9.29

समोऽहं सर्वभूतेषु न मे द्वेष्योऽस्ति न प्रियः ।
ये भजन्ति तु मां भक्त्या मयि ते तेषु चाप्यहम् ॥
samo'haṃ sarvabhūteṣu na me dveṣyo'sti na priyaḥ |
ye bhajanti tu māṃ bhaktyā mayi te teṣu cāpyaham ||
Sri Madhvacharya (1238–1317)Bhagavad Gita Tatparya Nirnaya
‘नास्य भक्तोऽपि यो द्वेष्यो न चाभक्तोऽपि यः प्रियः। किन्तु भक्त्यानुसारेण फलदोऽतः समो हरिः’ इति पाद्मे। प्रीत्या मयि ते॥29॥
Swami Sivananda (1887–1963)Bhagavad Gita
29. The same am I to all beings; to Me there is none hateful or dear; but those who worship Me with devotion are in Me and I am also in them.
Sri Vishwesha Tirtharu (1931–2019)Gitasaroddhara
9.22–9.31 · ಯೋಗಕ್ಷೇಮಂ ವಹಾಮ್ಯಹಮ್
ಯೋಗಕೇಮಂ ವಹಾಮಹಂ ವೈ ೧೧2೧25. ಭೆ ತನ್ನ ಭಕ್ತ ರ ಸಂರಕ್ಷ ಣೆಯ ಪೂರ್ಣ ಭಾರವನ್ನು ಭಗವಂತನು ಹೊತ್ತಿ ರುಷನು, ತನ್ನನ್ನೇ ತ್ತ ದೃಢನಿಷ್ಠೆಯಿಂದ ಉಪಾಸಿಸುವ ನಿತ್ಯಾಭಿ ಯುಕ್ತರಾದ ಭಕ್ತರ ಯೋಗಕ್ಷೇಮವನ್ನು ತಾನು ನಿರ್ವಹಿಸುವೆನೆಂದು ಶ್ರೀಕೃಷ್ಣನು ಗೀತೆಯಲ್ಲಿ ಅಭಿವಚನವನ್ನು ನೀಡಿರುವನು. ನಮ್ಮಲ್ಲಿ ಆತ್ಮವಿಶ್ವಾಸ ಹಾಗೂ ಹೃದಯ ಬಲವನ್ನು ಕುದುರಿಸುವ ಜಗದೀಶ್ವರನ ಆಶ್ವಾಸನದ ದಿವ್ಯ ಸಂಜೀವಿನಿಯು ಮ ದ ದೊರಕಿರುವಾಗ ಜನತೆಯು ಜೀವನದ ಹೋರಾಟದಲ್ಲಿ ಕಂಗೆಡುವುದೇಕೆ? ಭಗವದ್ಭಕ್ತಿಯ ಭದ್ರವಾದತಳಹದಿಯ ಮೇಲೆ ಜೀವನದ ಉತ್ತು ೦ಗ ಸೌಧದ ನಿರ್ಮಾಣಕಾರ್ಯದಲ್ಲಿ ನಾವು ದೃಢ ನಿರ್ಧಾರದಿಂದ ತೊಡಗಬಹುದು. ತನ್ನನ್ನು ಮೊರಹೊಕ್ಕು ವ್ರಾರ್ಥಿಸುತ್ತಿ ರುವ ಭಕ್ತಃ ವರ್ಗವನ್ನು ರಕ್ಷಿಸುವುದು ತನ್ನ ವ್ರತವೆಂದು ರಾಮಾವತಾರದಲ್ಲಿ ಭಗವಂತನು ಹೇಳಿದ್ದಾನೆ. ಸಕೃದೇವ ಪ್ರಹನ್ನೋ ಯಃ ತವಾಸ್ಮೀತಿ ಚೆ ಯಾಚತೇ | ಅಭಯಂ ಸರ್ವಭೂತೇಚ್ಛಃ ದದಾಮ್ಯೇತದ್‌ ವ್ರತಂ ಮಮ ॥ ಇದು ರಾಮಾವತಾರದಲ್ಲಿ ಶರಣಾಗತ ಭಕ್ತನಿಗೆ ಪರಮಾತ್ಮನೇ ನೀಡಿದ ಅಭಯವಾಣಿಯಾಗಿದ್ದರೆ, ಅನನ್ಯಾಶ್ಚಿಂತಯಂತೋ ಮಾಂ ಯೇ ಜನಾಃ ಪರ್ಯುಪಾಸತೇ ತೇಷಾಂ ನಿತ್ಯಾಭಿಯುಕ್ತಾ ನಾಂ ಯೋಗಕ್ಷ್ನ ಮಂ ವಹಾಮ್ಯಹಂ 1 ಇದು ಕೃಷ್ಣಾ ವತಾರದಲ್ಲಿ ಭಗವಂತನು ನೀಡಿದ ಭರವಸೆಯ ಅಮೃತವಾಣಿ ಆಗಿದೆ. ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿ । “ಅರ್ಜುನಃ ನನ್ನ ಭಕ್ತನಿಗೆ ಎಂದೆಂದಿಗೂನಾಶವಿಲ್ಲವೆಂಬುದನ್ನು ದೃಢವಾಗಿ ತಿಳಿದುಕೋ' ಎಂದು ಭಕ್ತಿಯ ಮಾರ್ಗದಲ್ಲಿ ಮುನ್ನಡೆಯುವವನಿಗೆ ಯಾವ ಹಾನಿಯೂ ಇಲ್ಲವೆಂದು ಅಭಿನಿವೇಶದಿಂದ ಭಗವಂತನು ಸಾರಿದ್ದಾನೆ. ಇಂತಹ ಸುಸ್ಪಷ್ಟ ಘೋಷಣೆಗಳಿರುವಾಗ ಜೀವಬ್ರಹ್ಮ್ಮೈಕ್ಯದಂತಹ ಅಪಕ್ವ ಹಾಗೂ ಅಸಂಬದ್ಧ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ಭಕ್ತಿವಿರೋಧಿ ಮಾರ್ಗಗಳನ್ನು ಬೋಧಿಸಿ ಜನರ ಮನಸ್ಸಿನಲ್ಲಿ ವೃಥಾ ಗೊಂದಲವೆಬ್ಬಿಸುವುದನ್ನು ಕಂಡು ನಮ್ಮ ಮನಸ್ಸಿಗೆ ಬಹಳ ಸಂತಾಪವಾಗುತ್ತಿದೆ. ಭಗವಂತನೇ ಭಕ್ತಿಮಾರ್ಗವನ್ನು ಶ್ರೇಷ್ಠವೂ ಪವಿತ್ರವೂ ಎನಿಸಿದ ನಿರಾತಂಕವಾದ ರಾಜಪಥ ವೆಂದು ಘೋಷಿಸಿರುವಾಗ ಆ ಮಾರ್ಗದಲ್ಲಿ ನಡೆಯಲು ಸಂಕೋಚ, ಸಂದೇಹಗಳೇಕೆ? ಇದು ಅಜ್ಞಾನಿಗಳಿಗೆ ಮಾತ್ರ ಮೀಸಲಾದ ದಾರಿಯೆಂದು ಅದನ್ನು ಏಕೆ ಹೀಗಳೆಯುತ್ತಾರೆಂಬುದೇ ನಮಗೆ ಅರ್ಥವಾಗುತ್ತಿಲ್ಲ. ಜನರು ಇಂತಹ ಅಸಂಬದ್ಧ ವಿಚಾರ ಗೊಂದಲಗಳಲ್ಲಿ ವೃಥಾ ಕಾಲಹರಣ ಮಾಡದೆ ನಿಸಂಕೋಚಭಾವದಿಂದ ಭಕ್ತಿಯೋಗವನ್ನಾಶ್ರಯಿಸುವುದೇ ವಿಹಿತವಾಗಿದೆ. ಕೌಂತೇಯ ಪ್ರತಿಜಾನೀಹಿ ನಮೇ ಭಕ್ತಃ ಪ್ರಣಶ್ಯತಿ । ಈ ವಾಕ್ಯದಲ್ಲಿ ಶ್ರೀಕೃಷ್ಣನು ತನ್ನ ಭಕ್ತರಿಗೆ ಎಂದಿಗೂ ನಾಶವಿಲ್ಲವೆಂದು ಅರ್ಜುನನಿಂದ ಪ್ರತಿಜ್ಞೆ ಮಾಡಿಸುತ್ತಾನೆ. ಅದೇಕೆ? ತಾನು ಪ್ರತಿಜ್ಞೆ ಮಾಡದೆ ಅರ್ಜುನನಿಂದ ಭಗವಂತನು ಏಕೆ ಪ್ರತಿಜ್ಞೆ ಮಾಡಿಸುತ್ತಾನೆ? ತನ್ನ ಪ್ರತಿಜ್ಞೆಯಾದರೂ ಕೆಲವೊಮ್ಮೆ ಹುಸಿಯಾದೀತು. ತನ್ನ ಭಕ್ತರ ಪ್ರತಿಜ್ಞೆಯು ಎಂದಿಗೂ ಹುಸಿಯಾಗಲಾರದೆಂದು ಶ್ರೀಕೃಷ್ಣನ ಆಶಯವಾಗಿದೆ. ಸ್ವನಿಯಮಮಪಹಾಯ ಮತ್‌ ಪ್ರತಿಜ್ಞಾಂ ಯತಮಧಿಕರ್ತುಮವಪ್ಪುತೋ ರಥಸ್ಥಃ ಧೃತರಥಚರಣೋರಭ್ಯಯಾಚ್ಛಲದ್ದು: ಹರಿರಿವ ಹಂತುಮಿಮಂ ಗತೋತ್ತರೀಯಃ ॥ ಎಂದು ಭಾಗವತದಲ್ಲಿ ಭೀಷ್ಮರು ವರ್ಣಿಸುತ್ತಾರೆ. ""ತನ್ನ ಭಕ್ತರ ಪ್ರತಿಜ್ಞೆಯು ಹುಸಿಯಾಗಬಾರದೆಂದು ಚಕ್ರವನ್ನು ಧರಿಸಿ ತನ್ನ ಪ್ರತಿಜ್ಞೆಯನ್ನೇ ಭಕ್ತರಿಗಾಗಿ ಭಂಗಗೊಳಿಸಲು ಅಣಿಯಾದ ಶ್ರೀಕೃಷ್ಣನ ಭಕ್ತಾನುಗ್ರಹಕಾರಕವಾದ ಆ ಪ್ರಸನ್ನವದನವನ್ನು ನಾನೆಂತು ಮರೆಯಲಿ! ಮರಣಶಯ್ಯೆಯಲ್ಲಿ ದ್ವಭೀಷ್ಮರ ಉದ್ಗಾರವಿದು. ಮಹಾಭಾರತ ಯುದ್ಧದಲ್ಲಿ ತಾನು ಆಯುಧವನ್ನು ಧರಿಸುವುದಿಲ್ಲವೆಂದು ಶ್ರೀಕೃಷ್ಣನು ಪ್ರತಿಜ್ಞೆ ಮಾಡಿದ್ದರೂ ಕೃಷ್ಣನು ಆಯುಧವನ್ನು ಧರಿಸುವಂತೆ ಮಾಡುವೆನೆಂಬ ಭೀಷ್ಮರ ಪ್ರತಿಜ್ಞೆಯನ್ನು ಪರಿಪಾಲಿಸುವುದಕ್ಕಾಗಿ ಅವರ ಶಸ್ತ್ರಾಸ್ತ್ರಗಳಿಂದ ಪೀಡಿತನಾದಂತೆ ನಟಿಸಿ, ತನ್ನ ಪ್ರತಿಜ್ಞೆಯನ್ನು ಮುರಿದು ಶಸ್ತ್ರಧಾರಣೆಯನ್ನು ಮಾಡುವನು. ತನ್ನ ಮಾತಿಗಿಂತಲೂ ತನ್ನ ಭಕ್ತರ ಮಾತಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದ ಶ್ರೀಕೃಷ್ಣನು ನಮ್ಮಲ್ಲಿ ವಿಶ್ವಾಸವನ್ನು ಮೂಡಿಸುವುದಕ್ಕಾಗಿ ತನ್ನ ಪರಮಭಕ್ತ ಅರ್ಜುನನಿಂದಲೇ ""ನ ಮೇ ಭಕ್ತಃ ಪ್ರಣಶ್ಯತಿ' ಎಂದು ಪ್ರತಿಜ್ಞೆ ಮಾಡಿಸುತ್ತಾನೆಂದು ಈ ಶ್ಲೋಕವನ್ನು ಸ್ವಾರಸ್ಯಕರ ರೀತಿಯಲ್ಲಿ ಕೆಲವರು ವ್ಯಾಖ್ಯಾನ ಮಾಡಿರುವರು.
Bannanje Govindacharya (1936–2020)Bhagavad Gita Pravachana
ಸಮಃ ಅಹಮ್‌ ಸರ್ವಭೂತೇಷು ನ ಮೇ ದ್ವೇಷ್ಯಃ ಅಸ್ತಿ ನಪ್ರಿಯಃ | ಯೇ ಭಜಂತಿ ತು ಮಾಮ್‌ ಭಕ್ತಾ ಮಯಿ ತೇ ತೇಷು ಚ ಅಪಿ ಅಹಮ್‌-ಎಲ್ಲಾ ಜೀವಿಗಳೂ ನನಗೆ ಒಂದೆ. ನನಗೆ ಹಗೆಯನೂ ಇಲ್ಲ, ಗೆಳೆಯನೂ ಇಲ್ಲ. ಆದರೆ ಯಾರು ನನ್ನನ್ನು ಭಕ್ತಿಯಿಂದ ಒಲಿಸುತ್ತಾರೋ ಅವರು ನನ್ನ ವಶ; ನಾನು ಅವರ ವಶ. ಭಗವಂತನಿಗೆ ಯಾರ ಮೇಲೂ ಹಗೆಯಾಗಲೀ ಅಥವಾ ಗೆಳೆತನವಾಗಲೀ ಇಲ್ಲ. ಆತ ಪ್ರೀತಿಸುವುದು ವ್ಯಕ್ತಿಯನ್ನಲ್ಲ ಬದಲಿಗೆ ವ್ಯಕ್ತಿಯಲ್ಲಿರುವ ಜ್ಞಾನವನ್ನು ಮತ್ತು ಭಕ್ತಿಯನ್ನು. ಅರ್ಹತೆ ಇದ್ದವರು ಭಗವಂತನನ್ನು ಭಕ್ತಿಯಿಂದ ಒಲಿಸುತ್ತಾರೆ. ನಿಜವಾದ ಭಕ್ತರಿಗೆ ಭಗವಂತ ವಶನಾಗುತ್ತಾನೆ.
Bibek Debroy (1955–2024)The Bhagavad Gita
(29) ‘I am the same to all beings. I have no one I hate, nor anyone I love. But those who worship me with devotion, they are established in me. And I am established in them.’