ಕರ್ಮ ನಮಗೆ ಅಂಟುತ್ತದೆ. ಅದಕ್ಕೋಸ್ಕರ
ಹಿಂದಿನ ಕಾಲದಲ್ಲಿ “ಕರ್ಮಕರಿಷ್ಯೇ' ಎಂದು ಸಂಕಲ್ಪ ಮಾಡುವಾಗ ಈ ರೀತಿ ಹೇಳುತ್ತಿದ್ದರು:
ಭಗವತೋ ಬಲೇನ ಭಗವತೋ ವೀರ್ಯೇನ ಭಗವದಃ ತೇಜಸಾ |
ಭಗವತಾ ಕರ್ಮಣಾ ಕರ್ಮಕರಿಷ್ಯಾಮಿ ಭಗವತೋ ವಾಸುದೇವಸ್ಯಃ Il
“ನಾನು ಮಾಡುವ ಕರ್ಮ ನನ್ನ ಕರ್ಮವಲ್ಲ, ನನ್ನೊಳಗಿರುವ ಭಗವಂತ ಮಾಡುವ ಕರ್ಮ. ಅದರ ಹಿಂದಿರುವ
ಶಕ್ತಿ ಸಾಮರ್ಥ್ಯ ಎಲ್ಲವೂ ಭಗವಂತನದ್ದು, ನನ್ನದೇನೂ ಇಲ್ಲ”. ಇದು ಭಾಗವತಧರ್ಮದ ಸಂಕಲ್ಪ. ಭಗವದ್
ಪ್ರೀತ್ಯರ್ಥ ಮಾಡಿದ ಯಾವ ಕರ್ಮವೂ ನಮಗೆ ಬಂಧನವಾಗುವುದಿಲ್ಲ. ಬ್ರಹ್ಮಸೂತ್ರದಲ್ಲಿ ವೇದವ್ಯಾಸರು ಇದನ್ನು
ಹೀಗೆ ಹೇಳಿದ್ದಾರೆ: “ಭಗವಂತನ ಜ್ಞಾನ ನಮ್ಮೊಳಗೆ ದೃಢವಾಗಿ ಅಪರೋಕ್ಷವಾದಾಗ, ಹಿಂದೆ ಫಲಕಾಮನೆಯಿಂದ
ಮಾಡಿದ ಎಲ್ಲಾ ಪಾಪಗಳನ್ನು ಆ ಜ್ಞಾನಾಗ್ನಿ ಸುಟ್ಟುಬಿಡುತ್ತದೆ” ಎಂದು. ಆದ್ದರಿಂದ ಜ್ಞಾನ ಎಲ್ಲಕ್ಕಿಂತ ಶ್ರೇಷ್ಠ.
ಇದನ್ನು ನಾವು ಕಠೋಪನಿಷತ್ತಿನಲ್ಲಿ ಬರುವ ಯಮ ಮತ್ತು ನಚಿಕೇತನ ಸಂಭಾಷಣೆಯಲ್ಲಿ ಕಾಣುತ್ತೇವೆ. ಅಲ್ಲಿ
ನಚಿಕೇತ ಯಮನಲ್ಲಿ ಜ್ಞಾನವನ್ನು ವರವಾಗಿ ಬೇಡಿದಾಗ ಯಮ ಆತನಿಗೆ “ನಿನಗೆ ಎಷ್ಟು ಸಂಪತ್ತು ಬೇಕು ಅದನ್ನು
ಕೇಳು, ನಿನ್ನನ್ನು ಬೇಕಿದ್ದರೆ ದೊಡ್ಡ ಸಾಮ್ರಾಜ್ಯದ ಚಕ್ರವರ್ತಿಯನ್ನಾಗಿ ಮಾಡುತ್ತೇನೆ” ಎನ್ನುತ್ತಾನೆ. ಇದಕ್ಕೆ
ನಚಿಕೇತ ಹೇಳುತ್ತಾನೆ “ ಇದೆಲ್ಲವೂ ನರಕಕ್ಕೆ ಹೋಗುವ ಸಾಧನಗಳು, ಇದ್ಯಾವುದೂ ನನಗೆ ಬೇಡ. ನನಗೆ
ಭಗವಂತನ ಬಗ್ಗೆ ತಿಳಿಯಬೇಕು” ಎಂದು. ಹೀಗೆ ನಮ್ಮ ಪಾಪ ಕರ್ಮವನ್ನು ಸಂಪೂರ್ಣ ತೊಳೆದುಕೊಂಡು
ಮೋಕ್ಷಕ್ಕೆ ಹೋಗುವ ಏಕಮಾತ್ರ ಮಾರ್ಗ ಭಗವಂತನ ಬಗೆಗಿನ ಜ್ಞಾನ. ಭಗವದರ್ಪಣ ಬುದ್ಧಿಯಿಂದ ಕರ್ಮ
ಅನುಷ್ಠಾನ ಮಾಡಿದಾಗ ಶುಭಾಶುಭ ಕರ್ಮದ ಕಟ್ಟಿನಿಂದ ಬಿಡುಗಡೆ ಸಾಧ್ಯ. ಕೃಷ್ಣ ಹೇಳುತ್ತಾನೆ
“ಸಂನ್ಯಾಸಯೋಗಯುಕ್ತಾತ್ಮಾ ವಿಮುಕ್ತೋ ಮಾಮುಪೈಷ್ಯಸಿ” ಎಂದು. ಇಲ್ಲಿ ಹೇಳುವ ಸಂನ್ಯಾಸ ಒಂದು
ಯೋಗ(ಉಪಾಯ,. ಎಲ್ಲವನ್ನೂ ಭಗವಂತನಿಗೆ ಅರ್ಪಣೆ ಮಾಡಿ ಫಲಕಾಮನೆ ಇಲ್ಲದೆ ಭಗವದ್ ಪೂಜಾ
ದೃಷ್ಟಿಯಿಂದ ಮಾಡುವಂತಹ ಸಾತ್ವಿಕರ ಸಾಧನೆ. ಸಂನ್ಯಾಸ ಎಂದರೆ ಕಾಮ-ಸಂಕಲ್ಪವನ್ನು ಭಗವಂತನಲ್ಲಿ
ಅರ್ಪಿಸುವುದು. ಕಾಮ ಅಂದರೆ 'ಮಾಡಬೇಕು' ಎಂದು ಬಯಸುವುದು, ಸಂಕಲ್ಪ ಎಂದರೆ "ಮಾಡುತ್ತೇನೆ' ಎಂದು
ನಿರ್ಧರಿಸುವುದು. ಕಾಮಸಂಕಲ್ಪ ವರ್ಜಿತ-ಸಂನ್ಯಾಸ. ಹೀಗೆ ಭಾಗವತ ಧರ್ಮ ಪಾಲನೆ ಮಾಡಿದರೆ ಸುಲಭವಾಗಿ
ಭಗವಂತನನ್ನು ಸೇರಬಹುದು-“ನಿಶ್ಚಿತವಾಗಿಯೂ ನನ್ನನ್ನು ಸೇರುತ್ತಾರೆ” ಎನ್ನುವುದು ಕೃಷ್ಣನ ಭರವಸೆ.
Bibek Debroy (1955–2024)The Bhagavad Gita
(28)
‘In this way, you will be freed from the bondage of the fruits of righteous
and evil action. With your self in the yoga of sannyasa,32 freed, you will
attain me.’