मां हि पार्थ व्यपाश्रित्य येऽपि स्युः पापयोनयः ।
स्त्रियो वैश्यास्तथा शूद्रास्तेऽपि यान्ति परां गतिम् ॥
māṃ hi pārtha vyapāśritya ye'pi syuḥ pāpayonayaḥ |
striyo vaiśyāstathā śūdrāste'pi yānti parāṃ gatim ||
Sri Madhvacharya (1238–1317)Bhagavad Gita Tatparya Nirnaya
9.32–9.34
‘पापादिकारिताश्चैव पुंसां स्वाभाविका अपि।
विप्रत्वाद्यास्तत्र पुण्याः स्वाभाव्या एव मुक्तिगाः।
यान्ति स्त्रीत्वं पुमांसोऽपि पापतः कामतोऽपि वा।
न स्त्रियो यान्ति पुंस्त्वं तु स्वभावादेव याः स्त्रियः।
पुंसा सहैव पुन्देहस्थितिः स्याद्वरदानतः।
तज्जन्मनि वराः पापजातेभ्यो निजसस्त्रियः।
सर्वेषामपि जीवानामन्त्यदेहो यथा निजः।
मुक्तौ च निजभावः स्यात् कर्मभोगान्ततोऽपि च’
-इति भविष्यत्पर्ववचनात् पापयोनयः पुण्या इति विशेषणम्॥32-34॥
Swami Sivananda (1887–1963)Bhagavad Gita
32. For, taking refuge in Me, they also, who, O Arjuna, may be of sinful birth—women,
Vaisyas as well as Sudras—attain the Supreme Goal!
Bannanje Govindacharya (1936–2020)Bhagavad Gita Pravachana
ಮಾಮ್ ಹಿ ಪಾರ್ಥ ವ್ಯಪಾಶ್ರಿತ್ಯ ಯೇ ಅಪಿ ಸ್ಯುಃ ಪಾಪಯೋನಯಃ |
ಸ್ತ್ರಿಯಃ ವೈಶ್ಯಾಃ ತಥಾ ಶೂದ್ರಾಃ ತೇ ಅಪಿ ಯಾಂತಿ ಪರಾಮ್ ಗತಿಮ್ -ಪಾರ್ಥಾ, ನನಗೆ ಶರಣು ಬಂದವರು
ಯಾವುದೋ ಪಾಪದಿಂದ ಹೆಣ್ಣಾಗಿ, ವೈಶ್ಯರಾಗಿ, ಶೂದ್ರರಾಗಿ ಸಾಧನೆಯಿಂದ ವಂಚಿತರಾದರೂ ಹಿರಿಯ
ನೆಲೆಯಾದ ನನ್ನನ್ನೇ ಪಡೆಯುತ್ತಾರೆ.
ಈ ಶ್ಲೋಕ ಕೆಲವು ಭಾಷ್ಯಕಾರರಿಗೇ ಗೊಂದಲ ಮಾಡಿದ ಶ್ಲೋಕ. ಮಧ್ವಾಚಾರ್ಯರು ಈ ಶ್ಲೋಕಕ್ಕೆ ಭಾಷ್ಯ
ನೀಡುವ ತನಕ ಹೆಚ್ಚಿನವರು ಇದಕ್ಕೆ ತಪ್ಪು ಅರ್ಥವನ್ನು ಕಲ್ಪಿಸಿಕೊಂಡಿದ್ದರು. ಮೇಲ್ನೋಟದಲ್ಲಿ ಈ ಶ್ಲೋಕವನ್ನು
ನೋಡಿದಾಗ “ಸ್ತ್ರೀಯರು, ವೈಶ್ಯರು ಮತ್ತು ಶೂದ್ರರು ಪಾಪಿಗಳು” ಎಂದು ತಿಳಿಯುವ ಅಪಾಯ ಹೆಚ್ಚು. ಇಲ್ಲಿ ಕೃಷ್ಣ
ಹೇಳುತ್ತಿರುವುದು ಸ್ತ್ರೀ ಜೀವದ ಬಗ್ಗೆ ಅಲ್ಲ. ಸ್ತ್ರೀಯರು ಪಾಪಿಗಳಲ್ಲ. ಯಾವುದೋ ಪಾಪದಿಂದ ಅಥವಾ
ಶಾಪದಿಂದ ಸ್ತ್ರೀ ಜನ್ಮ ಪಡೆದ ಗಂಡು "ಸ್ತ್ರೀ ಪಾಪಯೋನಿ' ಹೊರತು ಹೆಣ್ಣಾಗಿರುವ ಸ್ತ್ರೀಜೀವ ಪಾಪಯೋನಿಯಲ್ಲ.
ಕೃಷ್ಣ ಹೇಳುತ್ತಾನೆ “ಯಾವುದೋ ಪಾಪದಿಂದ ಹೀನಯೋನಿ ಬಂದಿರಬಹುದು, ಆದರೆ ಅಂತವರು ನನ್ನನ್ನು
ಆರಾಧಿಸಿ ಎಲ್ಲಾ ದೋಷಗಳಿಂದ ಬಿಡುಗಡೆ ಹೊಂದಬಹುದು” ಎಂದು. ಇದಕ್ಕೆ ಉತ್ತಮ ದೃಷ್ಟಾಂತ
ನರಕಾಸುರನ ಸೆರೆಯಲ್ಲಿದ್ದ ಹದಿನಾರು ಸಾವಿರದ ನೂರು ಮಂದಿ ಸ್ತ್ರೀಯರು. ಇವರು ಅಗ್ನಿ ಪುತ್ರರು.
ಭಗವಂತನ ಪತ್ನಿಯರಾಗಬೇಕು ಎಂಬ ಆಸೆಯಿಂದ ತಮ್ಮ ಎತ್ತರವನ್ನು ಕಳೆದುಕೊಂಡು ಭೂಮಿಯಲ್ಲಿ ಹೆಣ್ಣಾಗಿ
ಹುಟ್ಟಿ ನರಕಾಸುರನ ಸೆರೆಮನೆಯಲ್ಲಿ ಸಿಕ್ಕಿ ಒದ್ದಾಡಿದವರು. ಕೃಷ್ಣ ಅವರನ್ನು ಮದುವೆಯಾಗಿ ಉದ್ದರಿಸಿದ.
ನಂದಗೋಪ ಮತ್ತು ಯಶೋದೆ ಇವರು ಮೂಲತಃ ದೇವಾಂಶ ಸಂಭೂತರು. 'ದ್ರೋಣ' ನಾಮಕ ವಸು
ನಂದಗೋಪ ಮತ್ತು FT ನಾಮಕ ठक ಯಶೋದೆ. ಅವರು ಭೂಮಿಯಲ್ಲಿ ವೈಶ್ಯರಾಗಿ ಹುಟ್ಟಿದರು.
ಭಗವಂತ ತನ್ನ ಅವತಾರದಲ್ಲಿ ಅವರ ಮನೆಯಲ್ಲಿ ಬೆಳೆದು ಅವರನ್ನು ಉದ್ದರಿಸಿದ.
ಮಹಾ ಚೇತನ ವಿಧುರ. ಈತ ಸ್ವಯಂ ಧರ್ಮರಾಯ. ವೇದವ್ಯಾಸರ ಮಗನಾಗಿದ್ದರೂ ಕೂಡಾ ಶಾಪದ
ಫಲವಾಗಿ *ಕೆಲಸದವಳ ಮಗ' ಎಂದು ಹೇಳಿಸಿಕೊಂಡು ಬದುಕಬೇಕಾಗಿ ಬಂತು. ಸಂಧಾನಕ್ಕೆ ಬಂದ ಕೃಷ್ಣ-
ದುರ್ಯೋಧನ, ಭೀಷ್ಮ, ದ್ರೋಣರ ಮನೆಗೆ ಹೋಗದೆ ನೇರವಾಗಿ ವಿಧುರನ ಮನೆಗೆ ಬಂದು ಅಲ್ಲಿ ವಿಧುರನಿಂದ
ಸರಳ ಸತ್ಕಾರ ಸೇವಿಸಿ ಆತನನ್ನು ಪ್ರಸನ್ನನಾಗಿ ಮಾಡಿದ. ಇಲ್ಲಿ ಭಗವಂತ ಬಯಸುವುದು ಪ್ರದರ್ಶನವನ್ನಲ್ಲ
ಬದಲಿಗೆ ಪ್ರೀತಿಯನ್ನು ಎನ್ನುವುದು ಸ್ಪಷ್ಟವಾಗುತ್ತದೆ. ಆತನಿಗೆ ಅಂತರಾತ್ಮ ಮುಖ್ಯ, ಮುಖವಾಡವಲ್ಲ.
ಹೀಗೆ ಕೃಷ್ಣ ಸ್ಪಷ್ಟವಾಗಿ ಹೇಳುತ್ತಾನೆ. “ಯಾವುದೋ ಪಾಪ ಕರ್ಮದಿಂದ ಅಥವಾ ಶಾಪದಿಂದ
ಹೀನಯೋನಿಯಾಗಿ ಹುಟ್ಟಿದವರು ನನ್ನನ್ನು ಆಶ್ರಯಿಸಿದಾಗ ಪಾಪದಿಂದ ಕಳಚಿಕೊಂಡು ನನ್ನನ್ನು ಸೇರುತ್ತಾರೆ”
Bibek Debroy (1955–2024)The Bhagavad Gita
(32)
‘O son of Pritha!35 Even those who are of evil birth, women, vaisbyas and
shudras,36 having sought refuge in me, they will certainly attain supreme
liberation.’